ಆಲಮಟ್ಟಿ: ಸ್ಥಳೀಯ ಎಸ್.ವ್ಹಿ.ವ್ಹಿ. ಸಂಸ್ಥೆಯ ಮಂಜಪ್ಪ ಹರ್ಡೇಕರ ಸ್ಮಾರಕ ಸಂಯುಕ್ತ ಪ.ಪೂ ಹಾಗೂ ಪ್ರಥಮ ದರ್ಜೆ ಕಲಾ,ವಾಣಿಜ್ಯ ಕಾಲೇಜಿನ ಪ್ರಸಕ್ತ ೨೦೨೪-೨೫ ನೇ ಸಾಲಿನ ಕ್ರೀಡಾ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳ ಉದ್ಘಾಟನಾ ಸಮಾರಂಭ ಇದೇ ದಿ, ೫ ರಂದು ಸೋಮವಾರ ಕಾಲೇಜು ಆವರಣದಲ್ಲಿನ ಲಿಂ.ತೋಂಟದ ಡಾ,ಸಿದ್ದಲಿಂಗ ಮಹಾಸ್ವಾಮಿಗಳ ಸಭಾ ವೇದಿಕೆಯಲ್ಲಿ ಜರುಗಲಿದೆ.
ಲಿಂಗೈಕ್ಯ ತೋಂಟದ ಡಾ.ಸಿದ್ದಲಿಂಗ ಶ್ರೀಗಳ ದಿವ್ಯ ಪ್ರಕಾಶನದಲ್ಲಿ ತೋಂಟದ ಡಾ.ಸಿದ್ದರಾಮ ಮಹಾಸ್ವಾಮಿಗಳ ಕೃಪಾಶೀರ್ವಾದದಿಂದ ಹಮ್ಮಿಕೊಂಡಿರುವ ಈ ಕಾರ್ಯಕ್ರಮವನ್ನು ವಿಜಯಪುರ ಜಿಲ್ಲೆಯ ಪದವಿಪೂರ್ವ ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಡಾ.ಸಿ.ಕೆ.ಹೊಸಮನಿ ಉದ್ಘಾಟಿಸಲಿದ್ದಾರೆ. ಚಿಮ್ಮಲಗಿ ಭಾಗ-೨ ಅರಳಲೆ ಕಟ್ಟಿಮನಿ ಹಿರೇಮಠದ ಸಿದ್ದರೇಣುಕ ಶಿವಾಚಾರ್ಯ ದಿವ್ಯ ಸಾನಿಧ್ಯ ವಹಿಸುವರು. ಗದುಗಿನ ಶ್ರೀ ಜಗದ್ಗುರು ತೋಂಟದಾರ್ಯ ವಿದ್ಯಾಪೀಠ ಹಾಗೂ ಆಲಮಟ್ಟಿಯ ಶ್ರೀಮದ್ ವೀರಶೈವ ವಿದ್ಯಾಲಯ ಅಸೋಸಿಯೇಷನ್ ಸಂಸ್ಥೆಯ ಕಾರ್ಯದರ್ಶಿ ಪ್ರೊ,ಶಿವಾನಂದ ಪಟ್ಟಣಶೆಟ್ಟರ ಅಧ್ಯಕ್ಷತೆ ವಹಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಕರ್ನಾಟಕ ಪ್ರದೇಶ ರಾಜ್ಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಸಂಯುಕ್ತಾ ಪಾಟೀಲ, ಕೆಬಿಜೆಎನ್ಎಲ್ ಮುಖ್ಯ ಇಂಜನೀಯರ ಎಚ್.ಎನ್.ಶ್ರೀನಿವಾಸ, ವಿಶ್ರಾಂತ ಪ್ರಾಧ್ಯಾಪಕ, ಸಾಹಿತಿ ಬಿ.ಎಮ್.ಹಿರೇಮಠ, ವಲಯ ಅರಣ್ಯಾಧಿಕಾರಿ ಮಹೇಶ ಪಾಟೀಲ, ಆಲಮಟ್ಟಿ ಗ್ರಾಪಂ ಅಧ್ಯಕ್ಷೆ ಕವಿತಾ ಬಡಿಗೇರ, ಪ.ಪೂ ಶಿಕ್ಷಣ ಇಲಾಖೆ ಶಾಖಾಧಿಕಾರಿ ಪ್ರಕಾಶ ಗೊಂಗಡಿ, ವಿಶ್ರಾಂತ ಪ್ರಾಚಾರ್ಯ, ಬ.ಬಾಗೇವಾಡಿ ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುರೇಶಗೌಡ ಪಾಟೀಲ ಇತರ ಗಣ್ಯರು ಪಾಲ್ಗೊಳ್ಳಲಿದ್ದಾರೆ. ಇದೇ ವೇಳೆ ಪ್ರತಿಭಾ ಪುರಸ್ಕಾರ ನಡೆಯಲಿದೆ ಎಂದು ಪ್ರಾಚಾರ್ಯ ಪ್ರಭುಸ್ವಾಮಿ ಹೇಮಗಿರಿಮಠ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Subscribe to Updates
Get the latest creative news from FooBar about art, design and business.
Related Posts
Add A Comment
