ವಿಜಯಪುರ: ಕರ್ನಾಟಕದ ಉಪ ಲೋಕಾಯುಕ್ತರಾದ ನ್ಯಾಯಮೂರ್ತಿ ಕೆ.ಎನ್.ಫಣೀಂದ್ರ ಅವರು ಆ.೨೨ರಂದು ಬೆಳಿಗ್ಗೆ ೧೦ ರಿಮದ ೧-೩೦ರವರೆಗೆ ಹಾಗೂ ಮಧ್ಯಾಹ್ನ ೨-೩೦ರಿಂದ ೫ ಗಂಟೆಯವರೆಗೆ ನಗರದ ಸ್ಟೇಶನ್ ರಸ್ತೆಯ ಕಂದಗಲ್ ಹನುಮಂತರಾಯ ರಂಗಮಂದಿರದಲ್ಲಿ ಸಾರ್ವಜನಿಕರ ಕುಂದುಕೊರತೆಗಳ ಅಹವಾಲು ಸ್ವೀಕಾರ ವಿಚಾರಣೆ ನಡೆಸಲಿದ್ದು, ಸಾರ್ವಜನಿಕರು ಕಾರ್ಯಕ್ರಮದಲ್ಲಿ ಭಾಗವಹಿಸುವ ಮೂಲಕ ತಮ್ಮ ಸಮಸ್ಯೆ-ಅಹವಾಲುಗಳಿಗೆ ಪರಿಹಾರ ಪಡೆದುಕೊಳ್ಳುವಂತೆ ಕರ್ನಾಟಕ ಲೋಕಾಯುಕ್ತ ಪೊಲೀಸ್ ಅಧೀಕ್ಷಕರು ಕೋರಿದ್ದಾರೆ.
ಸರ್ಕಾರಿ ಅಧಿಕಾರಿ-ನೌಕರರು ಕಾನೂನು ರಿತ್ಯ ಕಾರ್ಯ ಮಾಡಲು ವಿಳಂಬವಾಗುತ್ತಿದ್ದಲ್ಲಿ, ಅಥವಾ ಅಧಿಕಾರಿ-ನೌಕರರು ನ್ಯಾಯಯುತವಾಗಿ ಮಾಡಿಕೊಡಬೇಕಾದ ಕೆಲಸಗಳಲ್ಲಿ ವೃಥಾ ತೊಂದರೆ ಕೊಡುವುದು ಅಥವಾ ಇನ್ನಾವುದೇ ತರಹದ ದುರಾಡಳಿತದಲ್ಲಿ ತೊಡಗಿದ್ದಲ್ಲಿ ತೊಂದರೆಗೊಳಗಾದ ಸಾರ್ವಜನಿಕರು ತಮ್ಮ ಅಹವಾಲುಗಳನ್ನು ಲಿಖಿತ ರೂಪದಲ್ಲಿ ದಾಖಲೆ, ಸಾಕ್ಷಾಧಾರಗಳೊಂದಿಗೆ ಸಲ್ಲಿಸಿ ಬಗೆಹರಿಸಿಕೊಳ್ಳಬಹುದಾಗಿದೆ.
ಲೋಕಾಯುಕ್ತ ಸಂಸ್ಥೆಯಲ್ಲಿ ದಾಖಲಾಗಿರುವ ತನಿಖೆ-ವಿಚಾರಣೆಗೆ ಬಾಕಿ ಇರುವ ಪ್ರಕರಣಗಳಿಗೆ ಸಂಬಂಧಿಸಿದಂತೆ ದೂರುದಾರರು ಹಾಗೂ ಎದುರುದಾರರ ಸಮ್ಮುಖದಲ್ಲಿ ಕಾನೂನು ರಿತ್ಯ ಆ.೨೩ರಂದು ಬೆಳಿಗ್ಗೆ ೧೦ ರಿಂದ ಮಧ್ಯಾಹ್ನ ೧-೩೦ರವರೆಗೆ ಮತ್ತು ಮಧ್ಯಾಹ್ನ ೨-೩೦ರಿಂದ ೫ ಗಂಟೆಯವರೆಗೆ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ವಿಚಾರಣೆ ನಡೆಸಲಿದ್ದಾರೆ. ದೂರುದಾರರು ನಿಗದಿತ ಸಮಯದಲ್ಲಿ ಹಾಜರಾಗಿ ಕಾಯಕ್ರಮದ ಸದುಪಯೋಗ ಪಡೆದುಕೊಳ್ಳುವಂತೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Subscribe to Updates
Get the latest creative news from FooBar about art, design and business.
Related Posts
Add A Comment
