ವಿಜಯಪುರ: ವಿಕಲಚೇತನರ ಮತ್ತು ಹಿರಿಯ ನಾಗರಿಕ ಸಬಲೀಕರಣ ಇಲಾಖೆಯ ವತಿಯಿಂದ ವಿವಿಧ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಹಿರಿಯ ನಾಗರಿಕರು ಹಾಗೂ ಸ್ವಯಂ ಸೇವಾ ಸಂಸ್ಥೆಗಳಿಗೆ ನೀಡುವ ರಾಜ್ಯ ಪ್ರಶಸ್ತಿಗೆ ಅರ್ಹ ನಾಗರಿಕರಿಂದ ಅರ್ಜಿ ಆಹ್ವಾನಿಸಲಾಗಿದೆ.
ಅಕ್ಟೋಬರ್ ೦೧ ರಂದು ಆಚರಿಸುವ ವಿಶ್ವ ಹಿರಿಯ ನಾಗರಿಕರ ದಿನಾಚರಣೆಯ ಪ್ರಯುಕ್ತ ಪ್ರಶಸ್ತಿ ನೀಡಲಾಗುತ್ತದೆ. ಶಿಕ್ಷಣ, ಸಾಹಿತ್ಯ, ಕಲೆ, ಕಾನೂನು, ಪ್ರತಿಭೆ, ಕ್ರೀಡೆ ಮತ್ತು ಹಿರಿಯ ನಾಗರಿಕರ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿದ ಹಿರಿಯ ನಾಗರಿಕರು ಹಾಗೂ ಸ್ವಯಂ ಸೇವಾ ಸಂಸ್ಥೆಯವರು ದ್ವಿ-ಪ್ರತಿಯಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಆಗಸ್ಟ್ ೩೧ ಕೊನೆಯ ದಿನವಾಗಿದೆ.
ಈ ಕುರಿತಂತೆ ಹೆಚ್ಚಿನ ಮಾಹಿತಿ ಹಾಗೂ ಅರ್ಜಿ ನಮೂನೆಯನ್ನು ವೆಬ್ಸೈಟ್ www.dwdsc.karnataka.gov.in ಅಥವಾ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಕಚೇರಿ, ಹೊಸ ಜಿಲ್ಲಾ ಪಂಚಾಯತ ಆವರಣ,ಕನಕದಾಸ ಬಡಾವಣೆ ವಿಜಯಪುರ ಹಾಗೂ ದೂರವಾಣಿ ಸಂಖ್ಯೆ ೦೮೩೫೨೭೯೬೦೬೦ ಸಂಪರ್ಕಿಸುವಂತೆ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Subscribe to Updates
Get the latest creative news from FooBar about art, design and business.
Related Posts
Add A Comment
