ವಿಜಯಪುರ: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ವಿಜಯಪುರದ ಪ್ರಾದೇಶಿಕ ಕೇಂದ್ರದಲ್ಲಿ ೨೦೨೪-೨೫ನೇ ಸಾಲಿನ ಸ್ನಾತಕ ಮತ್ತು ಸ್ನಾತಕೋತ್ತರ ಕೋರ್ಸ್ಗಳ ಪ್ರವೇಶಾತಿ ಪ್ರಾರಂಭಗೊಂಡಿದೆ ಎಂದು ಪ್ರಾದೇಶಿಕ ನಿರ್ದೇಶಕರು ತಿಳಿಸಿದ್ದಾರೆ.
ವಿವಿಯಲ್ಲಿ ಬಿಎ, ಬಿಕಾಂ, ಬಿಬಿಎ, ಬಿಸಿಎ, ಬಿಎಸ್ಸಿ (ಐಟಿ), ಬಿಎಸ್ಸಿ(೧೪ ಕಾಂಬಿನೇಷನ್ಸ್), ಬಿಎಸ್‌ಡಬ್ಲೂ, ಬಿಎಲ್‌ಐಎಸ್ಸಿ, ಎಂಎ(೧೪ ವಿಷಯಗಳಲ್ಲಿ) ಎಂ.ಕಾಂ, ಎಂಬಿಎ (೮ಕಾಂಬಿನೇಷನ್ಸ), ಎಂ.ಎಲ್.ಐ.ಎಸ್ಸಿ, ಎಂ.ಎಸ್ಸಿ (೧೬ ವಿಷಯಗಳಲ್ಲಿ) ಎಂಸಿಎ, ಎಂಎಸ್‌ಡಬ್ಲೂ, ಪಿ.ಜಿ. ಸರ್ಟಿಫಿಕೇಟ್ ಪ್ರೊಗ್ರಾಮ್ಸ್ ಡಿಪ್ಲೋಮಾ ಪ್ರೊಗ್ರಾಮ್ಸ್ ಮತ್ತು ಸರ್ಟಿಫಿಕೆಟ್ ಪ್ರೊಗ್ರಾಮ್ಸ್ಗಳಿಗೆ ಪ್ರವೇಶಾತಿಯನ್ನು ಮಾಡಿಕೊಳ್ಳಲಾಗುತ್ತಿದೆ.
ಆಸಕ್ತ ವಿದ್ಯಾರ್ಥಿಗಳು ಕರಾಮುವಿಯ ಅಧಿಕೃತ ವೆಬ್‌ಸೈಟ್ www.ksoumysuru.ac.in ನಲ್ಲಿ ಕೋರ್ಸ್ಗಳಿಗೆ ಆನ್‌ಲೈನ್ ಅರ್ಜಿ ಭರ್ತಿ ಮಾಡಿ ನಂತರ ಪ್ರಾದೇಶಿಕ ಕೇಂದ್ರಕ್ಕೆ ಖುದ್ದಾಗಿ ಭೇಟಿ ನೀಡಿ ಪವೆಶ ಪಡೆಯಬಹುದಾಗಿದೆ.
ಬಿಪಿಎಲ್ ಕಾರ್ಡ ಹೊಂದಿರುವ ಮಹಿಳಾ ವಿದ್ಯಾರ್ಥಿಗಳು, ಡಿಫೆನ್ಸ್ ಹಾಗೂ ಮಾಜಿ ಸೈನಿಕ ವಿದ್ಯಾರ್ಥಿಗಳು, ಅಟೋ-ಕ್ಯಾಬ್ ಚಾಲಕರು ಮತ್ತು ಅವರ ಮಕ್ಕಳಿಗೆ, ಕೆಎಸ್‌ಆರ್‌ಟಿಸಿ ನೌಕರರಿಗೆ ಬೋಧನಾ ಶುಲ್ಕದಲ್ಲಿ ರಿಯಾಯಿತಿ ನೀಡಲಾಗುತ್ತದೆ. ಕೋವಿಡ್-೧೯ರ ಸಾಂಕ್ರಾಮಿಕ ರೋಗಕ್ಕೆ ತುತ್ತಾದ ಪೋಷಕರ ಮಕ್ಕಳಿಗೆ, ತೃತೀಯ ಲಿಂಗದ ವಿದ್ಯಾರ್ಥಿಗಳಿಗೆ, ದೃಷ್ಟಿಹೀನ ವಿದ್ಯಾರ್ಥಿಗಳಿಗೆ ಪೂರ್ಣ ಶುಲ್ಕ ವಿನಾಯಿತಿ ನೀಡಲಾಗುತ್ತದೆ. ಎಸ್.ಸಿ, ಎಸ್‌ಟಿ ಮತ್ತು ಓಬಿಸಿ ವಿದ್ಯಾರ್ಥಿಗಳು ಅಗತ್ಯ ದಾಖಲೆಗಳನ್ನು ಒದಗಿಸಿದಲ್ಲಿ ಸರ್ಕಾರದ ಎಸ್‌ಎಸ್‌ಪಿ ಮೂಲಕ ವಿದ್ಯಾರ್ಥಿ ವೇತನವನ್ನು ಪಡೆಯಬಹುದಾಗಿದೆ.
ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ಕ.ರಾ.ಮು.ವಿ. ವಿಜಯಪುರ ಪ್ರಾದೇಶಿಕ ಕೇಂದ್ರ, ವಿ.ಎಸ್.ಜಿ. ಕಲಾ ಹಾಗೂ ವಾಣಿಜ್ಯ ಮಹಾವಿದ್ಯಾಲಯದ ಆವರಣ, ಆಕಾಶವಾಣಿ, ಕೇಂದ್ರದ ಎದುರುಗಡೆ ರಿಂಗ್‌ರಸ್ತೆ, ವಿಜಯಪುರ ಹಾಗೂ ಮೊಬೈಲ್ ಸಂಖ್ಯೆ ೯೪೮೩೬೨೮೨೬೭, ೯೪೮೩೯೨೦೦೬೫, ೭೮೯೨೫೫೦೦೫೩, ೯೧೧೦೨೫೬೭೩೮ ಸಂಪರ್ಕಿಸುವಂತೆ ಪ್ರಾದೇಶಿಕ ನಿರ್ದೇಶಕರಾದ ಮೈತ್ರಿ ಡಿ.ಎಸ್. ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Subscribe to Updates
Get the latest creative news from FooBar about art, design and business.
Related Posts
Add A Comment
