ವಿಜಯಪುರ: ಜಿಲ್ಲೆಯ ೧೪ ಪರೀಕ್ಷಾ ಕೇಂದ್ರಗಳಲ್ಲಿ ಆ.೧೨ ರಿಂದ ೧೭ ರವರೆಗೆ ಅಖಿಲ ಭಾರತ ವೃತ್ತಿ ಪರೀಕ್ಷೆಗಳು ಪ್ರಾಯೋಗಿಕ ಹಾಗೂ ಆ.೨೨ ರಿಂದ ಸೆ.೯ರವರೆಗೆ ಜರುಗುವ ಸಿ.ಬಿ.ಟಿ ವಿಷಯಗಳ ಪರೀಕ್ಷೆಗಳ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಪರೀಕ್ಷಾ ಕೇಂದ್ರದ ಸುತ್ತಲಿನ ೨೦೦ ಮೀ.ವ್ಯಾಪ್ತಿಯ ಪ್ರದೇಶದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾ ದಂಡಾಧಿಕಾರಿಗಳಾದ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಆದೇಶ ಹೊರಡಿಸಿದ್ದಾರೆ.
ಪರೀಕ್ಷೆ ನಡೆಯುವ ದಿನಗಳಂದು ಬೆಳಿಗ್ಗೆ ೮ ಗಂಟೆಯಿಂದ ಪರೀಕ್ಷೆ ಮುಗಿಯುವರೆಗೆ ನಿಷೇಧಿತ ಪ್ರದೇಶವೆಂದು ಘೋಷಿಸಿದ್ದು, ಪರೀಕ್ಷಾ ಕೇಂದ್ರಗಳ ಸಮೀಪದಲ್ಲಿರುವ ಝರಾಕ್ಸ್ ಅಂಗಡಿಗಳು, ಕಂಪ್ಯೂಟರ್ ಸೆಂಟರ್‌ಗಳು, ಸೈಬರ್ ಕೆಫೆಗಳು, ಕೋಚಿಂಗ್ ಕೇಂದ್ರಗಳನ್ನು ಪರೀಕ್ಷೆ ನಡೆಯುವ ಅವಧಿಯಲ್ಲಿ ತೆರೆಯದಂತೆ ಆದೇಶಿಸಲಾಗಿದೆ.
Subscribe to Updates
Get the latest creative news from FooBar about art, design and business.
ಅಖಿಲ ಭಾರತ ವೃತ್ತಿ ಪರೀಕ್ಷೆ: ಪರೀಕ್ಷಾ ಕೇಂದ್ರದ ಸುತ್ತ ನಿಷೇಧಾಜ್ಞೆ
Related Posts
Add A Comment
