ಕರ್ನಾಟಕ ಅಲೆಮಾರಿ ಅರೆ ಅಲೆಮಾರಿ ಅಭಿವೃದ್ದಿ ನಿಗಮ: ಸಾಲ-ಸೌಲಭ್ಯಕ್ಕೆ ಅರ್ಜಿ ಆಹ್ವಾನ
ವಿಜಯಪುರ: ಕರ್ನಾಟಕ ಅಲೆಮಾರಿ ಅರೆ ಅಲೆಮಾರಿ ಅಭಿವೃದ್ದಿ ನಿಗಮದಿಂದ ಅನುಷ್ಠಾನಗೊಳಿಸುವ ವಿವಿಧ ಯೋಜನೆಗಳಡಿ ಸಾಲ-ಸೌಲಭ್ಯ ಪಡೆಯಲು ಆಸಕ್ತ ಅರ್ಹರಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ನಿಗಮದಿಂದ ಅನುಷ್ಠಾನಗೊಳಿಸುತ್ತಿರುವ ಸ್ವಯಂ ಉದ್ಯೊಗ ನೇರ ಸಾಲ ಯೋಜನೆ, ಗಂಗಾ ಕಲ್ಯಾಣ ಯೋಜನೆ, ಅರಿವು ಶೈಕ್ಷಣಿಕ ನೇರ ಸಾಲ ಯೋಜನೆ(ಹೊಸದು), ವಿದೇಶ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗಕ್ಕೆ ಸಾಲ ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆ, ಸ್ವಯಂ ಉದ್ಯೋಗ ನೇರಸಾಲ (ಬ್ಯಾಂಕುಗಳ ಸಹಯೋಗದೊಂದಿಗೆ) ಯೋಜನೆಯಡಿ ಸಾಲ-ಸೌಲಭ್ಯ ಪಡೆಯಲಿಚ್ಚಿಸುವವರು ಸೇವಾ ಸಿಂಧು ಪೋರ್ಟಲ್ https://www.sevasindhu.karnataka.gov.inhttps://www.kaad.karnataka.gov.inಮೂಲಕ ಗ್ರಾಮ ಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಬಹುದಾಗಿದ್ದು, ಅರ್ಜಿ ಸಲ್ಲಿಸಲು ದಿನಾಂಕ : ೩೧-೦೮-೨೦೨೪ ಕೊನೆಯ ದಿನಾಂಕವಾಗಿದೆ.
ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ನಿಗಮದ ವೆಬ್‌ಸೈಟ್https://www.kaad.karnataka.gov.in ಅಥವಾ ಸಹಾಯವಾಣಿ ಸಂಖ್ಯೆ ೦೮೦-೨೨೩೭೪೮೩೨, ೮೦೫೦೭೭೦೦೦೪, ವಿಜಯಪುರ ಜಿಲ್ಲಾ ಕಚೇರಿ ದೂರವಾಣಿ ೦೮೩೫೨-೨೫೮೧೨೮ ಸಂಖ್ಯೆಗೆ ಸಂಪರ್ಕಿಸಬಹುದಾಗಿದೆ ಎಂದು ನಿಗಮದ ಜಿಲ್ಲಾ ವ್ಯವಸ್ಥಾಪಕ ತಿಪ್ಪನಗೌಡ ಕುಮಸಗಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
