Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ವಿದ್ಯಾರ್ಥಿಗಳು ಭವಿಷ್ಯದ ಕನಸನ್ನು ಸಾಕರಗೊಳಿಸಲು ಪ್ರಯತ್ನಿಸಿ :ಜಾಧವ
(ರಾಜ್ಯ ) ಜಿಲ್ಲೆ

ವಿದ್ಯಾರ್ಥಿಗಳು ಭವಿಷ್ಯದ ಕನಸನ್ನು ಸಾಕರಗೊಳಿಸಲು ಪ್ರಯತ್ನಿಸಿ :ಜಾಧವ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ದೇವರಹಿಪ್ಪರಗಿ: ವಿದ್ಯಾರ್ಥಿಗಳು ಭವಿಷ್ಯದ ಕನಸನ್ನು ಸಾಕರಗೊಳಿಸಲು ಪ್ರಾಮಾಣಿಕ ಪ್ರಯತ್ನ ಮಾಡಿದಾಗ ಮಾತ್ರ ಆಗ ಕನಸು ನನಸಾಗಲು ಸಾಧ್ಯ ಎಂದು ವಿಶ್ರಾಂತ ದೈಹಿಕ ನಿರ್ದೇಶಕ ಅಶೋಕಕುಮಾರ ಜಾಧವ ಹೇಳಿದರು.
ಪಟ್ಟಣದ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಮಂಗಳವಾರ ಜರುಗಿದ ೨೦೨೩-೨೪ನೇ ಶೈಕ್ಷಣಿಕ ಸಾಲಿನ ಸಾಂಸ್ಕೃತಿಕ, ಕ್ರೀಡೆ, ಎನ್‌ಎಸ್‌ಎಸ್, ಸ್ಕೌಟ್‌ಗೈಡ್ಸ್ ರೆಡ್‌ಕ್ರಾಸ್ ಚಟುವಟಿಕೆಗಳ ಸಮಾರೋಪ ಹಾಗೂ ಅಂತಿಮ ವರ್ಷದ ವಿದ್ಯಾರ್ಥಿಗಳ ಬಿಳ್ಕೋಡುವ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದರು.
ಗ್ರಾಮೀಣ ಪ್ರದೇಶದ ಪ್ರತಿಯೊಬ್ಬ ವಿದ್ಯಾರ್ಥಿ ಭವಿಷ್ಯದ ಕುರಿತು ಕನಸು ಹೊಂದಿ ತನ್ನ ಕನಸಿನ ಕುರಿತು ಹುಚ್ಚಾಗಬೇಕು ಆಗ ಮಾತ್ರ ಕನಸು ಸಾಕಾರಗೊಳ್ಳುವುದು. ಕಳೆದ ಎರಡು ವರ್ಷಗಳ ಅವಧಿಯಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಅಡಿಯಲ್ಲಿ ಬೆಳಗಾವಿ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಏಕವಲಯ ಅಂತರ ಕಾಲೇಜು ಮಹಿಳೆಯರ ಕಬಡ್ಡಿ ಪಂದ್ಯಾವಳಿ, ಅಂತರ ಮಹಾವಿದ್ಯಾಲಯಗಳ ೮ನೇ ಅಥ್ಲೇಟಿಕ್ ಕ್ರೀಡಾಕೂಟ, ಕ್ರಿಕೆಟ್ ಪಂದ್ಯಾವಳಿಗಳನ್ನು ಏರ್ಪಡಿಸುವುದರ ಮೂಲಕ ಮೂವರು ವಿದ್ಯಾರ್ಥಿಗಳು ಯೂನಿವರ್ಸಿಟಿ ಬ್ಲೂಗಳಾಗಿದ್ದು ಹಾಗೂ ೨೦ ಕಿ.ಮೀಗಳ ಮ್ಯಾರಥಾನ್ ಸ್ಪರ್ಧೆಯಲ್ಲಿ ಕಾಲೇಜಿನ ನೀಲಮ್ಮ ಪೂಜಾರಿ ಹಾಗೂ ಕುರೇಶಾಭಾನು ೩ ಮತ್ತು ೪ನೇ ಸ್ಥಾನ ಪಡೆದಿದ್ದು ನನ್ನ ಕ್ರೀಡಾಜೀವನದ ಅಮೂಲ್ಯ ಕ್ಷಣಗಳು. ಇದಕ್ಕೆ ಕಾರಣೀಭೂತರಾದ ಕಾಲೇಜಿನ ಪ್ರಾಂಶುಪಾಲ ಸಹಿತ ಸಿಬ್ಬಂದಿ ಹಾಗೂ ಪಟ್ಟಣದ ಕ್ರೀಡಾಪ್ರೇಮಿಗಳಿಗೆ ಅನಂತ ಧನ್ಯವಾದ ತಿಳಿಸುತ್ತಾ ಭಾವುಕರಾದರು.
ಕೊಂಡಗೂಳಿ ಕೇಶಿರಾಜ ಪ್ರೌಢಶಾಲೆಯ ವಿಶ್ರಾಂತ ಮುಖ್ಯಶಿಕ್ಷಕ ಎಸ್.ಎನ್.ಬಸವರೆಡ್ಡಿ ಮಾತನಾಡಿ, ವಿದ್ಯಾರ್ಥಿಗಳು ಭವಿಷ್ಯವನ್ನು ದೃಷ್ಟಿಯಲ್ಲಿಟ್ಟುಕೊಂಡು ಅಧ್ಯಯನಿಸುವ ಅಗತ್ಯತೆಯಿದೆ ಎಂದು ಹೇಳುತ್ತಾ, ರಾಜಕೀಯ, ಸಂಸ್ಕೃತಿ, ಕನ್ನಡ ಭಾಷಾಭಿಮಾನದ ಕುರಿತು ಸುದೀರ್ಘವಾಗಿ ಮಾತನಾಡಿದರು.
ಕಾಲೇಜು ಪ್ರಾಂಶುಪಾಲ ಅಶೋಕ ಹೆಗಡೆ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸುಶ್ಮೀತಾ ಹಳ್ಳಿ ವಿದ್ಯಾರ್ಥಿನಿಯಿಂದ ನಂದ ನಂದ ನಾನೇನು ಶ್ರೀಕೃಷ್ಣ ಎಂಬ ಗೀತೆಗೆ ಭರತನಾಟ್ಯ ಜರುಗಿತು. ನಂತರ ವಿವಿಧ ಚಟುವಟಿಕೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಪಾರಿತೋಷಕ ವಿತರಿಸಲಾಯಿತು. ಜೊತೆಗೆ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.
ಕೊನೆಯಲ್ಲಿ ಅಂತಿಮ ವರ್ಷದ ವಿದ್ಯಾರ್ಥಿಗಳನ್ನು ಶುಭಕೋರುವ ಮೂಲಕ ಬಿಳ್ಕೋಡಲಾಯಿತು.
ಪ್ರಾಥಮಿಕ ಶಾಲಾ ಮುಖ್ಯಶಿಕ್ಷಕ ಪಿ.ಸಿ.ತಳಕೇರಿ, ಅಧೀಕ್ಷಕ ಜಗನ್ನಾಥ ಸಜ್ಜನ, ಉಪನ್ಯಾಸಕರುಗಳಾದ ಎಸ್.ಬಿ.ಜಾಲವಾದಿ, ಅಕ್ರಮಪಾಷಾ, ದ್ರಾಕ್ಷಾಯಣಮ್ಮ ಎನ್.ಪಿ, ಪ್ರೇಮಕುಮಾರಿ ಪಿ. ಜ್ಯೋತಿ ಹೂಗಾರ, ಎಮ್.ಎಸ್.ಶಿವಶರಣರ, ಬಿ.ಎಸ್.ಬಗಲಿ, ಎಸ್.ಎಸ್.ಗೌಡರ, ಶಿವಕುಮಾರ ಹಿರೇಮಠ, ಗೋಪಾಲ ಚಕ್ರಸಾಲಿ, ವಿಜಯಲಕ್ಷ ್ಮೀ, ಯಾಸ್ಮೀನ್ ನದಾಫ್, ಬಿ.ಎಚ್.ಹೊಸಮಟ್ಟಿ, ಭೀಮನಗೌಡ ಬಿರಾದಾರ, ಬಿ.ಎಚ್.ಹೊನಮಟ್ಟಿ, ಸವಿತಾ ಪಾಟೀಲ, ಎಚ್.ಎ.ಇನಾಮದಾರ ಸೇರಿದಂತೆ ವಿದ್ಯಾರ್ಥಿಗಳು, ಸಿಬ್ಬಂದಿ ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್
    In (ರಾಜ್ಯ ) ಜಿಲ್ಲೆ
  • ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ
    In (ರಾಜ್ಯ ) ಜಿಲ್ಲೆ
  • ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ
    In (ರಾಜ್ಯ ) ಜಿಲ್ಲೆ
  • ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ
    In ವಿಶೇಷ ಲೇಖನ
  • ಸರಗೂರು ತಾಲೂಕಿನಲ್ಲಿ ನಿಲ್ಲದ ಕಾಡುಪ್ರಾಣಿ-ಮಾನವ ಸಂಘರ್ಷ
    In (ರಾಜ್ಯ ) ಜಿಲ್ಲೆ
  • ಕೇವಲ ಅಂಕ ಗಳಿಕೆ ಶಿಕ್ಷಣವಲ್ಲˌ ತಹಶೀಲ್ದಾರ ಅನೀಲ ಬಡಿಗೇರ
    In (ರಾಜ್ಯ ) ಜಿಲ್ಲೆ
  • ಸಾರ್ವಜನಿಕ ಬ್ಯಾಂಕುಗಳಿಂದ ಆರ್ಥಿಕ ಸಾಕ್ಷರತೆ ಸಪ್ತಾಹ
    In (ರಾಜ್ಯ ) ಜಿಲ್ಲೆ
  • ಶನಿವಾರ ವಿದ್ಯುತ್ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಆಂಧ್ರದಲ್ಲಿ ಕೆ.ಜಿ ತಂಬಾಕಿಗೆ 400, ಕರ್ನಾಟಕದಲ್ಲಿ ಕೇವಲ 292 ರೂ.ಹೆಚ್ ಡಿ ಕೋಟೆಯಲ್ಲಿ ಹರಾಜು ಮಾರುಕಟ್ಟೆ ಬಂದ್, ರೈತರ ಆಕ್ರೋಶ
    In (ರಾಜ್ಯ ) ಜಿಲ್ಲೆ
  • ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಡಿಯಲ್ಲಿ ನಿರ್ಗತಿಕರಿಗೆ ವಾತ್ಸಲ್ಯ ಕಿಟ್ ವಿತರಣೆಉದಯರಶ್ಮಿ ದಿನಪತ್ರಿಕೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.