ವಿಜಯಪುರ: ಪೌರಾಡಳಿತ ಮತ್ತು ಹಜ್ ಖಾತೆ ಸಚಿವ ರಹೀಂ ಖಾನ್ ಅವರು ಆ.೧೩ರಂದು ವಿಜಯಪುರ ಜಿಲ್ಲಾ ಪ್ರವಾಸ ಕೈಗೊಂಡು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.
ಅಂದು ಬೆಳಿಗ್ಗೆ ೯-೪೦ಕ್ಕೆ ಕಲ್ಬುರ್ಗಿಯಿಂದ ಹೊರಟು, ಮಧ್ಯಾಹ್ನ ೧೨-೪೦ಕ್ಕೆ ವಿಜಯಪುರಕ್ಕೆ ಆಗಮಿಸಲಿದ್ದಾರೆ. ಮಧ್ಯಾಹ್ನ ೧ರಿಂದ ೧-೩೦ರವರೆಗೆ ಜಿಲ್ಲೆಯ ಘನತ್ಯಾಜ್ಯ ನಿರ್ವಹಣಾ ಘಟಕಕ್ಕೆ ಭೇಟಿ ನೀಡಲಿದ್ದಾರೆ. ಮಧ್ಯಾಹ್ನ ೧-೩೦ಕ್ಕೆ ಇಂದಿರಾ ಕ್ಯಾಂಟೀನ್‌ಗೆ ಭೇಟಿ ನೀಡಲಿದ್ದಾರೆ. ೨-೩೦ ಗಂಟೆಗೆ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ವ್ಯಾಪ್ತಿಯ ನಗರ ಸ್ಥಳೀಯ ಸಂಸ್ಥೆಗಳಿಗೆ ಸಮಬಂಧಿಸಿದ ಪ್ರಗತಿ ಪರಿಶೀಲನಾ ಸಭೆ ನಡೆಸಿ, ಅಂದು ವಿಜಯಪುರದಲ್ಲಿ ವಾಸ್ತವ್ಯ ಮಾಡಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
Subscribe to Updates
Get the latest creative news from FooBar about art, design and business.
Related Posts
Add A Comment
