ವಿಜಯಪುರ: ೨೦೨೪-೨೫ನೇ ಸಾಲಿಗೆ ನಗರ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ನಿಧಿಯಡಿ ನಗರ ಮತಕ್ಷೇತ್ರ ವ್ಯಾಪ್ತಿಯಲ್ಲಿ ಆರೋಗ್ಯ, ಶಿಕ್ಷಣ ಹಾಗೂ ವಿಕಲಚೇತನರಿಗೆ ಸೌಲಭ್ಯ ಕಲ್ಪಿಸಲು ರೂ.೬೦ ಲಕ್ಷ ಅನುದಾನ ಮಂಜೂರು ಮಾಡಲಾಗಿದೆ ಎಂದು ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು ತಿಳಿಸಿದ್ದಾರೆ.
ನಗರ ಮತಕ್ಷೇತ್ರ ವ್ಯಾಪ್ತಿಯ ವಾರ್ಡ ನಂ.೭ ರ ಡೋಬಳೆ ಗಲ್ಲಿಯ ಪ್ರಾಥಮಿಕ ಆರೋಗ್ಯ ಕೇಂದ್ರದ ಕಟ್ಟಡ ನಿರ್ಮಾಣಕ್ಕೆ ರೂ.೧೦ ಲಕ್ಷ, ವಾರ್ಡ ನಂ. ೨೧ರ ಗಣೇಶ ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಕಟ್ಟಡ ನಿರ್ಮಾಣಕ್ಕೆ ರೂ.೧೦ ಲಕ್ಷ, ವಾರ್ಡ ನಂ.೩ರ ಗ್ಯಾಂಗ್ ಬಾವಡಿ ಸರ್ಕಾರಿ ಕನ್ನಡ ಹೆಣ್ಣು ಮಕ್ಕಳ ಶಾಲೆ ನಂ.೭ಕ್ಕೆ ರೂ.೧೦ ಲಕ್ಷ, ವಾರ್ಡ ನಂ.೬ರ ಕೆ.ಎಚ್.ಬಿ ಕಾಲೊನಿಯಲ್ಲಿ ಗ್ರಂಥಾಲಯ ನಿರ್ಮಾಣಕ್ಕೆ ರೂ.೧೦ ಲಕ್ಷ ಹಾಗೂ ವಿಕಲಚೇತನರ ಅಭಿವೃದ್ಧಿ/ಕಲ್ಯಾಣ ಕಾರ್ಯಕ್ರಮಕ್ಕಾಗಿ ರೂ.೨೦ ಲಕ್ಷ ಅನುದಾನ ಮಂಜೂರಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Subscribe to Updates
Get the latest creative news from FooBar about art, design and business.
Related Posts
Add A Comment

