ವಿಜಯಪುರ: ಕರ್ನಾಟಕ ಒಕ್ಕಲಿಗ ಸಮುದಾಯ ಅಭಿವೃದ್ದಿ ನಿಗಮದಿಂದ ಅನುಷ್ಠಾನಗೊಳಿಸುವ ವಿವಿಧ ಯೋಜನೆಗಳಡಿ ಸಾಲ-ಸೌಲಭ್ಯ ಪಡೆಯಲು ಆಸಕ್ತ ಅರ್ಹರಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ನಿಗಮದಿಂದ ಅನುಷ್ಠಾನಗೊಳಿಸುತ್ತಿರುವ ಸ್ವಯಂ ಉದ್ಯೊಗ ನೇರ ಸಾಲ ಯೋಜನೆ, ಗಂಗಾ ಕಲ್ಯಾಣ ಯೋಜನೆ, ಅರಿವು ಶೈಕ್ಷಣಿಕ ನೇರ ಸಾಲ ಯೋಜನೆ(ಹೊಸದು), ವಿದೇಶ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗಕ್ಕೆ ಸಾಲ ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆ, ಸ್ವಯಂ ಉದ್ಯೋಗ ನೇರಸಾಲ (ಬ್ಯಾಂಕುಗಳ ಸಹಯೋಗದೊಂದಿಗೆ), ಸ್ವಾತಂತ್ರ್ಯ ಮಹೋತ್ಸವದ ಅಮೃತ ಮುನ್ನಡೆ ಯೋಜನೆಯಡಿ ಸಾಲ-ಸೌಲಭ್ಯ ಪಡೆಯಲಿಚ್ಚಿಸುವವರು ಸೇವಾ ಸಿಂಧು ಪೋರ್ಟಲ್https://www.sevasindhu. karnataka.gov.in ಮೂಲಕ ಗ್ರಾಮ ಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಬಹುದಾಗಿದ್ದು, ಅರ್ಜಿ ಸಲ್ಲಿಸಲು ದಿನಾಂಕ : ೩೧-೦೮-೨೦೨೪ ಕೊನೆಯ ದಿನಾಂಕವಾಗಿದೆ. ಸ್ವಾತಂತ್ರö್ಯ ಮಹೋತ್ಸವದ ಅಮೃತ ಯೋಜನೆಯಡಿ https://www. kaushalkar.gov.inಮೂಲಕ ಅರ್ಜಿ ಸಲ್ಲಿಸಬೇಕು.
ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ನಿಗಮದ ವೆಬ್‌ಸೈಟ್ https://www.kvcdc.karnataka.gov.in ಅಥವಾ ದೂರವಾಣಿ ಸಂಖ್ಯೆ ೦೮೦-೨೯೯೦೪೩೫೦, ವಿಜಯಪುರ ಜಿಲ್ಲಾ ಕಚೇರಿ ದೂರವಾಣಿ ೦೮೩೫೨-೨೫೮೧೨೮ ಸಂಖ್ಯೆಗೆ ಸಂಪರ್ಕಿಸಬಹುದಾಗಿದೆ ಎಂದು ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Subscribe to Updates
Get the latest creative news from FooBar about art, design and business.
Related Posts
Add A Comment
