ತಾಳಿಕೋಟಿ: ಉತ್ತಮ ಆಹಾರ ಪದ್ಧತಿ ಅಳವಡಿಸಿಕೊಳ್ಳುವುದರ ಜೊತೆಗೆ ದಿನನಿತ್ಯ ಒಂದಿಲ್ಲೊಂದು ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳುವುದರಿಂದ ಆರೋಗ್ಯ ಕಾಪಾಡಿಕೊಳ್ಳಬಹುದು ಆರೋಗ್ಯದ ಕುರಿತು ನಿರ್ಲಕ್ಷ ಬೇಡ ಎಲ್ಲ ಸಂಪತ್ತುಗಳಲ್ಲಿ ಆರೋಗ್ಯ ಸಂಪತ್ತು ಅಮೂಲ್ಯವಾಗಿದೆ ಎಂದು ತಾಲೂಕಾ ಪಂಚಾಯತ ಮನರೇಗಾ ಸಹಾಯಕ ನಿರ್ದೇಶಕಿ ಶ್ರೀಮತಿ ಸುಜಾತ ಯಡ್ರಾಮಿ ಹೇಳಿದರು. ಬುಧವಾರ ತಾಲೂಕಿನ ಬಾವೂರ ಗ್ರಾಮದಲ್ಲಿ ಆರೋಗ್ಯ ಅಮೃತ ಅಭಿಯಾನದಡಿ ಉಚಿತ ಆರೋಗ್ಯ ತಪಸಾಣೆ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಪಂಚಾಯತ ಅಭಿವೃದ್ಧಿ ಅಧಿಕಾರಿ ಶಂಕರ ತಳವಾರ ಅವರು ಮಾತನಾಡಿ ಆರೋಗ್ಯವಾಗಿದ್ದರೆ, ಸುಖ ಹಾಗೂ ನೆಮ್ಮದಿಯಿಂದ ಬಾಳಬಹುದು. ಮನುಷ್ಯ ಆರೋಗ್ಯವನ್ನು ಹಾಳು ಮಾಡಿಕೊಂಡು ರೋಗಗಳಿಗೆ ತುತ್ತಾದರೆ ಮಾನಸಿಕ ನೆಮ್ಮದಿಯನ್ನು ಕಳೆದುಕೊಳ್ಳುವುದರ ಜೊತೆಗೆ ದುಡಿದು ಸಂಪಾದಿಸಿದ ಹಣವನ್ನು ಆಸ್ಪತ್ರೆಗೆ ಖರ್ಚು ಮಾಡಿ ತೊಂದರೆಯನ್ನು ಅನುಭವಿಸಬೇಕಾಗುತ್ತದೆ. ಆದ್ದರಿಂದ ರೋಗದ ಲಕ್ಷಣಗಳು ಕಾಣುವ ಮುನ್ನವೇ ಆಗಾಗ್ಗೆ ಆರೋಗ್ಯ ತಪಾಸಣೆ ಮಾಡಿಸಿಕೊಂಡು ವೈದ್ಯರು ನೀಡುವ ಸಲಹೆ ಸೂಚನೆಗಳನ್ನು ಪಾಲಿಸಬೇಕು ಎಂದು ತಿಳಿಸಿದರು.
ಈ ಶಿಬಿರದಲ್ಲಿ ಮಧುಮೇಹ, ರಕ್ತದೊತ್ತಡ ಕಾಯಿಲೆಗಳ ತಪಾಸಣೆ ನೆಡೆಸಿ ಅಗತ್ಯ ಇರುವ ರೋಗಿಗಳಿಗೆ ಉಚಿತ ಔಷಧಿ ವಿತರಣೆ ಮಾಡಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗ್ರಾ.ಪಂ ಅಧ್ಯಕ್ಷರಾದ ಶ್ರೀಮತಿ ಶಾರದಾ ಮಲ್ಲಿಕಾರ್ಜುನ ಹಡಪದ ವಹಿಸಿದ್ದರು. ಈ ಸಂದರ್ಭದಲ್ಲಿ ತಾಲೂಕು ಐಇಸಿ ಸಂಯೋಜಕ ಮಲಕಪ್ಪ.ಬಿ.ಎಮ್, ತಾ.ಪಂ ಮನರೇಗಾ ಆಡಳಿತ ಸಹಾಯಕ ತೌಸಿಪ್, ಆರೋಗ್ಯ ಇಲಾಖೆಯ ಪ್ರವೀಣ ಬಿದರಿ ಎಚ್ಐಓ, ಜೆ.ಎಸ್ ಚಟ್ಟರ್ ಪಿ.ಎಚ್.ಸಿಓ, ಪಿ.ಎಚ್.ಸಿ.ಓ ಶಂಕ್ರಮ್ಮ ಬಿರಾದಾರ ಸಿಎಚ್ಓ, ಶಿವಾರಾಜ ಬಿರಾದರ ಸಿಎಚ್ಓ. ಗ್ರಾಮ ಪಂಚಾಯತ ಸಿಬ್ಬಂದಿ, ಆಶಾ ಅಂಗನವಾಡಿ ಕಾರ್ಯಕರ್ತರು ಉಪಸ್ಥಿತರಿದ್ದರು.
Subscribe to Updates
Get the latest creative news from FooBar about art, design and business.
Related Posts
Add A Comment

