ವಿಜಯಪುರ: ೨೦೨೪-೨೫ನೇ ಸಾಲಿನಲ್ಲಿ ಕರ್ನಾಟಕದ ಮೂಲ ನಿವಾಸಿ ಮಿಲಿಟರಿ ಪಿಂಚಣಿದಾರ ಮಾಜಿ ಸೈನಿಕರ ಮಕ್ಕಳಿಂದ ಶಿಷ್ಯವೇತನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.
ಒಂದನೇ ತರಗತಿಯಿಂದ ಅಂತಿಮ ವರ್ಷದ ಪದವಿ,ಡಿಪ್ಲೋಮಾ ಮತ್ತು ವೃತ್ತಿಪರ ಪದವಿಯವರೆಗೆ ಕರ್ನಾಟಕದಲ್ಲಿರುವ ಹಾಗೂ ಕರ್ನಾಟಕ ಸರ್ಕಾರದಿಂದ ಮಾನ್ಯತೆ ಪಡೆದ ವಿದ್ಯಾಸಂಸ್ಥೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸೈನಿಕರ ಮಕ್ಕಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ೩೦-೦೯-೨೦೨೪ ಕೊನೆಯ ದಿನವಾಗಿದೆ ಎಂದು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪನಿರ್ದೇಶಕರ ಪ್ರಕಟಣೆ ತಿಳಿಸಿದೆ.
Subscribe to Updates
Get the latest creative news from FooBar about art, design and business.
Related Posts
Add A Comment
