Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸಮಾಜದ ದಿಕ್ಕು ಬದಲಿಸುವ ಸಾಹಿತ್ಯ ಸೃಷ್ಟಿ ಮಕ್ಕಳಿಂದಾಗಬೇಕು :ಪೂಜಾರ
(ರಾಜ್ಯ ) ಜಿಲ್ಲೆ

ಸಮಾಜದ ದಿಕ್ಕು ಬದಲಿಸುವ ಸಾಹಿತ್ಯ ಸೃಷ್ಟಿ ಮಕ್ಕಳಿಂದಾಗಬೇಕು :ಪೂಜಾರ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರ ಜಿಲ್ಲಾ “ಮಕ್ಕಳ ಸಾಹಿತ್ಯ ಸಂಗಮ” ತಾಲೂಕು ಘಟಕ ಉದ್ಘಾಟನೆ & ಪದಗ್ರಹಣ ಸಮಾರಂಭ

ಇಂಡಿ: ಸಾಹಿತ್ಯದ ಅವಲೋಕನ ಮಾಡುವ ಘಟ್ಟದಲ್ಲಿ ನಾವಿದ್ದು, ಸಮಾಜದ ದಿಕ್ಕು ಬದಲಿಸುವ ಸಾಹಿತ್ಯದ ಸೃಷ್ಟಿ ಮಕ್ಕಳಿಂದ ಆಗಬೇಕೆಂದು ಖ್ಯಾತ ಹಿರಿಯ ಮಕ್ಕಳ ಸಾಹಿತಿ ಹ.ಮ ಪೂಜಾರ ಹೇಳಿದರು.
ಮಂಗಳವಾರ ಪಟ್ಟಣದ ಹೃದಯ ಭಾಗದಲ್ಲಿರುವ ಶ್ರೀಮತಿ ರಮಾಬಾಯಿ ಪ್ರೌಢಶಾಲೆಯಲ್ಲಿ ವಿಜಯಪುರ ಜಿಲ್ಲಾ “ಮಕ್ಕಳ ಸಾಹಿತ್ಯ ಸಂಗಮ” ತಾಲೂಕ ಘಟಕ ಉದ್ಘಾಟಿಸಿ ಹಾಗೂ ಪದಗ್ರಹಣ ನೆರವೇರಿಸಿ ಅವರು ಮಾತನಾಡಿದರು.
ಮೊಬೈಲ್‌ನ ಆವಿಷ್ಕಾರ ಒಂದು ಕುತಂತ್ರವಾಗಿದ್ದು, ಅದು ನೆನಪಿನ ಶಕ್ತಿಯನ್ನು ಕುಂದಿಸಲು ಬಂದಂತಿದೆ. ಆದರೆ ಇದನ್ನು ತಂತ್ರವನ್ನಾಗಿ ಬಳಸಿಕೊಳ್ಳುವ ಮೂಲಕ ಕನ್ನಡ ಸಾಹಿತ್ಯದ ಪ್ರಸಾರ ಮಾಡಬೇಕು. ನಮ್ಮತನವನ್ನು ಪ್ರಕಟಿಸಬೇಕು. ಇದನ್ನು ದಾಖಲಿಸುವ ಕೆಲಸ ಈಗ ಆಗುತ್ತಿರುವುದು ಸ್ವಾಗತಾರ್ಹವಾಗಿದೆ. ಭಾಷಾ ಸೊಗಡನ್ನು ಬಿಂಬಿಸುವ ಚಟುವಟಿಕೆ ನಡೆಯುತ್ತಿದೆ. ಇಂತಹ ಕಾರ್ಯಗಳಿಂದ ಆತ್ಮಸ್ಥೈರ್ಯ ಮಕ್ಕಳಲ್ಲಿ ಮೂಡುತ್ತದೆ ಎಂದು ಹೇಳಿದರು.
ಮುಖ್ಯ ಅತಿಥಿ ಜಿಲ್ಲಾಧ್ಯಕ್ಷ ಎ. ಆರ್ ಹೆಗ್ಗನದೊಡ್ಡಿ ಮಾತನಾಡಿ, ಮಕ್ಕಳಲ್ಲಿರುವ ಪ್ರತಿಭೆಯನ್ನು ಗುರುತಿಸುವುದು ಹಾಗೂ ಮಕ್ಕಳಿಗೆ ಒಳ್ಳೆಯ ರೀತಿಯಾದ ಶಿಕ್ಷಣ ಸಂಸ್ಕಾರವನ್ನು ಕೊಡಿಸುವುದು ಈ ಪರಿಷತ್ತಿನ ಕೆಲಸವಾಗಿರುತ್ತದೆ. ಮಕ್ಕಳೇ ದೇವರು ಮಕ್ಕಳಿಗಾಗಿ ಆಸ್ತಿ ಮಾಡುವುದಕ್ಕಿಂತ ಮಕ್ಕಳನ್ನೇ ಆಸ್ತಿಯನ್ನಾಗಿ ಮಾಡುವಲ್ಲಿ ಶಿಕ್ಷಕರ ಪಾತ್ರ ಮಹತ್ವ ದ್ದಾಗಿದೆ ಎಂದು ಹೇಳಿದರು.
ಇದೇ ಸಂದರ್ಭದಲ್ಲಿ ಉಪನ್ಯಾಸಕ ಸದಾನಂದ ಈರನಕೇರಿ ಇವರನ್ನು ಮಕ್ಕಳ ಸಾಹಿತ್ಯ ತಾಲೂಕು ಘಟಕದ ಅಧ್ಯಕ್ಷರಾಗಿ, ಗೌರವಾಧ್ಯಕ್ಷ ಎನ್.ಎಮ್ ಕಾಳೆ, ಕೃಷ್ಣಾ ಎಚ್, ಜೆ.ಡಿ ಪುಜಾರಿ, ವ್ಹಿ. ಎಮ್ ಶಿಂದೆ, ಅಶೋಕ ಬಿರಾದಾರ, ಐ. ಎಸ್ ರೂಗಿ, ಎಸ್.ಐ ಹಿರೇಮಠ ರಮೇಶ್ ಪವಾರ, ಎಸ್.ಎಸ್ ಡಬ್ಬಿಗಾರ,ಬಿ. ಎಸ್ ಕುಂಬಾರ, ಬಿ.ಜಿ. ಹೆಗ್ಗೊಂಡೆ, ಅಂಬಿಕಾ ಈರನಕೇರಿ ಇನ್ನೂ ಅನೇಕರನ್ನು ಪದಾಧಿಕಾರಿಗಳಾಗಿ ಆಯ್ಕೆ ‌ಮಾಡಿ ಪದಗ್ರಹಣ ಮಾಡಲಾಯಿತು.
ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಡಾ. ಪ ಪೂ.ಸ್ವರೂಪಾನಂದ ಮಹಾ ಸ್ವಾಮಿಗಳು ಓಂಕಾರ ಆಶ್ರಮ ವಹಿಸಿಕೊಂಡು ಆಶೀರ್ವಚನ ನೀಡಿದರು.
ನೂತನ ಅಧ್ಯಕ್ಷ ಸದಾನಂದ ಈರನಕೇರಿ ಪ್ರಾಸ್ತಾವಿಕವಾಗಿ ಮಾತನಾಡಿದರು.
ವಿವಿಧ ಶಾಲೆ, ಕ್ರಿಯಾಶೀಲ ಉಪನ್ಯಾಸಕರಿಗೆ, ಶಿಕ್ಷಕರಿಗೆ, ಶಿಕ್ಷಕಿಯರಿಗೆ ಪದಗ್ರಹಣ ಕಾರ್ಯಕ್ರಮದಲ್ಲಿ ಅವರನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದ ನಿರೂಪಣೆ ಎಚ್ ಬಿ ಸಾಹುಕಾರ್, ಸ್ವಾಗತ ಬಿ ಎಸ್ ಕಂಬಾರ, ವಂದನಾರ್ಪಣೆ ವಿ.ಎಮ್ ಸಿಂಧೆ ಮಾಡಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್
    In (ರಾಜ್ಯ ) ಜಿಲ್ಲೆ
  • ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ
    In (ರಾಜ್ಯ ) ಜಿಲ್ಲೆ
  • ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ
    In (ರಾಜ್ಯ ) ಜಿಲ್ಲೆ
  • ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ
    In ವಿಶೇಷ ಲೇಖನ
  • ಸರಗೂರು ತಾಲೂಕಿನಲ್ಲಿ ನಿಲ್ಲದ ಕಾಡುಪ್ರಾಣಿ-ಮಾನವ ಸಂಘರ್ಷ
    In (ರಾಜ್ಯ ) ಜಿಲ್ಲೆ
  • ಕೇವಲ ಅಂಕ ಗಳಿಕೆ ಶಿಕ್ಷಣವಲ್ಲˌ ತಹಶೀಲ್ದಾರ ಅನೀಲ ಬಡಿಗೇರ
    In (ರಾಜ್ಯ ) ಜಿಲ್ಲೆ
  • ಸಾರ್ವಜನಿಕ ಬ್ಯಾಂಕುಗಳಿಂದ ಆರ್ಥಿಕ ಸಾಕ್ಷರತೆ ಸಪ್ತಾಹ
    In (ರಾಜ್ಯ ) ಜಿಲ್ಲೆ
  • ಶನಿವಾರ ವಿದ್ಯುತ್ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಆಂಧ್ರದಲ್ಲಿ ಕೆ.ಜಿ ತಂಬಾಕಿಗೆ 400, ಕರ್ನಾಟಕದಲ್ಲಿ ಕೇವಲ 292 ರೂ.ಹೆಚ್ ಡಿ ಕೋಟೆಯಲ್ಲಿ ಹರಾಜು ಮಾರುಕಟ್ಟೆ ಬಂದ್, ರೈತರ ಆಕ್ರೋಶ
    In (ರಾಜ್ಯ ) ಜಿಲ್ಲೆ
  • ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಡಿಯಲ್ಲಿ ನಿರ್ಗತಿಕರಿಗೆ ವಾತ್ಸಲ್ಯ ಕಿಟ್ ವಿತರಣೆಉದಯರಶ್ಮಿ ದಿನಪತ್ರಿಕೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.