ವಿಜಯಪುರ: ಡಿ.ದೇವರಾಜ್ ಅರಸು ಹಿಂದುಳಿದ ವರ್ಗಗಳ ಅಭಿವೃದ್ದಿ ನಿಗಮದಿಂದ ಅನುಷ್ಠಾನಗೊಳಿಸುವ ವಿವಿಧ ಯೋಜನೆಗಳಡಿ ಸಾಲ-ಸೌಲಭ್ಯ ಪಡೆಯಲು ಹಿಂದುಳಿದ ವರ್ಗದವರಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಗಂಗಾ ಕಲ್ಯಾಣ ಯೋಜನೆ, ಅರಿವು ಶೈಕ್ಷಣಿಕ ನೇರ ಸಾಲ ಯೋಜನೆ(ಹೊಸದು), ವಿದೇಶ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗಕ್ಕೆ ಸಾಲ ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆ, ಸ್ವಯಂ ಉದ್ಯೋಗ ನೇರಸಾಲ (ಬ್ಯಾಂಕುಗಳ ಸಹಯೋಗದೊಂದಿಗೆ), ಸ್ವಾತಂತ್ರö್ಯ ಅಮೃತ ಮಹೋತ್ಸವದ ಮುನ್ನಡೆ ಯೋಜನೆ ಹಾಗೂ ಹೊಲಿಗೆ ಯಂತ್ರ ವಿತರಣೆ ಯೋಜನೆಯಡಿ ಸಾಲ-ಸೌಲಭ್ಯ ಪಡೆಯಲಿಚ್ಚಿಸುವವರು ಸೇವಾ ಸಿಂಧು ಪೋರ್ಟಲ್ https://www.sevasindhu.karnataka.gov.in ಮೂಲಕ ಗ್ರಾಮ ಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಬಹುದಾಗಿದ್ದು, ಅರ್ಜಿ ಸಲ್ಲಿಸಲು ದಿನಾಂಕ : ೩೧-೦೮-೨೦೨೪ ಕೊನೆಯ ದಿನಾಂಕವಾಗಿದೆ.
ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ನಿಗಮದ ವೆಬ್‌ಸೈಟ್ https://www.dbcds.karnataka.gov.in ಅಥವಾ ಸಹಾಯವಾಣಿ ಸಂಖ್ಯೆ ೦೮೦-೨೨೩೭೪೮೩೨, ೮೦೫೦೭೭೦೦೦೪ ಸಂಖ್ಯೆಗೆ ಸಂಪರ್ಕಿಸಬಹುದಾಗಿದೆ ಎಂದು ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Subscribe to Updates
Get the latest creative news from FooBar about art, design and business.
ಡಿ.ದೇವರಾಜ್ ಅರಸು ಹಿಂದುಳಿದ ವರ್ಗಗಳ ಅಭಿವೃದ್ದಿ ನಿಗಮ: ಸಾಲ-ಸೌಲಭ್ಯಕ್ಕೆ ಅರ್ಜಿ ಆಹ್ವಾನ
Related Posts
Add A Comment
