ವಿಜಯಪುರ: ಬಸವ ಜನ್ಮಸ್ಥಳವಾದ ಇಂಗಳೇಶ್ವರ ಗ್ರಾಮಕ್ಕೆ ಇಂದು ಜಿಲ್ಲಾಧಿಕಾರಿಗಳಾದ ಟಿ ಭೂಬಾಲನ್ ಅವರು ಭೇಟಿ ಮಾಡಿ ಬಸವೇಶ್ವರರ ಪುತ್ತಳಿ ನಿರ್ಮಾಣ ಕುರಿತು ಸಮೀಕ್ಷೆ ನಡೆಸಿ ಮತ್ತೆ ಸ್ಮಾರಕಕ್ಕೆ ತೆರಳಿ ವೀಕ್ಷಣೆ ಮಾಡಿ ಗ್ರಾಮದ ವಿವಿಧ ಅಭಿವೃದ್ಧಿ ಕಾರ್ಯಗಳ ಕುರಿತು ವೀಕ್ಷಣೆ ಮಾಡಿದರು.
ಬಸವನಬಾಗೇವಾಡಿ ತಾಲೂಕಿನ ಇಂಗಳೇಶ್ವರ ಗ್ರಾಮಕ್ಕೆ ಬೇಟಿ ಶ್ರೀ ಬಸವೇಶ್ವರ ಸರ್ಕಲ್ & ಮೂರ್ತಿ ಪ್ರತಿಷ್ಠಾಪನಾ ನಿರ್ಮಾಣ ಕುರಿತು ಸಂಬಂಧಿಸಿದ ತಹಶೀಲ್ದಾರರಿಂದ ಮಾಹಿತಿ ಪಡೆದ ಅವರು, ಗಾವಠಾಣ ಜಾಗದಲ್ಲಿ ಬಸ್ ನಿಲ್ದಾಣ ನಿರ್ಮಾಣ ಕುರಿತು ಪರಿಶೀಲನೆ ನಡೆಸಿದರು.
ಬಸವೇಶ್ವರ ಬಸವ ಸ್ಮಾರಕಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಅವರು, ನಿರ್ಮಾಣ ಹಂತದಲ್ಲಿರುವ ಅಂಬಿಗರ ಚೌಡಯ್ಯ ಸಮುದಾಯ ಭವನ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ ಕಾಮಗಾರಿ ಪರಿಶೀಲನೆ ನಡೆಸಿದರು.
ಹಾಲು ಬಾವಿ ಹಾಗೂ ವಿರಕ್ತಮಠದ ವಚನ ಶಿಲಾ ಮಂಟಪ ವೀಕ್ಷಣೆ ಮಾಡಿದರು.
ಬಸವನ ಬಾಗೇವಾಡಿಯ ಮೆಗಾ ಮಾರ್ಕೆಟ್ ಮತ್ತು ನಂದಿ ಮಾರ್ಕೆಟ್‌ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸಂಜೆ ಬಸವನ ಬಾಗೇವಾಡಿಯಲ್ಲಿರುವ ಇಂದಿರಾ ಕ್ಯಾಂಟೀನಗೆ ದಿಢೀರ ಭೇಟಿ ನೀಡಿ, ಪರಿಶೀಲನೆ ನಡೆಸಿದ ಅವರು, ಕ್ಯಾಂಟೀನದಲ್ಲಿ ಶುಚಿತ್ವಕ್ಕೆ ಆದ್ಯತೆ ನೀಡುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದ ಜಿಲ್ಲಾಧಿಕಾರಿಗಳು ಆಹಾರ ಸವಿಯುವ ಮೂಲಕ ಆಹಾರ ಗುಣಮಟ್ಟ ಪರೀಕ್ಷಿಸಿದರು.
ಈ ಸಂದರ್ಭದಲ್ಲಿ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.
Subscribe to Updates
Get the latest creative news from FooBar about art, design and business.
Related Posts
Add A Comment

