ವಿಜಯಪುರ: ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಿಷಿ ಆನಂದ ಅವರು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಡಿಯ ಸಾಂತ್ವನ ಮಹಿಳಾ ಸಹಾಯವಾಣಿ ಕೇಂದ್ರಕ್ಕೆ ಶುಕ್ರವಾರ ಭೇಟಿ ನೀಡಿ ಪರಿಶೀಲಿಸಿದರು.
ಈ ಕೇಂದ್ರದಲ್ಲಿ ಒದಗಿಸುತ್ತಿರುವ ಆಪ್ತ ಸಮಾಲೋಚನೆ ಹಾಗೂ ಸಲಹೆಗಳ ಕುರಿತು ಪರಿಶೀಲಿಸಿ, ದಾಖಲಾಗಿರುವ ಪ್ರಕರಣಗಳ ಪ್ರತ್ಯೇಕ ಕಡತ, ದೂರವಾಣಿ ಕರೆಗಳ ವಹಿ, ಸಂದರ್ಶಕರ ವಹಿ, ಆಪ್ತ ಸಮಾಲೋಚನಾ ದಾಖಲಾತಿ, ಕೇಂದ್ರದ ಮಾಸಿಕ ಪ್ರಗತಿ ವರದಿ, ಪ್ರಕರಣಗಳ ದಾಖಲಾತಿ ಪುಸ್ತಕ, ಸಿಬ್ಬಂದಿಗಳ ಹಾಜರಾತಿ ಪುಸ್ತಕ ಹಲವಾರು ದಾಖಲಾತಿ ಪರಿಶೀಲಿಸಿದರು. ಕೇಂದ್ರದಲ್ಲಿ ಒದಗಿಸಲಾದ ಮೂಲಭೂತ ಸೌಕರ್ಯಗಳ ಕುರಿತು ಪರಿಶೀಲನೆ ನಡೆಸಿದರು. ಸಾಂತ್ವನ ಕೇಂದ್ರಕ್ಕೆ ವರದಿಯಾಗುವ ಪ್ರಕರಣಗಳನ್ನು ಆದ್ಯತೆಯ ಮೇರೆಗೆ ಇತ್ಯರ್ಥಪಡಿಸಿ ಸಕಾಲದಲ್ಲಿ ಪರಿಹಾರ ಒದಗಿಸಬೇಕು ಸಾಂತ್ವನ ಕೇಂದ್ರದ ಕುರಿತು ಸಾರ್ವಜನಿಕರಿಗೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು ಎಂದು ಮಹಿಳಾ ಸಾಂತ್ವನ ಕೇಂದ್ರದ ಅಧಿಕಾರಿಗಳಿಗೆ ಸೂಚನೆ ನೀಡಿದರು
ಈ ಸಂದರ್ಭದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಜಿಲ್ಲಾ ನಿರೂಪಣಾಧಿಕಾರಿ ಶ್ರೀಮತಿ ಸಾವಿತ್ರಿ ಗುಗ್ಗರಿ, ಸಾಂತ್ವನ ಮಹಿಳಾ ಸಹಾಯವಾಣಿ ಕೇಂದ್ರದ ಅಧ್ಯಕ್ಷರಾದ ವಿಶ್ವನಾಥ್ ಬೆನಕಟ್ಟಿ, ಆಪ್ತ ಸಮಾಲೋಚಕರಾದ ರಿಯಾನಬಿ ಎಸ್. ಕಡಕೋಳ, ಸಮಾಜ ಕಾರ್ಯಕರ್ತರಾದ ಖಾಜಮ್ಮ ಮರಾಠಿ ಮತ್ತು ಸ್ನೇಹ ಹಾಬರಿ ಹಾಗೂ ಇತರರು ಉಪಸ್ಥಿತರಿದ್ದರು.
Subscribe to Updates
Get the latest creative news from FooBar about art, design and business.
ಸಾಂತ್ವನ ಮಹಿಳಾ ಕೇಂದ್ರಕ್ಕೆ ಭೇಟಿ ನೀಡಿದ ಜಿ.ಪಂ ಸಿಇಓ ರಿಷಿ ಆನಂದ
Related Posts
Add A Comment

