ವಿಜಯಪುರ: ಜಮಖಂಡಿ ಮಾಜಿ ಶಾಸಕ ಶ್ರೀಕಾಂತ ಕುಲಕರ್ಣಿಯವರ ಸುಪುತ್ರ ಭರತ ಎಸ್. ಕುಲಕರ್ಣಿ ಅವರನ್ನು ಭಾರತೀಯ ಜನತಾ ಪಾರ್ಟಿ ವಿಜಯಪುರ ವಾಣಿಜ್ಯ ಮತ್ತು ವ್ಯಾಪಾರಿಗಳ ಪ್ರಕೋಷ್ಠ ಜಿಲ್ಲಾ ಸಂಚಾಲಕರನ್ನಾಗಿ ನೇಮಕ ಮಾಡಿ ಬಿಜೆಪಿ ಜಿಲ್ಲಾಧ್ಯಕ್ಷ ಆರ್.ಎಸ್.ಪಾಟೀಲ ಕೂಚಬಾಳ ಅವರು ನಿಯುಕ್ತಿ ಹೊರಡಿಸಿದ್ದಾರೆ.
ಈ ಹೊಣೆಗಾರಿಕೆಯನ್ನು ಅತ್ಯಂತ ಜವಾಬ್ದಾರಿಯುತವಾಗಿ ನಿರ್ವಹಿಸುತಾ, ಪಕ್ಷದ ಸಂಘಟನೆಯನ್ನು ತಳಮಟ್ಟದಲ್ಲಿ ಸದೃಢಗೊಳಿಸುತ್ತಾ, ಮುಂಬರುವ ಎಲ್ಲ ರೀತಿಯ ಸವಾಲುಗಳನ್ನು ಎದುರಿಸಲು ಶಕ್ತಿ ತುಂಬುತ್ತಾ ಪಕ್ಷದ ವರ್ಚಸ್ಸನ್ನು ಹೆಚ್ಚಿಸುವಲ್ಲಿ ಸತತ ಶ್ರಮಿಸಲು ತಿಳಿಸಿದ್ದಾರೆ.
Subscribe to Updates
Get the latest creative news from FooBar about art, design and business.
Related Posts
Add A Comment

