Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಪ್ರಾ.ಶಾಲಾ ಶಿಕ್ಷಕರ ಬೇಡಿಕೆಗಳ ಈಡೇರಿಸಲು ಆಗ್ರಹಿಸಿ ಮನವಿ
(ರಾಜ್ಯ ) ಜಿಲ್ಲೆ

ಪ್ರಾ.ಶಾಲಾ ಶಿಕ್ಷಕರ ಬೇಡಿಕೆಗಳ ಈಡೇರಿಸಲು ಆಗ್ರಹಿಸಿ ಮನವಿ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಬಸವನಬಾಗೇವಾಡಿ: ರಾಜ್ಯದಲ್ಲಿರುವ ಪ್ರಾಥಮಿಕ ಶಾಲಾ ಶಿಕ್ಷಕರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಮುಖ್ಯಮಂತ್ರಿಗಳಿಗೆ ಬರೆದ ಮನವಿ ಪತ್ರವನ್ನು ತಹಸೀಲ್ದಾರ ವೈ.ಎಸ್.ಸೋಮನಕಟ್ಟಿ ಅವರಿಗೆ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲೂಕಾಧ್ಯಕ್ಷ ಬಿ.ಪಿ.ನಾಗಾವಿ, ಕಾರ್ಯದರ್ಶಿ ಸಿ.ಬಿ.ಪಾಟೀಲ ಹಾಗೂ ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ, ರಾಜ್ಯ ಸಂಘಟನಾ ಕಾರ್ಯದರ್ಶಿ ಶಿವಾನಂದ ಮಂಗಾನವರ ಸೋಮವಾರ ಸಲ್ಲಿಸಿದರು.
ಈ ಸಂದರ್ಭದಲ್ಲಿ ಶಿವಾನಂದ ಮಂಗಾನವರ ಮಾತನಾಡಿ, ರಾಜ್ಯ ಸರ್ಕಾರಿ ನೌಕರರ ಸಂಘದ ಮನವಿಗೆ ಸ್ಪಂದಿಸಿದ ಸಿಎಂ ಸಿದ್ದರಾಮಯ್ಯನವರು ರಾಜ್ಯದ ಎಲ್ಲ ನೌಕರ ಬಾಂಧವರಿಗೆ ಏಳನೇ ವೇತನ ಆಯೋಗ ಯಥಾವತ್ತಾಗಿ ಜಾರಿಗೆ ತರಲು ಮುಂದಾಗಿರುವದು ಸಮಸ್ತ ನೌಕರ ಬಾಂಧವರಿಗೆ ಹರ್ಷ ತಂದಿದೆ. ಇಂತಹ ನಿರ್ಣಯ ತೆಗೆದುಕೊಂಡ ಸಿಎಂ ಸೇರಿದಂತೆ ಸರ್ಕಾರಕ್ಕೆ ಅಭಿನಂದನೆ ಸಲ್ಲಿಸುವುದಾಗಿ ಹೇಳಿದ ಅವರು ಇದೀಗ ಪ್ರಾಥಮಿಕ ಶಾಲಾ ಶಿಕ್ಷಕರ ವಿವಿಧ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುವ ಮೂಲಕ ಅವರಿಗೂ ನ್ಯಾಯ ಸಿಗುವಂತೆ ಸರ್ಕಾರ ಮಾಡಬೇಕು. ಅವರ ಬೇಡಿಕೆಗಳಾದ ೨೦೧೭ ರವರೆಗೆ ನೇಮಕವಾದ ಶಿಕ್ಷಕರನ್ನು ೧ ರಿಂದ ೭ ಕ್ಕೆ ನೇಮಕವಾದ ಶಿಕ್ಷಕರೆಂದು ಪರಿಗಣಿಸಿ ಹೊಸ ವೃಂದ ಮತ್ತು ನೇಮಕಾತಿ ನಿಯಮಗಳು ೨೦೧೭ ರ ನಂತರ ನೇಮಕವಾದ ಶಿಕ್ಷಕರಿಗೆ ಅನ್ವಯಿಸಬೇಕು. ಯಾವುದೇ ಕಾರಣಕ್ಕೂ ೨೦೧೬ ಕ್ಕಿಂತ ಮೊದಲು ನೇಮಕಾತಿಯಾದವರಿಗೆ ಪೂರ್ವಾನ್ವಯಗೊಳಿಸಬಾರದು. ಪದವಿ ಪೂರೈಸಿದ ಎಲ್ಲರಿಗೂ ಸೇವಾ ಜೇಷ್ಠತೆಯೊಂದಿಗೆ ಪದವೀಧರ ಶಿಕ್ಷಕರೆಂದು ಪದನಾಮೀಕರಿಸಬೇಕು. ೨೦೧೭ರ ವೃಂದ ಮತ್ತು ನೇಮಕಾತಿ ನಿಯಮಗಳು ೨೦೧೬ ಕ್ಕಿಂತ ಮುಂಚೆ ನೇಮಕಾತಿ ಹೊಂದಿದ ಶಿಕ್ಷಕರಿಗೆ ಅನ್ವಯವಾಗುವದಿಲ್ಲ ಎಂದು ಕಾರ್ಯಾದೇಶ ಹೊರಡಿಸಿ ಮೂಲತಃ ೧ ರಿಂದ ೭,೮ ನೇಮಕ ಹೊಂದಿದವರನ್ನು ಪಿಎಸ್ಟಿ ಎಂದು ಪದನಾಮ ಮಾಡಿ ೧ ರಿಂದ ೫ ಕ್ಕೆ ಸೀಮಿತಗೊಳಿಸಿರುವುದನ್ನು ಹಿಂಪಡೆಯಬೇಕು. ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಪೂರ್ವದಂತೆ ಮುಖ್ಯಗುರುಗಳ ಮತ್ತು ಹಿರಿಯ ಮುಖ್ಯಗುರುಗಳ ಹುದ್ದೆಗೆ ಸೇವಾ ಜೇಷ್ಠತೆಯ ಆಧಾರದ ಮೇಲೆ ಬಡ್ತಿ ನೀಡುವುದು ಸೇರಿದಂತೆ ಪ್ರಾಥಮಿಕ ಶಾಲಾ ಶಿಕ್ಷಕರ ವಿವಿಧ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿದರು.
ಎಂ.ವ್ಹಿ. ಗಬ್ಬೂರ ಮಾತನಾಡಿ, ಅರ್ಹ ವಿದ್ಯಾರ್ಹತೆ ಪೂರೈಸಿದ ೨೦೧೬ ಕ್ಕಿಂತ ಮೊದಲು ನೇಮಕಾತಿಯಾದ ಎಲ್ಲ ೧ ರಿಂದ ೮ ನೇ ತರಗತಿಗೆ ಪ್ರಾಥಮಿಕ ಶಾಲಾ ಶಿಕ್ಷಕರ ಸಂಖ್ಯೆ ಮುಗಿಯವವರೆಗೂ ಮೊದಲಿನಂತೆ ಅರ್ಹತೆಯ ಆಧಾರದ ಮೇಲೆ ಪ್ರೌಢಶಾಲೆಗೆ ಬಡ್ತಿ ನೀಡಬೇಕು. ಅರ್ಹ ವಿದ್ಯಾರ್ಹತೆ ಹೊಂದಿದ ೨೦೧೬ ಕ್ಕಿಂತ ಪೂರ್ವದಲ್ಲಿ ನೇಮಕಾತಿ ಆಗಿರುವ ಪ್ರಾಥಮಿಕ ಶಾಲಾ ಸಹ ಶಿಕ್ಷಕರಿಗೆ ಸೇವಾ ಜೇಷ್ಠತೆಯ ರಕ್ಷಣೆಯೊಂದಿಗೆ ಬಡ್ತಿ ನೀಡಬೇಕೆಂದು ಮನವಿ ಮಾಡಿಕೊಂಡರು.
ಈ ಸಂದರ್ಭದಲ್ಲಿ ಎಸ್.ಎಂ.ದಳವಾಯಿ, ಎಚ್.ಬಿ.ಬಾರಿಕಾಯಿ, ಗಿರೀಶ ಮಸೂತಿ, ಸಿದ್ದು ಉಕ್ಕಲಿ, ಆರ್.ಡಿ.ಪವಾರ, ಎ.ಎಲ್.ನಾಡಗೌಡ, ಎಚ್.ಎ.ಸಜ್ಜನ, ಪಿ.ಜಿ.ಹೂಗಾರ, ಪಿ.ಬಿ.ಕಡಕೋಳ, ಬಿ.ಎಲ್.ಪವಾರ, ಗೋಪಾಲ ಲಮಾಣಿ, ಶಶಿಕಲಾ ಚಿಕ್ಕರೆಡ್ಡಿ, ಎಂ.ಎಸ್.ಮುರಾಳ, ಎಂ.ಆರ್.ರಾಜನಾಳ, ಕೆ.ಎಂ.ಪದರಾ, ಎಂ.ಎಸ್.ಸವಣೂರ ಸೇರಿದಂತೆ ಇತರರು ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್
    In (ರಾಜ್ಯ ) ಜಿಲ್ಲೆ
  • ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ
    In (ರಾಜ್ಯ ) ಜಿಲ್ಲೆ
  • ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ
    In (ರಾಜ್ಯ ) ಜಿಲ್ಲೆ
  • ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ
    In ವಿಶೇಷ ಲೇಖನ
  • ಸರಗೂರು ತಾಲೂಕಿನಲ್ಲಿ ನಿಲ್ಲದ ಕಾಡುಪ್ರಾಣಿ-ಮಾನವ ಸಂಘರ್ಷ
    In (ರಾಜ್ಯ ) ಜಿಲ್ಲೆ
  • ಕೇವಲ ಅಂಕ ಗಳಿಕೆ ಶಿಕ್ಷಣವಲ್ಲˌ ತಹಶೀಲ್ದಾರ ಅನೀಲ ಬಡಿಗೇರ
    In (ರಾಜ್ಯ ) ಜಿಲ್ಲೆ
  • ಸಾರ್ವಜನಿಕ ಬ್ಯಾಂಕುಗಳಿಂದ ಆರ್ಥಿಕ ಸಾಕ್ಷರತೆ ಸಪ್ತಾಹ
    In (ರಾಜ್ಯ ) ಜಿಲ್ಲೆ
  • ಶನಿವಾರ ವಿದ್ಯುತ್ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಆಂಧ್ರದಲ್ಲಿ ಕೆ.ಜಿ ತಂಬಾಕಿಗೆ 400, ಕರ್ನಾಟಕದಲ್ಲಿ ಕೇವಲ 292 ರೂ.ಹೆಚ್ ಡಿ ಕೋಟೆಯಲ್ಲಿ ಹರಾಜು ಮಾರುಕಟ್ಟೆ ಬಂದ್, ರೈತರ ಆಕ್ರೋಶ
    In (ರಾಜ್ಯ ) ಜಿಲ್ಲೆ
  • ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಡಿಯಲ್ಲಿ ನಿರ್ಗತಿಕರಿಗೆ ವಾತ್ಸಲ್ಯ ಕಿಟ್ ವಿತರಣೆಉದಯರಶ್ಮಿ ದಿನಪತ್ರಿಕೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.