ದೇವರಹಿಪ್ಪರಗಿ: ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷ ಹಿಂದುಳಿದ ವರ್ಗದವರಿಗೆ ಮನ್ನಣೆ ನೀಡಿ ದೇವರಹಿಪ್ಪರಗಿ ಮತಕ್ಷೇತ್ರಕ್ಕೆ ಹಿಂದುಳಿದ ವರ್ಗಕ್ಕೆ ಟಿಕೆಟ್ ನೀಡಿರುವ ಕ್ರಮ ಸ್ವಾಗತಾರ್ಹವಾಗಿದೆ ಎಂದು ಜಿಪಂ ಮಾಜಿ ಅಧ್ಯಕ್ಷೆ ಸುಜಾತಾ ಕಳ್ಳಿಮನಿ ಹರ್ಷ ವ್ಯಕ್ತ ಪಡಿಸಿದ್ದಾರೆ.
ಸಾಮಾಜಿಕ ನ್ಯಾಯದ ಅಡಿಯಲ್ಲಿ ಜಿಲ್ಲೆಗೆ ಒಂದು ಅವಕಾಶ ನೀಡಬೇಕೆಂಬ ಬೇಡಿಕೆ ಹಿನ್ನೆಲೆಯಲ್ಲಿ ಶರಣಪ್ಪಣ್ಣ ಸುಣಗಾರ ಅವರಿಗೆ ಟಿಕೆಟ್ ನೀಡಿರುವುದು ಸಂತಸ ತಂದಿದೆ. ಸಾಮಾಜಿಕ ನ್ಯಾಯದಡಿಯಲ್ಲಿ ಟಿಕೆಟ್ ನೀಡುವಲ್ಲಿ ವರಿಷ್ಠರು ಸಹಕರಿಸಿದ್ದಾರೆ. ನಾನೂ ಸಹ ದೇವರಹಿಪ್ಪರಗಿ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದೆ. ಸುಣಗಾರ ಅವರಿಗೆ ಟಿಕೆಟ್ ನೀಡಿದ್ದು, ನನಗೆ ನೀಡಿದಷ್ಟು ಸಂತೋಷವಾಗಿದೆ. ಎಲ್ಲ ಅಭ್ಯರ್ಥಿಗಳು ಬಹಳಷ್ಟು ಶ್ರಮವಹಿಸಿ ಕ್ಷೇತ್ರದ ತುಂಬ ಸಂಚರಿಸಿ ಮತದಾರರ ಮನಸ್ಸು ಗೆಲ್ಲುವಲ್ಲಿ ಯಶಸ್ವಿಯಾಗಿದ್ದರು. ಎಲ್ಲರೂ ಕಾಂಗ್ರೆಸ್ ಅಭ್ಯರ್ಥಿ ಗೆಲುವಿಗೆ ಶ್ರಮಿಸೋಣ ಎಂದು ತಿಳಿಸಿದ್ದಾರೆ.
Related Posts
Add A Comment