ಚಡಚಣ: ತಾಲೂಕಿನ ಬಸವ ಸಮಿತಿ ಮತ್ತು ಮಾನವ ಬಂಧುತ್ವ ವೇದಿಕೆ ಅಡಿಯಲ್ಲಿ ೮೨೯ ಬಸವ ಪಂಚಮಿಯನ್ನು ಪಟ್ಟಣದ ಎಂಇಎಸ್ ಶಿಕ್ಷಣ ವಿದ್ಯಾಲಯದಲ್ಲಿ ನೂರಾರು ಮಕ್ಕಳಿಗೆ ಬದಾಮಿ ಹಾಲು ಕುಡಿಸುವ ಮೂಲಕ ಆಚರಣೆ ಮಾಡಲಾಯಿತು.
ಈ ಕಾರ್ಯಕ್ರಮದ ಸಾನಿಧ್ಯವನ್ನು ವಹಿಸಿದ್ದ ಬಸವಕಲ್ಯಾಣದ ಡಾ. ಬಸವಪ್ರಭು ಮಹಾಸ್ವಾಮಿಗಳು ಮಾತನಾಡಿ. ಭಾರತದಲ್ಲಿ ಆಚರಿಸುವ ಪ್ರತಿವೊಂದು ಹಬ್ಬಗಳ ಹಿಂದೆ ನಮ್ಮ ಹಿರಿಯರ ವೈಜ್ಞಾನಿಕ ಮತ್ತು ವೈಚಾರಿಕ ಚಿಂತನೆ ಅಡಗಿರುತ್ತದೆ. ನಾಗರ ಪಂಚಮಿಯಂದು ಕಲ್ಲು ನಾಗರಕ್ಕೆ ಹಾಲನ್ನು ಎರೆಯುವ ಮೂಲಕ ಅಮೂಲ್ಯವಾದ ಹಾಲನ್ನು ವ್ಯರ್ಥಮಾಡುವ ಮಾನವನ ಮೂರ್ಖತನವನ್ನು ನಿವಾರಿಸಿ ಪಂಚಮಿ ಹಬ್ಬವನ್ನು ವೈಜ್ಞಾನಿಕ ಹಾಗೂ ವೈಚಾರಿಕ ಹಿನ್ನಲೆಯಲ್ಲಿ ಬಸವ ಪಂಚಮಿ ಎಂದು ಆಚರಿಸುವ ಅಭಿಯಾನ ಪ್ರತಿವರ್ಷ ಮಾಡುತ್ತಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಪಟ್ಟಣದ ಬಸವ ಸಮಿತಿಯ ಮುರಗೇಶ ಸಿಂಪಿ, ಶಾಲೆಯ ಅಧ್ಯಕ್ಷರಾದ ಮೋಹನ ಚೋಳಕೆ, ಶಿಕ್ಷಕ ಸಿಬ್ಬಂದಿ ವರ್ಗ, ಸುರೇಶ ಭಂಡರಕವಟೆ, ಶ್ರೀಶೈಲ ಕೋಳಿ, ಸೈದು ಕೂಡವನ, ವಿಜಯ ವಾಘಮೋರೆ, ಜಕರಾಯ ಭಾಮನೆ ಸೇರಿದಂತೆ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
Subscribe to Updates
Get the latest creative news from FooBar about art, design and business.
Related Posts
Add A Comment

