Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 12, 2026

ಬಿ.ಎಲ್.ಡಿ.ಇ ಸಂಸ್ಥೆಯಿಂದ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ನೆರವು

ವಾರ್ಡನ್ ಕಿರುಕುಳಕ್ಕೆ ಬೇಸತ್ತು ಹೆಡ್ ಕುಕ್ ಆತ್ಮಹತ್ಯೆ!

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಆ.೨೮ರಂದು ಗಡಿನಾಡ ಚೇತನ ಪ್ರಶಸ್ತಿ ಪ್ರದಾನ ಸಮಾರಂಭ
(ರಾಜ್ಯ ) ಜಿಲ್ಲೆ

ಆ.೨೮ರಂದು ಗಡಿನಾಡ ಚೇತನ ಪ್ರಶಸ್ತಿ ಪ್ರದಾನ ಸಮಾರಂಭ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಕರ್ನಾಟಕ ಗಡಿ ಪ್ರದೇಶ ಅಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಸೋಮಣ್ಣ ಬೇವಿನಮರದ ಮಾಹಿತಿ

ವಿಜಯಪುರ: ಕರ್ನಾಟಕ ಸುವರ್ಣ-ಸಂಭ್ರಮ-೫೦ರ ಅದ್ದೂರಿಯಾಗಿ ಆಚರಣೆಯೊಂದಿಗೆ ಸಂಭ್ರಮವನ್ನು ವೈಶಿಷ್ಟ ಪೂರ್ಣವಾಗಿ ಆಯೋಜಿಸಲಾಗುವುದು ಎಂದು ಕರ್ನಾಟಕ ಗಡಿ ಪ್ರದೇಶ ಅಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಸೋಮಣ್ಣ ಬೇವಿನಮರದ ಹೇಳಿದರು.
ಮಂಗಳವಾರ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕರ್ನಾಟಕ ಸುವರ್ಣ-ಸಂಭ್ರಮ-೫೦ರ ಹೆಸರಾಯಿತು ಕರ್ನಾಟಕ ಉಸಿರಾಗಲಿ ಕನ್ನಡ ಅಭಿಯಾನದ ಅಂಗವಾಗಿ ಹೊರನಾಡಿನಲ್ಲಿ ಆಯೋಜಿಸುವ ಕಾರ್ಯಕ್ರಮ ಪೂರ್ವಬಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ರಾಜ್ಯದ ವಿಜಯಪುರ ಸೇರಿದಂತೆ ರಾಯಚೂರ, ಮಂಗಳೂರು, ಮೈಸೂರು ೪ ಗಡಿ ಜಿಲ್ಲೆಗಳಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದ್ದು, ವಿಜಯಪುರ ಜಿಲ್ಲೆಯಲ್ಲಿ ಆಯೋಜಿಸಿರುವ ಕಾರ್ಯಕ್ರಮ ಬೆಳಗಾವಿ ವಿಭಾಗದ ಪ್ರಥಮ ಕಾರ್ಯಕ್ರಮವಾಗಿದೆ.
ಜಿಲ್ಲೆಯಲ್ಲಿ ಆಯೋಜಿಸುವ ಕಾರ್ಯಕ್ರಮವನ್ನು ಅತ್ಯಂತ ವೈಶಿಷ್ಟಪೂರ್ಣವಾಗಿ ಹಮ್ಮಿಕೊಂಡಿದ್ದು, ಜಿಲ್ಲೆಗೆ ಹೊಂದಿಕೊಂಡಿರುವ ಮಹಾರಾಷ್ಟದ ಸಾಂಗ್ಲಿ ಜಿಲ್ಲೆಯ ಜತ್ತ ತಾಲೂಕಿನ ಗುಡ್ಡಾಪುರ ಶ್ರೀ ದಾನಮ್ಮದೇವಿ ದೇವಸ್ಥಾನದ ಆವರಣದಲ್ಲಿ ಆಗಸ್ಟ ೨೮ ರಂದು ಮಾನ್ಯ ಮುಖ್ಯ ಮಂತ್ರಿಗಳು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ.
ಕರ್ನಾಟಕದ ಹಿರಿಯ ಚೇತನಗಳಾದ ನಾಡೋಜ ಡಾ. ಕಯ್ಯಾರ ಕಿಞಣ್ಣ ರೈ, ಪೂಜ್ಯ ಡಾ.ಚನ್ನಬಸವ ಪಟ್ಟದೇವರು, ಡಾ.ಜಯದೇವಿ ತಾಯಿ ಲಿಗಾಡೆ ಅವರ ಹೆಸರಿನಲ್ಲಿ ಸ್ಥಾಪಿಸಲಾದ ಗಡಿನಾಡ ಚೇತನ ರಾಜ್ಯ ಪ್ರಶಸ್ತಿ ಪ್ರಧಾನ ಸಮಾರಂಭವು ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.
ಕಾರ್ಯಕ್ರಮ ಅಚ್ಚುಕಟ್ಟಾಗಿ ಹಾಗೂ ವಿಜ್ರಂಭಣೆಯಿಂದ ಆಯೋಜಿಸಲು ಈಗಾಗಲೇ ಶ್ರೀ ದಾನಮ್ಮ ದೇವಿ ದೇವಸ್ಥಾನಕ್ಕೆ ಭೇಟಿ ಅಲ್ಲಿಯ ದೇವಸ್ಥಾನ ಟ್ರಸ್ಟ್ನ ಸದಸ್ಯರೊಂದಿಗೆ ಸಭೆ ನಡೆಸಿ ಎಲ್ಲ ರೀತಿಯ ಸಹಾಯ ಸಹಕಾರ ಕೋರಲಾಗಿದೆ ಮಹಾರಾಷ್ಟ್ರದ ಸಾಂಗ್ಲಿ ಜಿಲ್ಲೆಯಲ್ಲಿ ಜತ್ತ ತಾಲೂಕಿನಲ್ಲಿ ದೇವಸ್ಥಾನ ಇರುವುದರಿಂದ ಸಾಂಗ್ಲಿಯ ಜಿಲ್ಲಾಡಳಿದ ಸಹಕಾರ ಕೋರಲಾಗಿದೆ ಎಂದು ಅವರು ಹೇಳಿದರು.
ಜಿಲ್ಲೆಯ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಹಾಗೂ ಎಲ್ಲ ಚುನಾಯಿತ ಜನ ಪ್ರತಿನಿದಿಗಳು ಸಹಕಾರದೊಂದಿಗೆ ಅದ್ದೂರಿಯಾಗಿ ಸಂಭ್ರಮದಿಂದ ಕಾರ್ಯಕ್ರಮವನ್ನು ಆಯೋಜಿಸಲಾಗುತ್ತಿದೆ. ಅಂದು ಸ್ಥಳೀಯ ಕಲಾವಿದರುಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿವೆ ಇದರೊಂದಿಗೆ ಗಡಿಭಾಗದ ಸಮಸ್ಯೆಗಳ ಕುರಿತು ವಿಚಾರ ವಿನಿಮಯ ನಡೆಯಲಿದೆ ಎಂದು ಅವರು ಹೇಳಿದರು.
ಕಾರ್ಯಕ್ರಮದಲ್ಲಿ ಸ್ವಾಗತ, ಮೆರವಣಿಗೆ, ವೇದಿಕೆ ನಿರ್ಮಾಣ, ಸಂಸ್ಕೃತಿಕ ಕಾರ್ಯಕ್ರಮ, ವಿಚಾರ ಗೋಷ್ಠಿ, ಸಾರಿಗೆ, ವಸತಿ, ಪ್ರಚಾರ, ಆರೋಗ್ಯ, ಸ್ವಚ್ಚತಾ, ಭದ್ರತೆ ಹಾಗೂ ಊಟೋಪಚಾರ ಸಮಿತಿಗಳನ್ನು ರಚಿಸಲಾಗುವುದು. ಅಚ್ಚು ಕಟ್ಟಾಗಿ ಕರ್ತವ್ಯ ನಿರ್ವಹಿಸಲು ಸಮಿತಿಗಳು ಜವಾಬ್ದಾರಿಯುತವಾಗಿ ಅಚ್ಚುಕಟ್ಟಾಗಿ ಕಾರ್ಯನಿರ್ವಹಿಸಲು ನೋಡಿಕೊಳ್ಳುವಂತೆ ರಾಜ್ಯ ಮಟ್ಟದ ಅಧಿಕಾರಿಯೋರ್ವರನ್ನು ನೇಮಿಸಲಾಗುವುದು ಎಂದು ಅವರು ತಿಳಿಸಿದರು.
ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಹಾಗೂ ಚುನಾಯಿತ ಜನಪ್ರತಿನಿಧಿಗಳು ಭಾಗವಹಿಸಲಿರುವುದರಿಂದ, ಸುಸಜ್ಜಿತ ಶಾಮಿಯಾನ, ಕುಡಿಯುವ ನೀರಿನ ವ್ಯವಸ್ಥೆಗೆ ಕ್ರಮ ವಹಿಸಲಾಗುತ್ತಿದೆ. ಕಾರ್ಯಕ್ರಮವನ್ನು ಯಶಸ್ವಿಯಾಗಿ ಆಯೋಜಿಸುವಂತೆ ಎಲ್ಲರೂ ಸಹಕರಿಸುವಂತೆ ಅವರು ತಿಳಿಸಿದರು.
ಜಿಲ್ಲಾಧಿಕಾರಿ ಟಿ.ಭೂಬಾಲನ್ ಮಾತನಾಡಿ, ಕಾರ್ಯಕ್ರಮ ವಿಜ್ರಂಭಣೆಯಿಂದ ನಡೆಸಲು ಜಿಲ್ಲಾಡಳಿತ ಎಲ್ಲ ರೀತಿಯ ಸಹಾಯ ಸಹಕಾರ ನೀಡುವುದಾಗಿ ತಿಳಿಸಿದರು.
ಸಭೆಯಲ್ಲಿ ಧಾರವಾಡ ಬಾಲ ವಿಕಾಸ ಅಕಾಡೆಮಿ ಅಧ್ಯಕ್ಷ ಸಂಗಮೇಶ ಬಬಲೇಶ್ವರ, ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಪ್ರಕಾಶ ಮತ್ತೀಹಳ್ಳಿ, ಸದಸ್ಯರಾದ ಸಂಜೀವಕುಮಾರ ಅತಿವಾಳೆ, ಅಶೋಕ ಚಂದರಗಿ, ಡಾ.ಎಮ್.ಎಸ್ ಮಧಬಾವಿ, ಭಗತ್‌ರಾಜ್, ಶಿವರೆಡ್ಡಿ ಖೇಡದ, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಿಷಿ ಆನಂದ, ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಜಂಟಿ ನಿರ್ದೇಶಕ ಅಶೋಕ ಚಲವಾದಿ, ವಿಜಯಪುರ ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತ ರಾಜಶೇಖರ ಡಂಬಳ, ಮಹಾನಗರ ಪಾಲಿಕೆ ಆಯುಕ್ತ ವಿಜಯಕುಮಾರ ಮೆಕ್ಕಳಕಿ, ಜಿಲ್ಲಾ ಹೆಚ್ಚುವರಿ ಪಿಲೀಸ್ ವರಿಷ್ಠಾಧಿಕಾರಿ ಶಂಕರ ಮಾರಿಹಾಳ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಸಂತೋಷ ಬೋವಿ, ದಾನಮ್ಮ ದೇವಿ ದೇವಸ್ಥಾನ ಟ್ರಸ್ಟನ ಉಪಾಧ್ಯಕ್ಷ ಚಂದ್ರಶೇಖರ ಗೊಬ್ಬಿ, ನಿರ್ದೇಶಕ ಪ್ರಕಾಶ ಗಣಿ ಹಾಗೂ ವಿವಿಧ ತಾಲೂಕಿನ ತಹಶೀಲ್ದಾರರು, ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 12, 2026

ಬಿ.ಎಲ್.ಡಿ.ಇ ಸಂಸ್ಥೆಯಿಂದ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ನೆರವು

ವಾರ್ಡನ್ ಕಿರುಕುಳಕ್ಕೆ ಬೇಸತ್ತು ಹೆಡ್ ಕುಕ್ ಆತ್ಮಹತ್ಯೆ!

ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚುನಾವಣೆಯಲ್ಲಿ ಗೊಂದಲ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 12, 2026
    In ದಿನಪತ್ರಿಕೆ
  • ಬಿ.ಎಲ್.ಡಿ.ಇ ಸಂಸ್ಥೆಯಿಂದ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ನೆರವು
    In (ರಾಜ್ಯ ) ಜಿಲ್ಲೆ
  • ವಾರ್ಡನ್ ಕಿರುಕುಳಕ್ಕೆ ಬೇಸತ್ತು ಹೆಡ್ ಕುಕ್ ಆತ್ಮಹತ್ಯೆ!
    In (ರಾಜ್ಯ ) ಜಿಲ್ಲೆ
  • ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚುನಾವಣೆಯಲ್ಲಿ ಗೊಂದಲ
    In (ರಾಜ್ಯ ) ಜಿಲ್ಲೆ
  • ಪತ್ರಕರ್ತರು ವಸ್ತುನಿಷ್ಠವಾಗಿ, ಶೋಧನೆ ಮಾಡಿ ಬರೆಯಬೇಕು
    In (ರಾಜ್ಯ ) ಜಿಲ್ಲೆ
  • ಅಧ್ಯಕ್ಷರಾಗಿ ಮಹೇಶ್, ಉಪಾಧ್ಯಕ್ಷರಾಗಿ ಜಯ ಅವಿರೋಧ ಆಯ್ಕೆ
    In (ರಾಜ್ಯ ) ಜಿಲ್ಲೆ
  • ಸಿ.ವಿ.ರಾಮನ್ ಪ.ಪೂ ಕಾಲೇಜ್ ಉತ್ತಮ ಸಾಧನೆ
    In (ರಾಜ್ಯ ) ಜಿಲ್ಲೆ
  • ಗುರು ಸಂಗನಬಸವ ಸ್ವಾಮೀಜಿ ಅಡ್ಡಪಲ್ಲಕ್ಕಿ ಉತ್ಸವ & ಅಗ್ನಿ ಪ್ರವೇಶ
    In (ರಾಜ್ಯ ) ಜಿಲ್ಲೆ
  • ಬೊಗಸೆಯಲ್ಲಿ ಅರಳುವ ನಿನ್ನಂದದ ಮುಖಕೆ
    In ವಿಶೇಷ ಲೇಖನ
  • ಕಲಕೇರಿ ಬಸವೇಶ್ವರ ಪ.ಪೂ ಕಾಲೇಜು ಅತ್ಯುತ್ತಮ ಸಾಧನೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.