ವಿಜಯಪುರ: ೨೦೨೪-೨೫ನೇ ಸಾಲಿನಲ್ಲಿ ಮಿಲಿಟರಿ ಪಿಂಚಣಿ ರಹಿತ ಕರ್ನಾಟಕದ ಮಾಜಿ ಸೈನಿಕರ ಹಾಗೂ ಕರ್ನಾಟಕದಲ್ಲಿ ನೆಲೆಸಿರುವ ಹೊರರಾಜ್ಯದ ಮಾಜಿ ಸೈನಿಕರ ಮಕ್ಕಳಿಂದ ಶಿಷ್ಯವೇತನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.
ಒಂದನೇ ತರಗತಿಯಿಂದ ಅಂತಿಮ ವರ್ಷದ ಪದವಿ, ಡಿಪ್ಲೋಮಾ ಮತ್ತು ವೃತ್ತಿಪರ ಪದವಿಯವರೆಗೆ ಕರ್ನಾಟಕದಲ್ಲಿರುವ ಹಾಗೂ ಕರ್ನಾಟಕ ಸರ್ಕಾರದಿಂದ ಮಾನ್ಯತೆ ಪಡೆದ ವಿದ್ಯಾಸಂಸ್ಥೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸೈನಿಕರ ಮಕ್ಕಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ೩೦-೦೯-೨೦೨೪ ಕೊನೆಯ ದಿನವಾಗಿದೆ ಎಂದು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪನಿರ್ದೆಶಕರ ಪ್ರಕಟಣೆ ತಿಳಿಸಿದೆ.
Subscribe to Updates
Get the latest creative news from FooBar about art, design and business.
ಪಿಂಚಣಿ ರಹಿತ ಮಾಜಿ ಸೈನಿಕರ ಮಕ್ಕಳಿಂದ ಶಿಷ್ಯವೇತನಕ್ಕೆ ಅರ್ಜಿ ಆಹ್ವಾನ
Related Posts
Add A Comment
