Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 12, 2026

ಬಿ.ಎಲ್.ಡಿ.ಇ ಸಂಸ್ಥೆಯಿಂದ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ನೆರವು

ವಾರ್ಡನ್ ಕಿರುಕುಳಕ್ಕೆ ಬೇಸತ್ತು ಹೆಡ್ ಕುಕ್ ಆತ್ಮಹತ್ಯೆ!

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಬಿಜೆಪಿ-ಜೆಡಿಎಸ್ ಎಷ್ಟೇ ಪಾದಯಾತ್ರೆ ಮಾಡಿದರೂ ಜಗ್ಗಲ್ಲ :ಸಿಎಂ
(ರಾಜ್ಯ ) ಜಿಲ್ಲೆ

ಬಿಜೆಪಿ-ಜೆಡಿಎಸ್ ಎಷ್ಟೇ ಪಾದಯಾತ್ರೆ ಮಾಡಿದರೂ ಜಗ್ಗಲ್ಲ :ಸಿಎಂ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಮೈಸೂರಿನಲ್ಲಿ ಕಾಂಗ್ರೆಸ್ ಆಯೋಜಿಸಿದ್ದ ಜನಾಂದೋಲನ ಸಮಾವೇಶದಲ್ಲಿ ಸಿಎಂ ಸಿದ್ದರಾಮಯ್ಯ ಗುಡುಗು


ಬೆಂಗಳೂರು: ಮನುವಾದಿಗಳು, ಜಾತಿವಾದಿಗಳು ಯಾವತ್ತೂ ಕೂಡ ಶೋಷಿತರು ಅಧಿಕಾರ ನಡೆಸುವುದನ್ನು ಸಹಿಸುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದರು.
ಶುಕ್ರವಾರ ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಕಾಂಗ್ರೆಸ್ ಆಯೋಜಿಸಿದ್ದ ಜನಾಂದೋಲನ ಸಮಾವೇಶದಲ್ಲಿ ಅವರು ಮಾತನಾಡಿದರು.
ದೇವರಾಜ ಅರಸು, ಬಂಗಾರಪ್ಪ ಅವರನ್ನೂ ಇವರು ಸಹಿಸಲಿಲ್ಲ. ಈಗ ನನ್ನನ್ನೂ ಸಹಿಸುತ್ತಿಲ್ಲ. ಜೆಡಿಎಸ್‌ನ ದೇವೇಗೌಡರು ಮತ್ತು ಕುಮಾರಸ್ವಾಮಿ ಯಾವತ್ತೂ ಕೊಟ್ಟ ಮಾತಿನಂತೆ ನಡೆದುಕೊಂಡವರಲ್ಲ. ಧರಂಸಿಂಗ್ ಜೊತೆ ಸರ್ಕಾರ ರಚಿಸಿ ಕೊಟ್ಟ ಮಾತು ಉಳಿಸಿಕೊಂಡಿಲ್ಲ. ಕುಮಾರಸ್ವಾಮಿ ಬಿಜೆಪಿ ಜೊತೆ ಸೇರಿ ಅಧಿಕಾರ ನಡೆಸಿದರೆ ನನ್ನ ಶವದ ಮೇಲೆ ನಡೆಸಬೇಕು ಎಂದು ದೇವೇಗೌಡರು ಹೇಳಿದ್ದರು. ಮೋದಿ ಮತ್ತೆ ಪ್ರಧಾನಿಯಾದರೆ ದೇಶ ಬಿಟ್ಟು ಹೋಗುತ್ತೇನೆ ಎಂದಿದ್ದರು. ಈಗ ಬಿಜೆಪಿ ಜೊತೆ ಶಾಮೀಲಾಗಿದ್ದಾರೆ” ಎಂದು ಹರಿಹಾಯ್ದರು.
ನಾನು ರಾಜ್ಯದ ಜನರ ಆಶೀರ್ವಾದದಿಂದ ಎರಡು ಬಾರಿ ಉಪ ಮುಖ್ಯಮಂತ್ರಿಯಾಗಿದ್ದೀನಿ. ಎರಡು ಬಾರಿ ಮುಖ್ಯಮಂತ್ರಿಯಾಗಿದ್ದೇನೆ. ನನಗೆ ಇಷ್ಟೆಲ್ಲಾ ಅಧಿಕಾರ ಸಿಕ್ಕಾಗಲೂ, ಹಣ ಮಾಡುವ ಆಸೆ ಬಂದಿಲ್ಲ. ನನ್ನ ಪತ್ನಿ ಇವತ್ತಿನವರೆಗೂ ಸಾರ್ವಜನಿಕವಾಗಿ ಕಾಣಿಸಿಕೊಂಡಿಲ್ಲ. ಎರಡು ಬಾರಿ ಸಿಎಂ ಆದರೂ, ಪ್ರಮಾಣ ವಚನಕ್ಕೂ ಬರಲಿಲ್ಲ. ನಾವು ಭ್ರಷ್ಟಾಚಾರ ಮಾಡಲು, ನಿಮ್ಮ ನಂಬಿಕೆಗೆ ದ್ರೋಹವೆಸಗಲು ಸಾಧ್ಯವಿಲ್ಲ. ನಾನು ರಾಜಕೀಯದಲ್ಲಿ ಇರುವವರೆಗೂ ಯಾವತ್ತೂ ನಿಮ್ಮ ನಂಬಿಕೆಗೆ ದ್ರೋಹ ಬಗೆಯಲ್ಲ” ಎಂದರು.
ಯಡಿಯೂರಪ್ಪ ಅವರು ಚೆಕ್‌ನಲ್ಲಿ ಲಂಚ ಪಡೆದು ಜೈಲಿಗೆ ಹೋದರು. ಆರ್.ಅಶೋಕ್, ವಿಜಯೇಂದ್ರ ಇವರೆಲ್ಲರೂ ಜೈಲಿಗೆ ಹೋಗಬೇಕಾದವರು. ಇವರಿಗೆ ನನ್ನ ಬಗ್ಗೆ ಮಾತನಾಡುವ ಯಾವ ಯೋಗ್ಯತೆ ಇದೆ” ಎಂದು ಸಿಎಂ ಸಿದ್ದರಾಮಯ್ಯ ಕಿಡಿಕಾರಿದರು.

ನಾನು ಜಗ್ಗಲ್ಲ, ಬಗ್ಗಲ್ಲ :ಸಿಎಂ

ಬಿಜೆಪಿ, ಜೆಡಿಎಸ್ ಒಟ್ಟಾಗಿ ಎಷ್ಟೇ ಪಾದಯಾತ್ರೆ ಮಾಡಿದರೂ ನಾನು ಜಗ್ಗಲ್ಲ, ಬಗ್ಗಲ್ಲ. ಹಿಂದುಳಿದ ವರ್ಗಗಳಲ್ಲಿ ದೇವರಾಜ ಅರಸು ಬಿಟ್ಟರೆ ಮುಖ್ಯಮಂತ್ರಿಯಾಗಿ ಪೂರ್ಣಾವಧಿ ಮುಗಿಸಿದ್ದು ನಾನು ಮಾತ್ರ. ಇದನ್ನು ಬಿಜೆಪಿ, ಜೆಡಿಎಸ್ ಸಹಿಸುತ್ತಿಲ್ಲ. ಆದರೆ, ಎಲ್ಲಿಯವರೆಗೂ ಸೇನಾನಿಗಳಾದ ನಿಮ್ಮ ಆಶೀರ್ವಾದ ನನ್ನ ಮೇಲೆ ಇರುತ್ತದೋ ಅಲ್ಲಿಯವರೆಗೂ ನನ್ನನ್ನು ಯಾವ ಪಾದಯಾತ್ರೆಗಳೂ ಅಲುಗಾಡಿಸಲು ಸಾಧ್ಯವಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಗುಡುಗಿದರು.

ಸರ್ಕಾರದ ಮೇಲೆ ಸುಳ್ಳು ಆರೋಪ

ವಾಲ್ಮೀಕಿ ನಿಗಮದ ಪ್ರಕರಣದಲ್ಲೂ ಸರ್ಕಾರದ ಮೇಲೆ ಸುಳ್ಳು ಆರೋಪ ಹೊರಿಸಲು ಯತ್ನಿಸಿ ಸೋತರು. ದಾಖಲೆಗಳು ಸ್ಪಷ್ಟವಾಗಿವೆ. ಸರ್ಕಾರಕ್ಕೂ ನಿಗಮದ ಹಗರಣಕ್ಕೂ ಸಂಬಂಧ ಇಲ್ಲ ಎನ್ನುವುದು ದಾಖಲೆಗಳಲ್ಲಿದೆ. ವಾಲ್ಮೀಕಿ ನಿಗಮದ ಹಗರಣ ಹೊರಗೆ ಬಂದ ತಕ್ಷಣ ನಾವು ಎಸ್‌ಐಟಿ ರಚಿಸಿದೆವು. ತನಿಖೆ ನಡೆದು ಹಣ ವಾಪಾಸ್ ವಸೂಲಾಗಿದೆ. 50 ಕೋಟಿ ರೂಪಾಯಿಯನ್ನು ರಿಕವರಿ ಮಾಡಿ ಆಗಿದೆ. 46 ಕೋಟಿ ಹಣ ಖಾಸಗಿ ಬ್ಯಾಂಕ್ ನಲ್ಲಿದ್ದು ಫ್ರೀಝ್ ಮಾಡಿದ್ದಾರೆ. ಹೀಗಾಗಿ ಹಗರಣವೇ ಅಲ್ಲದ ಮುಡಾ ಪ್ರಕರಣಕ್ಕೆ ಹಗರಣದ ಬಣ್ಣ ಕೊಟ್ಟರು” ಎಂದು ಸಿಎಂ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 12, 2026

ಬಿ.ಎಲ್.ಡಿ.ಇ ಸಂಸ್ಥೆಯಿಂದ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ನೆರವು

ವಾರ್ಡನ್ ಕಿರುಕುಳಕ್ಕೆ ಬೇಸತ್ತು ಹೆಡ್ ಕುಕ್ ಆತ್ಮಹತ್ಯೆ!

ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚುನಾವಣೆಯಲ್ಲಿ ಗೊಂದಲ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 12, 2026
    In ದಿನಪತ್ರಿಕೆ
  • ಬಿ.ಎಲ್.ಡಿ.ಇ ಸಂಸ್ಥೆಯಿಂದ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ನೆರವು
    In (ರಾಜ್ಯ ) ಜಿಲ್ಲೆ
  • ವಾರ್ಡನ್ ಕಿರುಕುಳಕ್ಕೆ ಬೇಸತ್ತು ಹೆಡ್ ಕುಕ್ ಆತ್ಮಹತ್ಯೆ!
    In (ರಾಜ್ಯ ) ಜಿಲ್ಲೆ
  • ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚುನಾವಣೆಯಲ್ಲಿ ಗೊಂದಲ
    In (ರಾಜ್ಯ ) ಜಿಲ್ಲೆ
  • ಪತ್ರಕರ್ತರು ವಸ್ತುನಿಷ್ಠವಾಗಿ, ಶೋಧನೆ ಮಾಡಿ ಬರೆಯಬೇಕು
    In (ರಾಜ್ಯ ) ಜಿಲ್ಲೆ
  • ಅಧ್ಯಕ್ಷರಾಗಿ ಮಹೇಶ್, ಉಪಾಧ್ಯಕ್ಷರಾಗಿ ಜಯ ಅವಿರೋಧ ಆಯ್ಕೆ
    In (ರಾಜ್ಯ ) ಜಿಲ್ಲೆ
  • ಸಿ.ವಿ.ರಾಮನ್ ಪ.ಪೂ ಕಾಲೇಜ್ ಉತ್ತಮ ಸಾಧನೆ
    In (ರಾಜ್ಯ ) ಜಿಲ್ಲೆ
  • ಗುರು ಸಂಗನಬಸವ ಸ್ವಾಮೀಜಿ ಅಡ್ಡಪಲ್ಲಕ್ಕಿ ಉತ್ಸವ & ಅಗ್ನಿ ಪ್ರವೇಶ
    In (ರಾಜ್ಯ ) ಜಿಲ್ಲೆ
  • ಬೊಗಸೆಯಲ್ಲಿ ಅರಳುವ ನಿನ್ನಂದದ ಮುಖಕೆ
    In ವಿಶೇಷ ಲೇಖನ
  • ಕಲಕೇರಿ ಬಸವೇಶ್ವರ ಪ.ಪೂ ಕಾಲೇಜು ಅತ್ಯುತ್ತಮ ಸಾಧನೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.