Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ವಿದ್ಯಾರ್ಥಿಗಳು ಜೀವನದಲ್ಲಿ ಸಂಸ್ಕಾರ ಸಂಸ್ಕೃತಿ ರೂಢಿಸಿಕೊಳ್ಳಿ :ಡಾ.ಹೊಸಮನಿ
(ರಾಜ್ಯ ) ಜಿಲ್ಲೆ

ವಿದ್ಯಾರ್ಥಿಗಳು ಜೀವನದಲ್ಲಿ ಸಂಸ್ಕಾರ ಸಂಸ್ಕೃತಿ ರೂಢಿಸಿಕೊಳ್ಳಿ :ಡಾ.ಹೊಸಮನಿ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಸಿಂದಗಿ: ಯಾವುದೇ ಕಾರ್ಯಕ್ರಮವು ಅಚ್ಚುಕಟ್ಟಾಗಿ ನಡೆಯಬೇಕಾದರೆ ವಿದ್ಯಾರ್ಥಿಗಳ ಸಹಕಾರ, ಉಪನ್ಯಾಸಕರ ಕಾರ್ಯಕ್ಷಮತೆ ಮುಖ್ಯವಾಗಿರುತ್ತದೆ ಎಂದು ವಿಜಯಪುರ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಡಾ.ಸಿ.ಕೆ. ಹೊಸಮನಿ ಹೇಳಿದರು.
ಪಟ್ಟಣದ ಶ್ರೀಪದ್ಮರಾಜ ಮಹಿಳಾ ಕಲಾ, ವಾಣಿಜ್ಯ ಹಾಗೂ ವಿಜ್ಞಾನ ಪಪೂರ ಕಾಲೇಜಿನಲ್ಲಿ ಪಠ್ಯಪೂರಕ ಚಟುವಟಿಕೆಗಳ ಉದ್ಘಾಟನಾ ಸಮಾರಂಭ ಮತ್ತು ಅತ್ಯುನ್ನತ ಶ್ರೇಣಿಯಲ್ಲಿ ಪಾಸಾದ ವಿದ್ಯಾರ್ಥಿನಿಯರಿಗೆ ಹಮ್ಮಿಕೊಂಡ ಸನ್ಮಾನ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅವರು, ಕಾಲೇಜಿನ ಅಚ್ಚುಕಟ್ಟುತನ ವಿದ್ಯಾರ್ಥಿಗಳ ಶಿಸ್ತು ಉಪನ್ಯಾಸಕರ ಸಹಭಾಗಿತ್ವದಲ್ಲಿ ಈ ಕಾರ್ಯಕ್ರಮ ಜರುಗುತ್ತಾ ಇರುವುದು ನೋಡಿದರೆ ನನಗೆ ಸಂತಸ ತಂದಿದೆ. ಉಳಿದ ವಿದ್ಯಾರ್ಥಿಗಳಿಗೆ ಪ್ರೇರಣೆದಾಯಕವಾಗಲಿ. ಶಾಲೆಯ ಕೀರ್ತಿಯನ್ನು ಬೆಳಗಿಸಿದ ವಿದ್ಯಾರ್ಥಿಗಳನ್ನು ಸನ್ಮಾನಿಸುವುದು ಸ್ಪೂರ್ತಿದಾಯಕವಾಗಿದೆ. ತಂದೆ ತಾಯಿಗಳು ಮಾಡಿದ ಶ್ರಮಕ್ಕೆ, ದುಡಿಮೆಗೆ ಮಕ್ಕಳು ಮಾಡುವ ಸಾಧನೆ ಹೆಮ್ಮೆತರುವಂತಹದ್ದಾಗಿರಬೇಕು. ಸಮಾಜದಲ್ಲಿ ನಮ್ಮ ಮನೆತನದ ಸಂಸ್ಕೃತಿ, ನಾಗರೀಕತೆ ಬೆಳೆಯಬೇಕು. ಯಾವುದೇ ಕಾರಣಕ್ಕೂ ವಿದ್ಯಾರ್ಥಿಗಳು ಹೆತ್ತ ತಂದೆ-ತಾಯಿ, ಪಾಠ ಕಲಿಸಿದ ಗುರುವಿಗೆ ಮೋಸ ಮಾಡಬಾರದು. ಯಾವಾಗಲೂ ವಿದ್ಯಾರ್ಥಿಗಳು ಅಕ್ಷಯ ಪಾತ್ರೆಯಂತಿರಬೇಕು. ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಸಂಸ್ಕಾರ ಸಂಸ್ಕೃತಿ, ಸಂಪ್ರದಾಯ, ಉತ್ತಮ ನಡೆ, ನುಡಿಯೊಂದಿಗೆ ಸುಂದರವಾದ ಬದುಕನ್ನು ಸಾಗಿಸಬೇಕು ಎಂದು ಕಿವಿ ಮಾತು ಹೇಳಿದರು.
ಇದೇ ಸಂದರ್ಭದಲ್ಲಿ ಕಾರ್ಯಕ್ರಮದ ಮುಖ್ಯ ಅತಿಥಿ ಸ್ಥಾನವನ್ನು ಅಲಂಕರಿಸಿದ ನಾದ ಕೆ.ಡಿ ಪ್ರೌಢಶಾಲೆಯ ಮುಖ್ಯಗುರು ಸಾಹಿತಿ, ಸಿ.ಎಂ.ಬಂಡಗಾರ ಮಾತನಾಡಿ ವಿದ್ಯಾರ್ಥಿಗಳು ಕೌಶಲ್ಯಯುತ ಜ್ಞಾನವನ್ನು ಹೊಂದಿರಬೇಕು. ವಿದ್ಯಾರ್ಥಿಗಳು ಶ್ರದ್ಧಾಮನೋಭಾವ ನಿರಂತರ ದುಡಿಮೆ, ಸತತ ಪ್ರಯತ್ನ ಮಾಡೇ ತೀರುತ್ತೇನೆ ಎಂಬ ಛಲಗಾರಿಕೆ ಬೆಳೆಸಿಕೊಳ್ಳಬೇಕು. ಪ್ರತಿಯೊಬ್ಬ ವಿದ್ಯಾರ್ಥಿಯು ಒಂದಿಲ್ಲೊಂದು ರೀತಿಯ ಪ್ರತಿಭೆಯನ್ನು ಹೊಂದಿರುತ್ತಾರೆ. ಶಿಕ್ಷಕರಿಂದ ಆ ಪ್ರತಿಭೆ ಹೊರತೆಗೆವ ಕಾರ್ಯವಾಗಬೇಕು. ಎದೆಗೆ ಬಿದ್ದ ಅಕ್ಷರ ಭೂಮಿಗೆ ಬೀಜ ಎಂದಿಗೂ ವ್ಯರ್ಥವಾಗುವದಿಲ್ಲ. ಸಮಾಜಕ್ಕೆ ಸ್ತ್ರೀಯರು ಕೊಟ್ಟ ಕೊಡುಗೆ ಅಪಾರ ಮತ್ತು ಅವಿಸ್ಮರಣೀಯ ಎಂದರು.
ಈ ವೇಳೆ ಕಾರ್ಯಕ್ರಮದ ಪಾವನ ಸಾನಿಧ್ಯ ವಹಿಸಿದ ಸಾರಂಗಮಠದ ಡಾ.ಪ್ರಭುಸಾರಂಗದೇವ ಶಿವಾಚಾರ್ಯರು ಮಾತನಾಡಿ, ಮಹಿಳೆಯರು ಯಾರ ಮೇಲೆಯೂ ಅವಲಂಬಿತರಾಗದೇ ಸ್ವಾವಲಂಬಿಗಳಾಗಬೇಕು. ಹಲವಾರು ಕ್ಷೇತ್ರದಲ್ಲಿ ಸಾಧನೆಗೈದ ಹೆಣ್ಣುಮಕ್ಕಳ ಬಗ್ಗೆ ಹೇಳುತ್ತಾ ಅನೇಕ ದೃಷ್ಟಾಂತಗಳ ಮೂಲಕ ವಿದ್ಯಾರ್ಥಿಗಳಿಗೆ ಮನ ಮುಟ್ಟುವಂತೆ ತಿಳಿ ಹೇಳಿದರು.
ಇದೇ ಸಂದರ್ಭದಲ್ಲಿ ನಿವೃತ್ತರಾದ ವ್ಹಿ.ಡಿ.ಪಾಟೀಲ ಹಾಗೂ ಐ.ಎಸ್.ಶಿವಸಿಂಪಿಗೇರ ಹಾಗೂ ಅತ್ಯುನ್ನತ ಶ್ರೇಣಿಯಲ್ಲಿ ಪಾಸಾದ ೭೦ಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ಸನ್ಮಾನಿಸಿ ಗೌರವಿಸಲಾಯಿತು, ಪ್ರಾಚಾರ್ಯ ಎಂ.ಎಸ್ ಹೈಯಾಳಕರ ಅಧ್ಯಕ್ಷೀಯ ಮಾತುಗಳನ್ನಾಡಿದರು. ವಿದ್ಯಾರ್ಥಿನಿ ಭಾಗ್ಯಶ್ರೀ ದೇವರಮನಿ ನಿರೂಪಿಸಿದರು. ಉಪನ್ಯಾಸಕರಾದ ವರ್ಷಾ ಪಾಟೀಲ ಸ್ವಾಗತಿಸಿದರು. ವಿದ್ಯಾಶ್ರೀ ತಳವಾರ ಹಾಗೂ ಸಂಗಡಿಗರು ಪ್ರಾರ್ಥಿಸಿದರು. ಪ್ರೀತಿ ಪಾಟೀಲ ವಂದಿಸಿದರು.
ಇದೇ ಸಂದರ್ಭದಲ್ಲಿ ಪ್ರಾಚಾರ್ಯ ಎಸ್.ಎಂ. ಪೂಜಾರಿ, ಭೀಮನಗೌಡ ಸಿಂಗನಳ್ಳಿ ಕಾರ್ಯಧ್ಯಕ್ಷ ಆಸೀಫ .ಎ.ಕೋಕಣಿ ಹಾಗೂ ಮಹಾವಿದ್ಯಾಲಯದ ಸಿಬ್ಬಂದಿ ಮಹಾಂತೇಶ ನೂಲಾನವರ, ಯು.ಸಿ.ಪೂಜೇರಿ, ಎಂ.ಪಿ.ಸಾಗರ. ಜಿ.ಎ.ನಂದಿಮಠ, ಆರ್.ಎ.ಹಾಲಕೇರಿ, ಎಸ್.ಎಸ್.ಸಜ್ಜನ, ಜಿ.ಎಸ್. ಕುಲಕರ್ಣಿ, ಹೇಮಾ ಹಿರೇಮಠ, ಎಸ್.ಜಿ ಮಾರ್ಸನಳ್ಳಿ, ಲಕ್ಷ್ಮೀ ಮಾರ್ಸನಳ್ಳಿ, ಹೇಮಾ ಕಾಸರ, ಲಕ್ಷ್ಮೀ ಭಜಂತ್ರಿ, ಶಿವಶಂಕರ ಕುಂಬಾರ ಸೇರಿದಂತೆ ಕಾಲೇಜಿನ ಬೋಧಕ ಬೋಧಕೇತರ ಸಿಬ್ಬಂದಿಗಳು, ಪಾಲಕರು ಹಾಗೂ ವಿದ್ಯಾರ್ಥಿನಿಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್
    In (ರಾಜ್ಯ ) ಜಿಲ್ಲೆ
  • ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ
    In (ರಾಜ್ಯ ) ಜಿಲ್ಲೆ
  • ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ
    In (ರಾಜ್ಯ ) ಜಿಲ್ಲೆ
  • ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ
    In ವಿಶೇಷ ಲೇಖನ
  • ಸರಗೂರು ತಾಲೂಕಿನಲ್ಲಿ ನಿಲ್ಲದ ಕಾಡುಪ್ರಾಣಿ-ಮಾನವ ಸಂಘರ್ಷ
    In (ರಾಜ್ಯ ) ಜಿಲ್ಲೆ
  • ಕೇವಲ ಅಂಕ ಗಳಿಕೆ ಶಿಕ್ಷಣವಲ್ಲˌ ತಹಶೀಲ್ದಾರ ಅನೀಲ ಬಡಿಗೇರ
    In (ರಾಜ್ಯ ) ಜಿಲ್ಲೆ
  • ಸಾರ್ವಜನಿಕ ಬ್ಯಾಂಕುಗಳಿಂದ ಆರ್ಥಿಕ ಸಾಕ್ಷರತೆ ಸಪ್ತಾಹ
    In (ರಾಜ್ಯ ) ಜಿಲ್ಲೆ
  • ಶನಿವಾರ ವಿದ್ಯುತ್ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಆಂಧ್ರದಲ್ಲಿ ಕೆ.ಜಿ ತಂಬಾಕಿಗೆ 400, ಕರ್ನಾಟಕದಲ್ಲಿ ಕೇವಲ 292 ರೂ.ಹೆಚ್ ಡಿ ಕೋಟೆಯಲ್ಲಿ ಹರಾಜು ಮಾರುಕಟ್ಟೆ ಬಂದ್, ರೈತರ ಆಕ್ರೋಶ
    In (ರಾಜ್ಯ ) ಜಿಲ್ಲೆ
  • ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಡಿಯಲ್ಲಿ ನಿರ್ಗತಿಕರಿಗೆ ವಾತ್ಸಲ್ಯ ಕಿಟ್ ವಿತರಣೆಉದಯರಶ್ಮಿ ದಿನಪತ್ರಿಕೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.