ವಿಜಯಪುರ: ಕರ್ನಾಟಕ ಮರಾಠ ಅಭಿವೃದ್ದಿ ನಿಗಮದಿಂದ ಅನುಷ್ಠಾನಗೊಳಿಸುವ ವಿವಿಧ ಯೋಜನೆಗಳಡಿ ಸಾಲ-ಸೌಲಭ್ಯ ಪಡೆಯಲು ಆಸಕ್ತ ಅರ್ಹರಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ನಿಗಮದಿಂದ ಅನುಷ್ಠಾನಗೊಳಿಸುತ್ತಿರುವ ಶ್ರೀ ಶಹಜೀರಾಜೆ ಸಮೃದ್ದಿ ಯೋಜನೆ, ಜೀಜಾವು ಜಲಭಾಗ್ಯ ಯೋಜನೆ, ಅರಿವು ಶೈಕ್ಷಣಿಕ ನೇರ ಸಾಲ ಯೋಜನೆ(ಹೊಸದು), ವಿದೇಶ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗಕ್ಕೆ ಸಾಲ ಯೋಜನೆ, ಮರಾಠ ಮಿಲ್ಟಿç ಹೋಟೆಲ್ ಯೋಜನೆ, ಸ್ವಯಂ ಉದ್ಯೋಗ ನೇರಸಾಲ (ಬ್ಯಾಂಕುಗಳ ಸಹಯೋಗದೊಂದಿಗೆ) ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆ, ಸ್ವಾತಂತ್ರö್ಯ ಅಮೃತ ಮಹೋತ್ಸವದ ಮುನ್ನಡೆ ಯೋಜನೆಯಡಿ ಸಾಲ-ಸೌಲಭ್ಯ ಪಡೆಯಲಿಚ್ಚಿಸುವವರು ಸೇವಾ ಸಿಂಧು ಪೋರ್ಟಲ್ https://www.sevasindhu.karnataka.gov.inಮೂಲಕ ಗ್ರಾಮ ಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಬಹುದಾಗಿದ್ದು, ಅರ್ಜಿ ಸಲ್ಲಿಸಲು ದಿನಾಂಕ : ೩೧-೦೮-೨೦೨೪ ಕೊನೆಯ ದಿನಾಂಕವಾಗಿದೆ. ಶೈಕ್ಷಣಿಕ ಸಾಲ ಯೋಜನೆಗಳಿಗೆ ಕೊನೆ ದಿನಾಂಕ ಇರುವುದಿಲ್ಲ. ಸ್ವಾತಂತ್ರ ಮಹೋತ್ಸವದ ಅಮೃತ ಯೋಜನೆಯಡಿ https://www.kaushalkar.gov.in ಮೂಲಕ ಅರ್ಜಿ ಸಲ್ಲಿಸಬೇಕು.
ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ನಿಗಮದ ವೆಬ್ಸೈಟ್ www.kmcdc.karnataka.gov.inಅಥವಾ ದೂರವಾಣಿ ಸಂಖ್ಯೆ ೦೮೦-೨೯೯೦೩೯೯೪, ೮೮೬೭೫೩೭೭೯೯ ಅಥವಾ ವಿಜಯಪುರ ಜಿಲ್ಲಾ ಕಚೇರಿ ದೂರವಾಣಿ ೦೮೩೫೨-೨೫೮೧೨೮ ಸಂಖ್ಯೆಗೆ ಸಂಪರ್ಕಿಸಬಹುದಾಗಿದೆ ಎಂದು ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ದಿ ನಿಗಮದ ವತಿಯಿಂದ
ವಿವಿಧ ಯೋಜನೆಯಡಿ ಸಾಲ-ಸೌಲಭ್ಯಕ್ಕಾಗಿ ಆನ್‌ಲೈನ್ ಅರ್ಜಿ ಆಹ್ವಾನ
ವಿಜಯಪುರ: ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ದಿ ನಿಗಮದಿಂದ ಅನುಷ್ಠಾನಗೊಳಿಸುವ ವಿವಿಧ ಯೋಜನೆಗಳಡಿ ಸಾಲ-ಸೌಲಭ್ಯ ಪಡೆಯಲು ಆಸಕ್ತ ಅರ್ಹರಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ನಿಗಮದಿಂದ ಅನುಷ್ಠಾನಗೊಳಿಸುತ್ತಿರುವ ಸ್ವಯಂ ಉದ್ಯೊಗ ನೇರ ಸಾಲ ಯೋಜನೆ, ಗಂಗಾ ಕಲ್ಯಾಣ ಯೋಜನೆ, ಅರಿವು ಶೈಕ್ಷಣಿಕ ನೇರ ಸಾಲ ಯೋಜನೆ(ಹೊಸದು), ಅರಿವು ಶೈಕ್ಷಣಿಕ ನೇರ ಸಾಲ ಯೋಜನೆ(ನವಿಕರಣ), ವಿದೇಶ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗಕ್ಕೆ ಸಾಲ ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆ, ಸ್ವಯಂ ಉದ್ಯೋಗ ನೇರಸಾಲ (ಬ್ಯಾಂಕುಗಳ ಸಹಯೋಗದೊಂದಿಗೆ) ಯೋಜನೆಯಡಿ ಸಾಲ-ಸೌಲಭ್ಯ ಪಡೆಯಲಿಚ್ಚಿಸುವವರು ಸೇವಾ ಸಿಂಧು ಪೋರ್ಟಲ್ https://www.sevasindhu. karnataka.gov.inಮೂಲಕ ಗ್ರಾಮ ಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಬಹುದಾಗಿದ್ದು, ಅರ್ಜಿ ಸಲ್ಲಿಸಲು ದಿನಾಂಕ : ೩೦-೦೮-೨೦೨೪ ಕೊನೆಯ ದಿನಾಂಕವಾಗಿದೆ.
ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ನಿಗಮದ ವೆಬ್ಸೈಟ್ http://ambigaradevelopment.karnataka.gov.inಅಥವಾ ಸಹಾಯವಾಣಿ ಸಂಖ್ಯೆ ೦೮೦-೨೨೮೬೪೦೯೯ ಸಂಖ್ಯೆಗೆ ಸಂಪರ್ಕಿಸಬಹುದಾಗಿದೆ ಎಂದು ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ದಿ ನಿಗಮ: ಸಾಲ-ಸೌಲಭ್ಯಕ್ಕಾಗಿ ಆನ್‌ಲೈನ್ ಅರ್ಜಿ ಆಹ್ವಾನ
ವಿಜಯಪುರ: ಕರ್ನಾಟಕ ವಿಶ್ವಕರ್ಮ ಸಮುದಾಯ ಅಭಿವೃದ್ದಿ ನಿಗಮದಿಂದ ಅನುಷ್ಠಾನಗೊಳಿಸುವ ವಿವಿಧ ಯೋಜನೆಗಳಡಿ ಸಾಲ-ಸೌಲಭ್ಯ ಪಡೆಯಲು ಆಸಕ್ತ ಅರ್ಹರಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ನಿಗಮದಿಂದ ಅನುಷ್ಠಾನಗೊಳಿಸುತ್ತಿರುವ ಪಂಚವೃತ್ತಿ ಅಭಿವೃದ್ದಿ ಯೋಜನೆ, ಸ್ವಯಂ ಉದ್ಯೊಗ ನೇರ ಸಾಲ ಯೋಜನೆ, ಗಂಗಾ ಕಲ್ಯಾಣ ಯೋಜನೆ, ಅರಿವು ಶೈಕ್ಷಣಿಕ ನೇರ ಸಾಲ ಯೋಜನೆ(ಹೊಸದು), ಅರಿವು ಶೈಕ್ಷಣಿಕ ನೇರ ಸಾಲ ಯೋಜನೆ(ನವಿಕರಣ), ವಿದೇಶ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗಕ್ಕೆ ಸಾಲ ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆ, ಸ್ವಯಂ ಉದ್ಯೋಗ ನೇರಸಾಲ (ಬ್ಯಾಂಕುಗಳ ಸಹಯೋಗದೊಂದಿಗೆ), ಸ್ವಾತಂತ್ರ್ಯ ಮಹೋತ್ಸವದ ಅಮೃತ ಮುನ್ನಡೆ ಯೋಜನೆಯಡಿ ಸಾಲ-ಸೌಲಭ್ಯ ಪಡೆಯಲಿಚ್ಚಿಸುವವರು ಸೇವಾ ಸಿಂಧು ಪೋರ್ಟಲ್ https://www.sevasindhu.karnataka.gov.inಮೂಲಕ ಗ್ರಾಮ ಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಬಹುದಾಗಿದ್ದು, ಅರ್ಜಿ ಸಲ್ಲಿಸಲು ದಿನಾಂಕ : ೩೧-೦೮-೨೦೨೪ ಕೊನೆಯ ದಿನಾಂಕವಾಗಿದೆ. ಶೈಕ್ಷಣಿಕ ಸಾಲ ಯೋಜನೆಗಳಿಗೆ ಕೊನೆಯ ದಿನಾಂಕ ಇರುವುದಿಲ್ಲ. ಸ್ವಾತಂತ್ರö್ಯ ಮಹೋತ್ಸವದ ಅಮೃತ ಯೋಜನೆಯಡಿ https://www.kaushalkar.gov.inhttps://www.kaushalkar.gov.inಮೂಲಕ ಅರ್ಜಿ ಸಲ್ಲಿಸಬೇಕು.
ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ನಿಗಮದ ವೆಬ್ಸೈಟ್ https://www.kaushalkar.gov.inಅಥವಾ ದೂರವಾಣಿ ಸಂಖ್ಯೆ ೦೮೦-೨೨೩೭೪೮೪೮ ಸಂಖ್ಯೆಗೆ ಸಂಪರ್ಕಿಸಬಹುದಾಗಿದೆ ಎಂದು ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ದಿ ನಿಗಮ: ಸಾಲ-ಸೌಲಭ್ಯಕ್ಕಾಗಿ ಆನ್‌ಲೈನ್ ಅರ್ಜಿ ಆಹ್ವಾನ
ವಿಜಯಪುರ: ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ದಿ ನಿಗಮದಿಂದ ಅನುಷ್ಠಾನಗೊಳಿಸುವ ವಿವಿಧ ಯೋಜನೆಗಳಡಿ ಸಾಲ-ಸೌಲಭ್ಯ ಪಡೆಯಲು ಆಸಕ್ತ ಅರ್ಹರಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ನಿಗಮದಿಂದ ಅನುಷ್ಠಾನಗೊಳಿಸುತ್ತಿರುವ ಬಸವ ಬೆಳಗು (ಶೈಕ್ಷಣಿಕ ಸಾಲ), ಜೀವಜಲ (ಗಂಗಾ ಕಲ್ಯಾಣ), ಕಾಯಕಕಿರಣ (ಸ್ವಯಂ ಉದ್ಯೊಗ), ಭೋಜನಾಲಯ, ವಿಭೂತಿ ನಿರ್ಮಾಣ ಘಟಕ, ಸ್ವಾವಲಂಬಿ ಸಾರಥಿ ಯೋಜನೆ, ಸ್ವಯಂ ಉದ್ಯೋಗ ನೇರಸಾಲ (ಬ್ಯಾಂಕುಗಳ ಸಹಯೋಗದೊಂದಿಗೆ), ಸ್ವಾತಂತ್ರ್ಯ ಮಹೋತ್ಸವದ ಅಮೃತ ಮುನ್ನಡೆ ಯೋಜನೆಯಡಿ ಸಾಲ-ಸೌಲಭ್ಯ ಪಡೆಯಲಿಚ್ಚಿಸುವವರು ಸೇವಾ ಸಿಂಧು ಪೋರ್ಟಲ್ https://www.sevasindhu. karnataka.gov.inಮೂಲಕ ಗ್ರಾಮ ಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಬಹುದಾಗಿದ್ದು, ಅರ್ಜಿ ಸಲ್ಲಿಸಲು ದಿನಾಂಕ : ೩೧-೦೮-೨೦೨೪ ಕೊನೆಯ ದಿನಾಂಕವಾಗಿದೆ. ಶೈಕ್ಷಣಿಕ ಸಾಲಗಳಿಗೆ ಕೊನೆಯ ದಿನಾಂಕ ಇರುವುದಿಲ್ಲ. ಸ್ವಾತಂತ್ರö್ಯ ಮಹೋತ್ಸವದ ಅಮೃತ ಯೋಜನೆಯಡಿ https://www. kaushalkar.gov.inಮೂಲಕ ಅರ್ಜಿ ಸಲ್ಲಿಸಬೇಕು.
ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ನಿಗಮದ ವೆಬ್ಸೈಟ್ https://www. kaushalkar.gov.in ಅಥವಾ ದೂರವಾಣಿ ಸಂಖ್ಯೆ ೦೮೦-೨೨೮೬೫೫೨೨m ೯೯೦೦೦೧೨೩೫೧ ವಿಜಯಪುರ ಜಿಲ್ಲಾ ವ್ಯವಸ್ಥಾಪಕರು ಡಿ.ದೇವರಾಜ್ ಅರಸು ಹಿಂದುಳಿದ ವರ್ಗಗಳ ಅಭಿವೃದ್ದಿ ನಿಗಮ ವಿಜಯಪುರ ಕಚೇರಿ ಸಂಪರ್ಕಿಸಬಹುದಾಗಿದೆ ಎಂದು ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
