ವಿಜಯಪುರ: ನಗರದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿನ ಪುತ್ಥಳಿಗೆ ನಗರ ಶಾಸಕ ಬಸನಗೌಡ ರಾ ಪಾಟೀಲ ಯತ್ನಾಳ ಅವರು ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು.
ನಗರ ಶಾಸಕರು ತಮ್ಮ ಅವಧಿಯಲ್ಲಿ ನಿರ್ಮಾಣ ಮಾಡಲಾದ ಅತ್ಯಾಕರ್ಷಕ ಅಂಬೇಡ್ಕರ್ ಪುತ್ಥಳಿಗೆ, ಜಯಂತಿ ಅಂಗವಾಗಿ ಮಾಲಾರ್ಪಣೆ ಸಲ್ಲಿಸಿ, ಜಗತ್ತಿಗೆ ಮಾದರಿಯಾದ ಸಂವಿಧಾನದ ಕೊಡುಗೆ ನೀಡಿರುವ ಅಂಬೇಡ್ಕರ ಅವರ ವಿಚಾರದಾರೆಗಳನ್ನು ಪ್ರತಿಯೊಬ್ಬರು ತಿಳಿದುಕೊಳ್ಳುವುದಲ್ಲದೆ, ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದ ಅವರು, ಶೋಷಿತ ಸಮುದಾಯಗಳ ಏಳಿಗೆಗಾಗಿ ಶ್ರಮಿಸಿದ ಮಹಾನ್ ನಾಯಕ ಅಂಬೇಡ್ಕರರು ಎಂದು ಹೇಳಿದರು.
ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪರಶುರಾಮಸಿಂಗ್ ರಜಪುತ, ಸದಸ್ಯರಾದ ಮಡಿವಾಳ ಯಾಳವಾರ, ಮಹಾನಗರ ಪಾಲಿಕೆ ಸದಸ್ಯರಾದ ರಾಜಶೇಖರ ಮಗಿಮಠ, ರಾಜಶೇಖರ ಕುರಿಯವರ ಸೇರಿದಂತೆ ದಲಿತ ಮುಖಂಡರು, ಪಕ್ಷದ ಮುಖಂಡರು, ಕಾರ್ಯಕರ್ತರು, ಅಭಿಮಾನಿಗಳು ಇದ್ದರು.
ಪ್ರಚಾರ ಕಾರ್ಯಾಲಯದಲ್ಲಿ ಜಯಂತಿ ಆಚರಣೆ
ನಗರ ವಿಧಾನಸಭಾ ಮತಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸನಗೌಡ ರಾ ಪಾಟೀಲ ಯತ್ನಾಳ ಅವರ ಚುನಾವಣಾ ಪ್ರಚಾರ ಕಾರ್ಯಾಲಯದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ಅಂಗವಾಗಿ ಅಂಬೇಡ್ಕರ್ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಮಾಲಾರ್ಪಣೆ ಮಾಡುವ ಮೂಲಕ ಗೌರವ ಸಲ್ಲಿಸಲಾಯಿತು.
ಬಿಜೆಪಿ ಪಕ್ಷದ ಮುಖಂಡರು, ಕಾರ್ಯಕರ್ತರು, ಅಭಿಮಾನಿಗಳು, ಮಹಿಳೆಯರು ಇದ್ದರು.
Related Posts
Add A Comment