Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 12, 2026

ಬಿ.ಎಲ್.ಡಿ.ಇ ಸಂಸ್ಥೆಯಿಂದ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ನೆರವು

ವಾರ್ಡನ್ ಕಿರುಕುಳಕ್ಕೆ ಬೇಸತ್ತು ಹೆಡ್ ಕುಕ್ ಆತ್ಮಹತ್ಯೆ!

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಕ್ರೀಡಾಸಕ್ತಿ ಬೆಳೆಸುವಲ್ಲಿ ದೈಹಿಕ ಶಿಕ್ಷಕರ ಪಾತ್ರ ದೊಡ್ಡದು :ಪಟ್ಟಣಶೆಟ್ಟಿ
(ರಾಜ್ಯ ) ಜಿಲ್ಲೆ

ಕ್ರೀಡಾಸಕ್ತಿ ಬೆಳೆಸುವಲ್ಲಿ ದೈಹಿಕ ಶಿಕ್ಷಕರ ಪಾತ್ರ ದೊಡ್ಡದು :ಪಟ್ಟಣಶೆಟ್ಟಿ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಬಸವನಬಾಗೇವಾಡಿ: ವಿದ್ಯಾರ್ಥಿಗಳಲ್ಲಿ ಕ್ರೀಡಾಮನೋಭಾವ ಬೆಳೆಸುವಲ್ಲಿ ದೈಹಿಕ ಶಿಕ್ಷಕರ ಪಾತ್ರ ಬಹಳಷ್ಟು ಮಹತ್ವವಿದೆ. ವಿದ್ಯಾರ್ಥಿಗಳು ಸೋಲು-ಗೆಲುವು ಸಮಾನವಾಗಿ ಸ್ವೀಕರಿಸುವ ಮೂಲಕ ಕ್ರೀಡಾಕೂಟಗಳಲ್ಲಿ ಭಾಗವಹಿಸಬೇಕೆಂದು ರಾಜ್ಯ ಸಹಕಾರ ಮಹಾಮಂಡಳ ನಿರ್ದೇಶಕ ಈರಣ್ಣ ಪಟ್ಟಣಶೆಟ್ಟಿ ಹೇಳಿದರು.
ತಾಲೂಕಿನ ಇವಣಗಿ ಗ್ರಾಮದ ಸರ್ಕಾರಿ ಮಾದರಿ ಪ್ರಾಥಮಿಕ ಶಾಲಾ ಆವರಣದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಮತ್ತು ಕ್ಷೇತ್ರಸಮನ್ವಾಧಿಕಾರಿಗಳ ಕಾರ್ಯಾಲಯ, ನರಲಸಗಿ ಸಮೂಹ ಸಂಪನ್ಮೂಲ ಕೇಂದ್ರ ಹಾಗೂ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯ ಸಹಯೋಗದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ನರಸಲಗಿ ಗ್ರಾಮ ಪಂಚಾಯಿತಿ ಮಟ್ಟದ ಪ್ರಾಥಮಿಕ ಶಾಲೆಗಳ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿದ ಅವರು, ಮಕ್ಕಳ ಸರ್ವತೋಮುಖ ಬೆಳವಣಿಗೆಯಲ್ಲಿ ಶಿಕ್ಷಣದಷ್ಟೇ ಕ್ರೀಡೆಗೂ ಮಹತ್ವ ನೀಡಬೇಕು. ಎಲ್ಲ ಮಕ್ಕಳು ತಮ್ಮ ಪಠ್ಯ ಚಟುವಟಿಕೆಗಳೊಂದಿಗೆ ಪಠ್ಯೇತರ ಚಟುವಟಿಕೆಗಳಲ್ಲಿಯೂ ಭಾಗವಹಿಸುವ ಮೂಲಕ ತಮ್ಮಲ್ಲಿರುವ ಪ್ರತಿಭೆಯನ್ನು ಅನಾವರಣಗೊಳಿಸಬೇಕೆಂದರು.
ಧ್ವಜಾರೋಹಣ ನೆರವೇರಿಸಿದ ಕ್ಷೇತ್ರಶಿಕ್ಷಣಾಧಿಕಾರಿ ವಸಂತ ರಾಠೋಡ ಮಾತನಾಡಿ, ಕ್ರೀಡೆಗಳು ಮಕ್ಕಳಲ್ಲಿ ಕಲಿಯುವ ಚೈತನ್ಯ ಮೂಡಿಸುತ್ತವೆ. ಮಕ್ಕಳು ಕ್ರೀಯಾಶೀಲತೆಯಿಂದ ಆಟೋಟಗಳಲ್ಲಿ ಭಾಗವಹಿಸುವಂತಾಗಬೇಕು. ನಿರ್ಣಾಯಕರು ನಿರ್ಣಯವನ್ನು ಪ್ರಾಮಾಣಿಕವಾಗಿ ನೀಡುವ ಮೂಲಕ ಉತ್ತಮ ಕ್ರೀಡಾಪಟುವನ್ನು ಆಯ್ಕೆ ಮಾಡಬೇಕೆಂದರು.
ನರಸಲಗಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಸಂಗನಗೌಡ ಬಿರಾದಾರ ಕ್ರೀಡಾಜ್ಯೋತಿ ಸ್ವೀಕರಿಸಿದರು. ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಶಿವಾನಂದ ಮಂಗಾನವರ ಅವರು ಬಲೂನು ಹಾರಿಸುವ ಮೂಲಕ ಕ್ರೀಡಾಕೂಟಕ್ಕೆ ಶುಭಕೋರಿ ಮಾತನಾಡಿದರು.
ಸಾನಿಧ್ಯವನ್ನು ಲಾಯಪ್ಪ ಪೂಜಾರಿ ವಹಿಸಿದ್ದರು. ಕಾರ್ಯಕ್ರಮದಲ್ಲಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲೂಕಾಧ್ಯಕ್ಷ ಬಿ.ಪಿ.ನಾಗಾವಿ, ತಾಲೂಕು ದೈಹಿಕ ಶಿಕ್ಷಣಾಧಿಕಾರಿ ಎಸ್.ಎಸ್.ಅವಟಿ, ಎಸ್ಡಿಎಂಸಿ ಅಧ್ಯಕ್ಷ ಮಂಜು ಇಟಗಿ, ಸಿಆರ್ಪಿ ಎಸ್.ಬಿ.ದಳವಾಯಿ, ಎಸ್.ಬಿ.ಬಾಗೇವಾಡಿ, ಕಲ್ಲು ಸೊನ್ನದ, ಬಿ.ವ್ಹಿ.ಚಕ್ರಮನಿ, ಎಸ್.ಎನ್.ಮಿಣಜಗಿ, ಪಿ.ಎ.ಇನಾಮದಾರ, ಎಸ್.ಸಿ.ಹಳ್ಳಿ, ನಿಂಗಪ್ಪ ಬಾಗೇವಾಡಿ, ಯಲಗೂರಪ್ಪ ಸುಭಾನಪ್ಪರ, ಸಿದ್ದಪ್ಪ ಅವಜಿ ಇತರರು ಇದ್ದರು. ಬಿ.ಬಿ.ಚಿಂಚೋಳಿ ಪ್ರತಿಜ್ಞಾ ವಿಧಿ ಬೋಧಿಸಿದರು. ಎಸ್.ಬಿ.ಪಾಗದ ಸ್ವಾಗತಿಸಿದರು. ಎಸ್.ಎಸ್.ಇಂಗಳೇಶ್ವರ ನಿರೂಪಿಸಿದರು. ಸಿದ್ದು ಬಾಗೇವಾಡಿ ವಂದಿಸಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 12, 2026

ಬಿ.ಎಲ್.ಡಿ.ಇ ಸಂಸ್ಥೆಯಿಂದ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ನೆರವು

ವಾರ್ಡನ್ ಕಿರುಕುಳಕ್ಕೆ ಬೇಸತ್ತು ಹೆಡ್ ಕುಕ್ ಆತ್ಮಹತ್ಯೆ!

ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚುನಾವಣೆಯಲ್ಲಿ ಗೊಂದಲ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 12, 2026
    In ದಿನಪತ್ರಿಕೆ
  • ಬಿ.ಎಲ್.ಡಿ.ಇ ಸಂಸ್ಥೆಯಿಂದ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ನೆರವು
    In (ರಾಜ್ಯ ) ಜಿಲ್ಲೆ
  • ವಾರ್ಡನ್ ಕಿರುಕುಳಕ್ಕೆ ಬೇಸತ್ತು ಹೆಡ್ ಕುಕ್ ಆತ್ಮಹತ್ಯೆ!
    In (ರಾಜ್ಯ ) ಜಿಲ್ಲೆ
  • ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚುನಾವಣೆಯಲ್ಲಿ ಗೊಂದಲ
    In (ರಾಜ್ಯ ) ಜಿಲ್ಲೆ
  • ಪತ್ರಕರ್ತರು ವಸ್ತುನಿಷ್ಠವಾಗಿ, ಶೋಧನೆ ಮಾಡಿ ಬರೆಯಬೇಕು
    In (ರಾಜ್ಯ ) ಜಿಲ್ಲೆ
  • ಅಧ್ಯಕ್ಷರಾಗಿ ಮಹೇಶ್, ಉಪಾಧ್ಯಕ್ಷರಾಗಿ ಜಯ ಅವಿರೋಧ ಆಯ್ಕೆ
    In (ರಾಜ್ಯ ) ಜಿಲ್ಲೆ
  • ಸಿ.ವಿ.ರಾಮನ್ ಪ.ಪೂ ಕಾಲೇಜ್ ಉತ್ತಮ ಸಾಧನೆ
    In (ರಾಜ್ಯ ) ಜಿಲ್ಲೆ
  • ಗುರು ಸಂಗನಬಸವ ಸ್ವಾಮೀಜಿ ಅಡ್ಡಪಲ್ಲಕ್ಕಿ ಉತ್ಸವ & ಅಗ್ನಿ ಪ್ರವೇಶ
    In (ರಾಜ್ಯ ) ಜಿಲ್ಲೆ
  • ಬೊಗಸೆಯಲ್ಲಿ ಅರಳುವ ನಿನ್ನಂದದ ಮುಖಕೆ
    In ವಿಶೇಷ ಲೇಖನ
  • ಕಲಕೇರಿ ಬಸವೇಶ್ವರ ಪ.ಪೂ ಕಾಲೇಜು ಅತ್ಯುತ್ತಮ ಸಾಧನೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.