Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 12, 2026

ಬಿ.ಎಲ್.ಡಿ.ಇ ಸಂಸ್ಥೆಯಿಂದ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ನೆರವು

ವಾರ್ಡನ್ ಕಿರುಕುಳಕ್ಕೆ ಬೇಸತ್ತು ಹೆಡ್ ಕುಕ್ ಆತ್ಮಹತ್ಯೆ!

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಆ.೨೦ರಂದು ಜಿಲ್ಲಾಡಳಿತದಿಂದ ಅರಸು ಜಯಂತಿ ಕಾರ್ಯಕ್ರಮ
(ರಾಜ್ಯ ) ಜಿಲ್ಲೆ

ಆ.೨೦ರಂದು ಜಿಲ್ಲಾಡಳಿತದಿಂದ ಅರಸು ಜಯಂತಿ ಕಾರ್ಯಕ್ರಮ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರ: ಹಿಂದುಳಿದ ವರ್ಗಗಳ ಹರಿಕಾರ, ರಾಜ್ಯದ ಮಾಜಿ ಮುಖ್ಯಮಂತ್ರಿ ಡಿ.ದೇವರಾಜ್ ಅರಸು ಅವರ ಜನ್ಮ ದಿನಾಚರಣೆಯನ್ನು ಜಿಲ್ಲಾಡಳಿತದ ವತಿಯಿಂದ ಆಗಸ್ಟ್ ೨೦ರಂದು ಆಚರಿಸಲು ನಿರ್ಧರಿಸಲಾಯಿತು.
ಶುಕ್ರವಾರ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಅವರ ಅಧ್ಯಕ್ಷತೆಯಲ್ಲಿ ಜರುಗಿದ ಡಿ. ದೇವರಾಜ್ ಅರಸು ಅವರ ೧೦೯ನೇ ಜನ್ಮ ದಿನಾಚರಣೆ ಪೂರ್ವಭಾವಿ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಯಿತು.
ಡಿ.ದೇವರಾಜ್ ಅರಸು ಅವರ ೧೦೯ನೇ ಜನ್ಮ ದಿನಾಚರಣೆ ಅಂಗವಾಗಿ ಅಂದು ಬೆಳಿಗ್ಗೆ ೯-೩೦ಕ್ಕೆ ನಗರದ ಶ್ರೀ ಸಿದ್ಧೇಶ್ವರ ದೇವಸ್ಥಾನದಿಂದ ಡಿ.ದೇವರಾಜ ಅರಸು ಅವರ ಭಾವಚಿತ್ರದ ಮೆರವಣಿಗೆಯನ್ನು ವಿವಿಧ ಕಲಾ ತಂಡಗಳೊಂದಿಗೆ ನಗರದ ವಿವಿಧ ವೃತ್ತಗಳಲ್ಲಿ ಸಂಚರಿಸಿ ಶ್ರೀ ಕಂದಗಲ್ ಹನುಮಂತರಾಯ ರಂಗ ಮಂದಿರಕ್ಕೆ ಆಗಮಿಸಿ, ರಂಗ ಮಂದಿರದಲ್ಲಿ ಜಯಂತಿ ಕಾರ್ಯಕ್ರಮ ಆಯೋಜಿಸಲು ನಿರ್ಧರಿಸಲಾಯಿತು.
ಜಯಂತಿ ಕಾರ್ಯಕ್ರಮದಲ್ಲಿ ೨೦೨೩-೨೪ನೇ ಸಾಲಿನಲ್ಲಿ ಎಸ್.ಎಸ್.ಎಲ್.ಸಿ, ಪಿಯುಸಿ, ಪದವಿ ಹಾಗೂ ಸ್ನಾತಕೋತ್ತರ ಪದವಿಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಹಿಂದುಳಿದ ವರ್ಗದ ಇಲಾಖೆಯ ವಸತಿ ನಿಲಯಗಳಲ್ಲಿ ವ್ಯಾಸಂಗ ಮಾಡಿರುವ ನಿಲಯಾರ್ಥಿಗಳಿಗೆ ಸನ್ಮಾನಿಸಲು ತೀರ್ಮಾನಿಸಲಾಯಿತು. ಇದರಿಂದ ವಸತಿ ನಿಲಯದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ನೀಡಿದಂತಾಗುತ್ತದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ದೇವರಾಜ್ ಅರಸು ಅವರ ಕುರಿತಾಗಿ ವಿಶೇಷ ಉಪನ್ಯಾಸ ನೀಡಲು, ಉಪನ್ಯಾಸಕ ಓರ್ವರನ್ನು ಆಹ್ವಾನಿಸಲು ನಿರ್ಧರಿಸಲಾಯಿತು. ಡಿ.ದೇವರಾಜ್ ಅರಸು ಅವರ ಕುರಿತಾಗಿ ಸುಂದರ ರೂಪಕ ಪ್ರಸ್ತುತಪಡಿಸಲು ಕ್ರಮ ಕೈಗೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಲಾಯಿತು.
ಡಿ ದೇವರಾಜ್ ಅರಸು ಅವರ ಜನ್ಮ ದಿನಾಚರಣೆಯನ್ನು ಅಚ್ಚುಕಟ್ಟಾಗಿ ನೆರವೇರಿಸಲು ಎಲ್ಲಾ ಅಗತ್ಯ ಸಿದ್ಧತೆಗಳನ್ನು ಸಂಬಂಧಿಸಿದ ಇಲಾಖೆಯ ಅಧಿಕಾರಿಗಳು ಮಾಡಿಕೊಳ್ಳಬೇಕು. ವೇದಿಕೆ ಅಲಂಕಾರ, ನೀರಿನ ವ್ಯವಸ್ಥೆ, ಶಿಷ್ಠಾಚಾರದಂತೆ ಆಮಂತ್ರಣ ಪತ್ರಿಕೆ ಮುದ್ರಣ ಮಾಡಿ, ನಿಗದಿತ ಅವಧಿಯಲ್ಲಿ ವಿತರಣೆ ಮಾಡಲು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.
ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಪಾಲ್ಗೊಳ್ಳುವ ಮೂಲಕ ಕಾರ್ಯಕ್ರಮಕ್ಕೆ ಮೆರಗು ತರಲು ತಿಳಿಸಿದರು.
ಸಭೆಯಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಈರಣ್ಣ ಆಶಾಪೂರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಸಂತೋಷ ಭೋವಿ, ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳಾದ ಅರವಿಂದ ಹಿರೊಳ್ಳಿ, ವಿದ್ಯಾವತಿ ಅಂಕಲಗಿ, ಮಲ್ಲು ಬಿದರಿ, ಸೋಮನಾಥ ಕಳ್ಳಿಮನಿ, ಅಡಿವೆಪ್ಪ ಸಾಲಗಲ್, ಭೀಮರಾಯ ಜಿಗಜಿಣಗಿ, ದೇವೇಂದ್ರ ಮೇರೆಕರ್, ಸೋಮನಗೌಡ ಕಲ್ಲೂರ, ಗಿರೀಶ ಕುಲಕರ್ಣಿ, ಸಿದ್ದು ರಾಯಣ್ಣನವರ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 12, 2026

ಬಿ.ಎಲ್.ಡಿ.ಇ ಸಂಸ್ಥೆಯಿಂದ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ನೆರವು

ವಾರ್ಡನ್ ಕಿರುಕುಳಕ್ಕೆ ಬೇಸತ್ತು ಹೆಡ್ ಕುಕ್ ಆತ್ಮಹತ್ಯೆ!

ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚುನಾವಣೆಯಲ್ಲಿ ಗೊಂದಲ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 12, 2026
    In ದಿನಪತ್ರಿಕೆ
  • ಬಿ.ಎಲ್.ಡಿ.ಇ ಸಂಸ್ಥೆಯಿಂದ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ನೆರವು
    In (ರಾಜ್ಯ ) ಜಿಲ್ಲೆ
  • ವಾರ್ಡನ್ ಕಿರುಕುಳಕ್ಕೆ ಬೇಸತ್ತು ಹೆಡ್ ಕುಕ್ ಆತ್ಮಹತ್ಯೆ!
    In (ರಾಜ್ಯ ) ಜಿಲ್ಲೆ
  • ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚುನಾವಣೆಯಲ್ಲಿ ಗೊಂದಲ
    In (ರಾಜ್ಯ ) ಜಿಲ್ಲೆ
  • ಪತ್ರಕರ್ತರು ವಸ್ತುನಿಷ್ಠವಾಗಿ, ಶೋಧನೆ ಮಾಡಿ ಬರೆಯಬೇಕು
    In (ರಾಜ್ಯ ) ಜಿಲ್ಲೆ
  • ಅಧ್ಯಕ್ಷರಾಗಿ ಮಹೇಶ್, ಉಪಾಧ್ಯಕ್ಷರಾಗಿ ಜಯ ಅವಿರೋಧ ಆಯ್ಕೆ
    In (ರಾಜ್ಯ ) ಜಿಲ್ಲೆ
  • ಸಿ.ವಿ.ರಾಮನ್ ಪ.ಪೂ ಕಾಲೇಜ್ ಉತ್ತಮ ಸಾಧನೆ
    In (ರಾಜ್ಯ ) ಜಿಲ್ಲೆ
  • ಗುರು ಸಂಗನಬಸವ ಸ್ವಾಮೀಜಿ ಅಡ್ಡಪಲ್ಲಕ್ಕಿ ಉತ್ಸವ & ಅಗ್ನಿ ಪ್ರವೇಶ
    In (ರಾಜ್ಯ ) ಜಿಲ್ಲೆ
  • ಬೊಗಸೆಯಲ್ಲಿ ಅರಳುವ ನಿನ್ನಂದದ ಮುಖಕೆ
    In ವಿಶೇಷ ಲೇಖನ
  • ಕಲಕೇರಿ ಬಸವೇಶ್ವರ ಪ.ಪೂ ಕಾಲೇಜು ಅತ್ಯುತ್ತಮ ಸಾಧನೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.