ವಿಜಯಪುರ: ಪ್ರಸಕ್ತ ೨೦೨೪-೨೫ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಜಿಲ್ಲೆಗೆ ದ್ರಾಕ್ಷಿ ಬೆಳೆ ಮರುವಿನ್ಯಾಸಗೊಳಿಸಲಾದ ಹವಾಮಾನ ಆಧಾರಿತ ಬೆಳೆ ವಿಮಾ ಯೋಜನೆಯಡಿ ನೊಂದಾಯಿಸುವ ಅವಧಿಯನ್ನು ದಿನಾಂಕ : ೧೬-೦೮-೨೦೨೪ ರವರೆಗೆ ವಿಸ್ತರಿಸಲಾಗಿದ್ದು, ಬೆಳೆ ಸಾಲ ಪಡೆದ ರೈತರು ಹಾಗೂ ಬೆಳೆ ಸಾಲ ಪಡೆಯದೆ ಇರುವ ರೈತರು ತಮ್ಮ ಆಧಾರ ಕಾರ್ಡ ಝರಾಕ್ಸ, ಪಹಣಿ ಪತ್ರಿಕೆ ಹಾಗೂ ಬ್ಯಾಂಕ್ ಪಾಸ್ ಬುಕ್ ಪ್ರತಿಯೊಂದಿಗೆ ಹತ್ತಿರದ ಬ್ಯಾಂಕುಗಳಲ್ಲಿ, ಗ್ರಾಮ ಒನ್ ಕೇಂದ್ರ ಅಥವಾ ಸಿಎಸ್‌ಸಿ ಸೆಂಟರ್‌ಗಳಲ್ಲಿ ವಿಮಾ ಯೋಜನೆಯಡಿ ನೋಂದಾಯಿಸಿಕೊಳ್ಳುವಂತೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ತಿಳಿಸಿದ್ದಾರೆ.
೨೦೨೪-೨೫ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಈಗಾಗಲೇ ದ್ರಾಕ್ಷಿ ಬೆಳೆಗೆ ವಿಮೆ ನೊಂದಾಯಿಸಿಕೊಳ್ಳದ ರೈತರಿಗೆ ಅವಧಿಯನ್ನು ವಿಸ್ತರಿಸಲಾಗಿದ್ದು, ರೈತರು ಪಾವತಿಸಬೇಕಾದ ವಿಮಾ ಕಂತಿನ ಮೊತ್ತ (೫%) ರೂ. ೧೪೦೦೦/- ಪ್ರತಿ ಹೆಕ್ಟರ್‌ಗಳಾಗಿರುತ್ತದೆ.
ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ಕುಮಾರಿ ಪವಿತ್ರಾ ಅಗ್ರಿಕಲ್ಚರ್ ಇನ್ಸುರೆನ್ಸ್ ಕಂಪನಿ ವಿಮಾ ಸಂಸ್ಥೆಯ ಪ್ರತಿನಿಧಿ ಮೊಬೈಲ್ ನಂ: ೮೮೯೯೮೮೭೮೭೩, ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ವಿಜಯಪುರ – ಮೊ: ೯೫೩೫೧೮೫೯೯೯, ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಇಂಡಿ – ಮೊ: ೯೦೦೮೪೦೪೦೪೧, ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಸಿಂದಗಿ- ಮೊ: ೮೧೯೭೪೬೪೬೭೫, ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಬ.ಬಾಗೇವಾಡಿ – ಮೊ: ೯೮೪೫೨೧೫೩೬೨, ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಮುದ್ದೇಬಿಹಾಳ – ಮೊ.೮೧೨೩೬೮೬೯೦೩ ತೋಟಗಾರಿಕೆ ಇಲಾಖೆ, ರೈತ ಸಂಪರ್ಕ ಕೇಂದ್ರದ ಅಧಿಕಾರಿ ಹಾಗೂ ಹತ್ತಿರದ ಬ್ಯಾಂಕ್ ಶಾಖೆಯನ್ನು ಸಂಪರ್ಕಿಸಬಹುದಾಗಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Subscribe to Updates
Get the latest creative news from FooBar about art, design and business.
ದ್ರಾಕ್ಷಿ ಬೆಳೆ ವಿಮೆ ಯೋಜನೆಯಡಿ ನೊಂದಾಯಿಸುವ ಅವಧಿ ವಿಸ್ತರಣೆ
Related Posts
Add A Comment
