ಬಸವನಬಾಗೇವಾಡಿ: ಕಳೆದ ಐದು ವರ್ಷದಿಂದ ಶಿಕ್ಷಣ ಇಲಾಖೆಯು ದಿನಕ್ಕೊಂದು ಆದೇಶ ಹೊರಡಿಸಿ ಅನುದಾನ ರಹಿತ ಖಾಸಗಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ವಿದ್ಯಾರ್ಥಿಗಳನ್ನು ಮಲತಾಯಿ ಮಕ್ಕಳಂತೆ ನೋಡಿಕೊಳ್ಳುವ ಜೊತೆಗೆ ಖಾಸಗಿ ಶಿಕ್ಷಣ ಸಂಸ್ಥೆಗಳ ಸ್ವತಂತ್ರ ಹರಣ ಮಾಡುವ ಜೊತೆಗೆ ಅವೈeನಿಕ ನಿಯಮಗಳನ್ನು ಜಾರಿಗೆ ತಂದಿರುವದನ್ನು ಖಂಡಿಸಿ ಆಗಷ್ಟ್ ೧೫ ರಂದು ಅನುದಾನ ರಹಿತ ಖಾಸಗಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಆಡಳಿತ ಮಂಡಳಿಯ ನೇತೃತ್ವದಲ್ಲಿ ರಾಜ್ಯದ ಎಲ್ಲ ಜಿಲ್ಲೆ, ತಾಲೂಕು ಕೇಂದ್ರಗಳಲ್ಲಿ ಆಡಳಿತ ಮಂಡಳಿಯ ಮುಖ್ಯಸ್ಥರು, ಶಿಕ್ಷಕರು ಕೈಗೆ ಕಪ್ಪು ಪಟ್ಟಿ ಕಟ್ಟಿಕೊಂಡು ಕರಾಳ ದಿನಾಚರಣೆಯನ್ನಾಗಿ ಆಚರಿಸಲಾಗುವುದು ಎಂದು ಜಿಲ್ಲಾ ಅನುದಾನ ರಹಿತ ಖಾಸಗಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಆಡಳಿತ ಮಂಡಳಿಗಳ ಸಂಘದ ಜಿಲ್ಲಾಧ್ಯಕ್ಷ ಬಸವರಾಜ ಪೂಜಾರಿ ತಿಳಿಸಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಸರ್ಕಾರವು ಸರ್ಕಾರಿ ಶಾಲೆಗಳಲ್ಲಿ ಯಾವ ನಿಯಮಗಳನ್ನು ಪಾಲಿಸದೇ ನ್ಯಾಯಾಲಯದ ತೀರ್ಪುಗಳನ್ನು ಕಡೆಗಣಿಸಿ ಹೊಸ ಶಿಕ್ಷಣ ಸಂಸ್ಥೆಗಳಿಗೆ ರಚಿಸಿದ ನಿಯಮವನ್ನು ಯಥಾವತ್ತಾಗಿ ಹಳೆಯ ಶಿಕ್ಷಣ ಸಂಸ್ಥೆಗಳಿಗೆ ಹೇರುವ ಮೂಲಕ ನಮ್ಮ ಸಂಸ್ಥೆಗಳ ಹಿತ ರಕ್ಷಣೆ ಕಾಪಾಡುವಲ್ಲಿ ಸರ್ಕಾರ ಮುಂದಾಗುತ್ತಿಲ್ಲ. ಶಿಕ್ಷಣ ಇಲಾಖೆಯು ಅವೈಜ್ಞಾನಿಕ ನಿಯಮಗಳನ್ನು ಜಾರಿಗೆ ತರುತ್ತಿದೆ ಒಂದು ಕಡೆ ಮಕ್ಕಳ ಭವಿಷ್ಯ ಇನ್ನೊಂದೆಡೆ ಶಿಕ್ಷಣ ಸಂಸ್ಥೆಗಳ ಅಳಿವು-ಉಳಿವು ನೋಡಿಕೊಳ್ಳಬೇಕಿದೆ. ಅನುದಾನ ರಹಿತ ಖಾಸಗಿ ಶಿಕ್ಷಣ ಸಂಸ್ಥೆಗಳ ಮೇಲೆ ಆಗುತ್ತಿರುವ ಶೋಷಣೆ ಕುರಿತು ಸಾಮಾಜಿಕ ಜಾಲತಾಣ,ಬಿತ್ತಿ ಪತ್ರ,ಬ್ಯಾನರ್ಗಳ ಮೂಲಕ ಸಾರ್ವಜನಿಕರಿಗೆ, ಪಾಲಕರಿಗೆ, ಬುದ್ಧಿಜೀವಿಗಳಿಗೆ ಜಾಗೃತಿ ಮೂಡಿಸಲಾಗುವುದು. ನಮ್ಮ ಸಂಸ್ಥೆಗಳ ಉಳಿವಿಗಾಗಿ ನಿರಂತರ ಹೋರಾಟ ನಡೆಯಲಿದೆ. ಖಾಸಗಿ ಶಿಕ್ಷಣ ಸಂಸ್ಥೆಗಳ ಮೇಲಾಗುತ್ತಿರುವ ಶೋಷಣೆ ಕುರಿತು ಸರ್ಕಾರ ಸ್ಪಂದಿಸದೇ ಹೋದರೆ ಮುಂದಿನ ದಿನಗಳಲ್ಲಿ ಪಾಲಕ-ಪೋಷಕರ ಕ್ಷಮೆ ಕೋರಿ ಗುಣಮಟ್ಟ ಶಿಕ್ಷಣ ಕೊಡಲು ಮಾನಸಿಕವಾಗಿ ಶಿಕ್ಷಣ ಸಂಸ್ಥೆಗಳನ್ನು ನಡೆಸಲು ಬಿಡದ ಭ್ರಷ್ಟ ಕನಿಷ್ಠ ಜ್ಞಾನ ರಹಿತ ಅಧಿಕಾರಿಗಳ ವಿರುದ್ಧ ಶಾಲೆ ಬಂದ್ ಮಾಡುವ ಮೂಲಕ ಹೋರಾಟ ಮಾಡಬೇಕಾಗುತ್ತದೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ಎಚ್ಚರಿಸಿದ್ದಾರೆ.
Subscribe to Updates
Get the latest creative news from FooBar about art, design and business.
ಆ.೧೫ ರಂದು ಕರಾಳ ಸ್ವಾತಂತ್ರ್ಯ ದಿನಾಚರಣೆಗೆ ನಿರ್ಧಾರ :ಪೂಜಾರಿ
Related Posts
Add A Comment

