Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 12, 2026

ಬಿ.ಎಲ್.ಡಿ.ಇ ಸಂಸ್ಥೆಯಿಂದ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ನೆರವು

ವಾರ್ಡನ್ ಕಿರುಕುಳಕ್ಕೆ ಬೇಸತ್ತು ಹೆಡ್ ಕುಕ್ ಆತ್ಮಹತ್ಯೆ!

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಕೊಲ್ಹಾರ ಪಪಂ ಅಧಿಕಾರ ಗದ್ದುಗೆ ಹಿಡಿಯಲು ಕಾಂಗ್ರೆಸ್ ಸಜ್ಜು
(ರಾಜ್ಯ ) ಜಿಲ್ಲೆ

ಕೊಲ್ಹಾರ ಪಪಂ ಅಧಿಕಾರ ಗದ್ದುಗೆ ಹಿಡಿಯಲು ಕಾಂಗ್ರೆಸ್ ಸಜ್ಜು

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಕೊಲ್ಹಾರ: ಚುನಾಯಿತ ಪ್ರತಿನಿಧಿಗಳಾಗಿ ಎರಡೂವರೆ ವರ್ಷದ ನಂತರ ಬಹುನಿರೀಕ್ಷಿತ ಕೊಲ್ಹಾರ ಪಟ್ಟಣ ಪಂಚಾಯತಿಯ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ, ಚುನಾವಣೆ ಆಯೋಗ ಮೀಸಲಾತಿಯನ್ನು ಪ್ರಕಟಿಸಿ ಚುನಾವಣೆ ನಡೆಸುವ ಸಿದ್ಧತೆಯಲ್ಲಿ ತೊಡಗಿದೆ.
ಪಟ್ಟಣ ಪಂಚಾಯತಿಯಲ್ಲಿ ಒಟ್ಟು ೧೭ ಸ್ಥಾನಗಳಿದ್ದು ೧೧ಜನ ಸದಸ್ಯರು ಕಾಂಗ್ರೆಸ್ ಪಕ್ಷದ ಬಿ-ಫಾರ್ಮ್ ಪಡೆದ ಚುನಾಯಿತ ಸದಸ್ಯರಿದ್ದು, ಇಬ್ಬರು ಎಐಎಮ್‌ಐಎಮ್ ಸದಸ್ಯರು, ಒಬ್ಬ ಪಕ್ಷೇತರ ಅಭ್ಯರ್ಥಿ ಆಯ್ಕೆಯಾಗಿರುತ್ತಾರೆ. ಇವರೆಲ್ಲರೂ ಈಗಾಗಲೇ ಸಚಿವ, ಕ್ಷೇತ್ರದ ಶಾಸಕ ಶಿವಾನಂದ ಪಾಟೀಲರಿಗೆ ಬೆಂಬಲ ಸೂಚಿಸಿರುವುದನ್ನು ನೋಡಿದರೆ ಕಾಂಗ್ರೆಸ್ ಪಕ್ಷವು ಅಧಿಕಾರ ಚುಕ್ಕಾಣಿ ಹಿಡಿಯುವುದರಲ್ಲಿ ಯಾವುದೇ ಅನುಮಾನವಿಲ್ಲ, ಮೂವರು ಸದಸ್ಯರನ್ನು ಹೊಂದಿದ ಬಿಜೆಪಿ ಪಕ್ಷವು ಅದರ ನಾಯಕರು ಮನಸ್ಸು ಮಾಡಿದರೆ ಏನು ಬೇಕಾದರೂ ಆಗುವ ಸಾಧ್ಯತೆ ಅಧಿಕವಾಗಿದೆ.
ಮೀಸಲಾತಿ ಪಟ್ಟಿ ಪ್ರಕಟಗೊಳ್ಳಲು ಅಪಾರ ಸಮಯ ಕಳೆದು ಹೋಗಿರುವುದರಿಂದ ಅಧಿಕಾರದ ಅವಧಿ ಎಷ್ಟು ವರ್ಷದಾಗಿರುವದು ಎನ್ನುವದು ಚುನಾಯಿತ ಸದಸ್ಯರಲ್ಲಿ ಆತಂಕ ಮೂಡಿಸಿದರೆ, ಕಾನೂನು ಯಾವ ರೀತಿ ಹೇಳುತ್ತದೆ ಎನ್ನುವುದು ಕಾನೂನು ಅನುಭವದ ಪರಿಪಾಲಕರನ್ನು ವಿಚಾರಿಸಿದಾಗ ತಿಳಿಯುತ್ತದೆ.
ಕ್ಷೇತ್ರದ ಶಾಸಕರು ಸಚಿವರು ಆಗಿರುವ ಶಿವಾನಂದ ಪಾಟೀಲರವರ ಅಂಗಳದಲ್ಲಿ ಕೊಲ್ಹಾರ ಪಟ್ಟಣ ಪಂಚಾಯತಿಯ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಚಂಡು ಇದ್ದು ಅವರು ಯಾರ ಪರವಾಗಿ ಬ್ಯಾಟ್ ಬೀಸುತ್ತಾರೆ ಎನ್ನುವದೇ ಪಟ್ಟಣದ ಜನತೆಯ ಮನದಲ್ಲಿ ಕುತೂಹಲ ಮೂಡಿಸುತ್ತಿದೆ. ಕಾರಣ ಕಾಂಗ್ರೆಸ್ ಪಕ್ಷದ ಬಿಫಾರ್ಮ್ ಪಡೆದು ಚುನಾಯಿತರಾದ ೧೧ ಸದಸ್ಯರಲ್ಲಿ ಅಧ್ಯಕ್ಷ, ಉಪಾಧ್ಯಕ್ಷರನ್ನು ಆಯ್ಕೆ ಮಾಡುತ್ತಾರೋ ಅಥವಾ ಬೆಂಬಲ ಸೂಚಿಸಿರುವ ಪಕ್ಷೇತರ ಅಭ್ಯರ್ಥಿಯ ಪರವಾಗಿ ಸಚಿವರು ನಿಲ್ಲುತ್ತಾರೆ ಏನೋ? ಎನ್ನುವ ಅನುಮಾನದ ಹುತ್ತ ಸರ್ವ ಜನತೆಯಲ್ಲಿ ಮನೆಮಾಡಿದೆ.
ಅಧ್ಯಕ್ಷ ಸ್ಥಾನ ಸಾಮಾನ್ಯವಾದರೆ, ಉಪಾಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆಗೆ ಮೀಸಲಾತಿಯಾಗಿದ್ದು ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನ ನಮಗೆ ಸಿಗಬೇಕೆಂದು ಹಲವಾರು ಸದಸ್ಯರು ಈಗಿನಿಂದಲೇ ತಮ್ಮ ತಮ್ಮ ಬೆಂಬಲಿಗರ, ನಾಯಕರ, ಜಾತಿ ಮುಖಂಡರ ಮೂಲಕ ಸಚಿವರ ಮೇಲೆ ಒತ್ತಡ ಹಾಕುತಿದ್ದಾರೆ ಎನ್ನುವುದಂತೂ ಸತ್ಯ. ಆದರೆ ಸಚಿವರು ಸ್ಥಳೀಯ ಕಾಂಗ್ರೆಸ್ ಪಕ್ಷದ ನಾಯಕರ ಮತ್ತು ಸರ್ವ ಸದಸ್ಯರ ಒಪ್ಪಿಗೆಯನ್ನು ಪಡೆದು ಅಭಿಪ್ರಾಯ ಸಂಗ್ರಹಿಸಿ ಅಧ್ಯಕ್ಷ ಸ್ಥಾನಕ್ಕೆ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಎರಡು ಕೋಮಿನ ಸದಸ್ಯರಲ್ಲಿ ಒಬ್ಬೊಬ್ಬರನ್ನು ಆಯ್ಕೆ ಮಾಡಲು ಒಪ್ಪಿಗೆ ಪಡೆದುಕೊಂಡರೆ ಸರ್ವ ಸಮ್ಮತ ಒಪ್ಪಿಗೆ ದೊರೆಯಬಹುದು, ಇಲ್ಲವಾದರೆ ಸದಸ್ಯರಲ್ಲಿ ಭಿನ್ನಾಭಿಪ್ರಾಯ ಮೂಡುವುದಂತೂ ಸಹಜ. ಇಂತಹ ಸಂದಿಗ್ದ ಪರಿಸ್ಥಿತಿಯನ್ನು ನ್ಯಾಯ ಸಮ್ಮತವಾಗಿ ನಿಭಾಯಿಸಿ ಪಟ್ಟಣದ ಜನತೆಗೆ ಉತ್ತಮ ಆಡಳಿತ ನೀಡುವ ಆಲೋಚನೆ ಹೊಂದಿದ ಸದಸ್ಯರನ್ನು ಗುರುತಿಸಿ ಆಯ್ಕೆ ಮಾಡಬೇಕೆಂಬುವುದೇ ಸ್ಥಳೀಯ ಜನತೆಯ ಆಶೆಯಾಗಿದೆ.

” ಸ್ಥಳೀಯ ಪಟ್ಟಣ ಪಂಚಾಯತ ಆಡಳಿತ ಯಂತ್ರದ ಚುಕ್ಕಾಣಿ ಹಿಡಿಯುವ ಅಧ್ಯಕ್ಷ, ಉಪಾಧ್ಯಕ್ಷರು ಮುಳಗಡೆಯ ಪುನರ್ವಸತಿ ಕೆಂದ್ರವಾದ ಸಂತ್ರಸ್ತರ ಹಲವಾರು ಸಮಸ್ಯೆಗಳನ್ನು ಬಗೆಹರಿಸಲು ಶ್ರಮಿಸಬೇಕು. ಊರಿನ ಅಭಿವೃದ್ದಿಯ ಜೊತೆಗೆ ಇನ್ನೂ ಬರಬೇಕಾದ ಹಲವಾರು ಉನ್ನತ ದರ್ಜೆಯ ಶಿಕ್ಷಣ ಕೇಂದ್ರಗಳನ್ನು ತೆರೆಯಲು ಮತ್ತು ತಾಲೂಕು ಆಡಳಿತದ ಎಲ್ಲ ಕಚೇರಿಗಳು ಕಾರ್ಯ ಆರಂಭವಾಗುವ ದಿಸೆಯತ್ತ ಹೆಜ್ಜೆ ಇಡಬೇಕು. ಪಟ್ಟಣದ ಸರ್ವ ಜನತೆಯ ಆಶೋತ್ತರಗಳಿಗೆ ಸ್ಪಂದಿಸುವ ಜನಪರ ಕಾಳಜಿಯ ನಾಯಕರು ಯಾವುದೇ ಪಕ್ಷದವರಾದರೂ ನಾವು ಸ್ವಾಗತಿಸುತ್ತೇವೆ.”

– ರಾಜು ತುಂಬರಮಟ್ಟಿ
ಸಮಾಜ ಚಿಂತಕರು

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 12, 2026

ಬಿ.ಎಲ್.ಡಿ.ಇ ಸಂಸ್ಥೆಯಿಂದ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ನೆರವು

ವಾರ್ಡನ್ ಕಿರುಕುಳಕ್ಕೆ ಬೇಸತ್ತು ಹೆಡ್ ಕುಕ್ ಆತ್ಮಹತ್ಯೆ!

ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚುನಾವಣೆಯಲ್ಲಿ ಗೊಂದಲ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 12, 2026
    In ದಿನಪತ್ರಿಕೆ
  • ಬಿ.ಎಲ್.ಡಿ.ಇ ಸಂಸ್ಥೆಯಿಂದ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ನೆರವು
    In (ರಾಜ್ಯ ) ಜಿಲ್ಲೆ
  • ವಾರ್ಡನ್ ಕಿರುಕುಳಕ್ಕೆ ಬೇಸತ್ತು ಹೆಡ್ ಕುಕ್ ಆತ್ಮಹತ್ಯೆ!
    In (ರಾಜ್ಯ ) ಜಿಲ್ಲೆ
  • ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚುನಾವಣೆಯಲ್ಲಿ ಗೊಂದಲ
    In (ರಾಜ್ಯ ) ಜಿಲ್ಲೆ
  • ಪತ್ರಕರ್ತರು ವಸ್ತುನಿಷ್ಠವಾಗಿ, ಶೋಧನೆ ಮಾಡಿ ಬರೆಯಬೇಕು
    In (ರಾಜ್ಯ ) ಜಿಲ್ಲೆ
  • ಅಧ್ಯಕ್ಷರಾಗಿ ಮಹೇಶ್, ಉಪಾಧ್ಯಕ್ಷರಾಗಿ ಜಯ ಅವಿರೋಧ ಆಯ್ಕೆ
    In (ರಾಜ್ಯ ) ಜಿಲ್ಲೆ
  • ಸಿ.ವಿ.ರಾಮನ್ ಪ.ಪೂ ಕಾಲೇಜ್ ಉತ್ತಮ ಸಾಧನೆ
    In (ರಾಜ್ಯ ) ಜಿಲ್ಲೆ
  • ಗುರು ಸಂಗನಬಸವ ಸ್ವಾಮೀಜಿ ಅಡ್ಡಪಲ್ಲಕ್ಕಿ ಉತ್ಸವ & ಅಗ್ನಿ ಪ್ರವೇಶ
    In (ರಾಜ್ಯ ) ಜಿಲ್ಲೆ
  • ಬೊಗಸೆಯಲ್ಲಿ ಅರಳುವ ನಿನ್ನಂದದ ಮುಖಕೆ
    In ವಿಶೇಷ ಲೇಖನ
  • ಕಲಕೇರಿ ಬಸವೇಶ್ವರ ಪ.ಪೂ ಕಾಲೇಜು ಅತ್ಯುತ್ತಮ ಸಾಧನೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.