ಸಮುದಾಯ ಭವನಗಳ ನಿರ್ಮಾಣಕ್ಕೆ ರೂ.೫೦ ಲಕ್ಷ ಮಂಜೂರು :ಯತ್ನಾಳ
ವಿಜಯಪುರ: ೨೦೨೪-೨೫ನೇ ಸಾಲಿಗೆ ನಗರ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ನಿಧಿಯಡಿ ನಗರ ಮತಕ್ಷೇತ್ರ ವ್ಯಾಪ್ತಿಯಲ್ಲಿ ವಿವಿಧ ಸಮುದಾಯ ಭವನಗಳ ನಿರ್ಮಾಣಕ್ಕೆ ರೂ.೫೦ ಲಕ್ಷ ಅನುದಾನ ಮಂಜೂರು ಮಾಡಲಾಗಿದೆ ಎಂದು ನಗರ ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ ಅವರು ತಿಳಿಸಿದ್ದಾರೆ.
ವಿಜಯಪುರ ನಗರ ಮತಕ್ಷೇತ್ರ ವ್ಯಾಪ್ತಿಯ ವಾರ್ಡ ನಂ.೨ರ ಗೋಂದಳಿ ಗಲ್ಲಿಯ ಜೈ ಅಂಬಾಭವಾನಿ ಮಂದಿರ ಹತ್ತಿರ ಸಮುದಾಯ ಭವನ ನಿರ್ಮಾಣ ಕಾಮಗಾರಿಗೆ ರೂ.೪ ಲಕ್ಷ, ಆಶ್ರಯ ಕಾಲೊನಿಯ ಶಂಕರಲಿಂಗ ಗುಡಿ ರಸ್ತೆಯ ವಾರಿ ಮಾರುತಿ ದೇವಸ್ಥಾನ ಹತ್ತಿರ ಸಮುದಾಯ ಭವನ ನಿರ್ಮಾಣಕ್ಕೆ ರೂ.೧೦ ಲಕ್ಷ, ಅಡವಿ ಶಂಕರಲಿಂಗ ದೇವಸ್ಥಾನದ ಹತ್ತಿರ ಸಮುದಾಯ ಭವನ ನಿರ್ಮಾಣಕ್ಕೆ ರೂ.೧೦ ಲಕ್ಷ, ವಾರ್ಡ ನಂ.೨೧ ರ ವಿವೇಕ ನಗರ (ಪಶ್ಚಿಮ)ದ ಜಾಗೃತ ಹನುಮಾನ ದೇವಸ್ಥಾನ ಹತ್ತಿರ ಸಮುದಾಯ ಭವನ ನಿರ್ಮಾಣಕ್ಕೆ ರೂ.೧೦ ಲಕ್ಷ, ವಾರ್ಡ ನಂ.೨೬ರ ದೇಸಾಯಿ ಕಾಲೊನಿ (ಸರ್ ದೇಶಪಾಂಡೆ ಕಾಲೊನಿ)ಯ ಮಹಾಲಕ್ಷ್ಮಿ ದೇವಸ್ಥಾನದ ಹತ್ತಿರ ಸಮುದಾಯ ಭವನ ನಿರ್ಮಾಣಕ್ಕೆ ರೂ.೧೦ ಲಕ್ಷ, ವಾರ್ಡ ನಂ.೩೫ ರ ಲಿಂಗರಾಜ ಕಾಲೋನಿಯ ಬಸವಣ್ಣಪ್ಪ ದೇವಸ್ಥಾನದ ಹತ್ತಿರ ಸಮುದಾಯ ಭವನ ನಿರ್ಮಾಣಕ್ಕೆ ರೂ.೮ ಲಕ್ಷ ಅನುದಾನ ಮಂಜೂರು ಮಾಡಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

