ವಿಜಯಪುರ: ಸಿಬ್ಬಂದಿ ನೇಮಕಾತಿ ಆಯೋಗದ ವತಿಯಿಂದ ಸ್ಟೆನೋಗ್ರಾಫರ್ (ಗ್ರೇಡ್-ಸಿ ಮತ್ತು ಡಿ) ಪರೀಕ್ಷೆ ೨೦೨೪ರ ಹುದ್ದೆಗಳ ನೇಮಕಾತಿಗಾಗಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಸ್ಟೆನೋಗ್ರಾಫರ್ ಹುದ್ದೆಗಳ ನೇಮಕಾತಿಗಾಗಿ ಕಂಪ್ಯೂಟರ್ ಆಧಾರಿತ ಸ್ಪರ್ಧಾತ್ಮಕ ಪರೀಕ್ಷೆಯನ್ನು ದೇಶದಾದ್ಯಂತೆ ನಡೆಸಲಾಗುತ್ತಿದೆ. ಜಿಲ್ಲೆಯ ಆಸಕ್ತ ೧೨ನೇ ತರಗತಿ ಮತ್ತು ಶೀಘ್ರಲಿಪಿ ಹಾಗೂ ಬೆರಳಚ್ಚು ಪಾಸಾದ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಮಹಿಳೆಯರು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಮಾಜಿ ಸೈನಿಕರಿಗೆ ಅರ್ಜಿ ಶುಲ್ಕದಲ್ಲಿ ವಿನಾಯಿತಿ ನೀಡಲಾಗಿದೆ.
ಅರ್ಜಿ ಸಲ್ಲಿಸಲು ದಿನಾಂಕ : ೧೭-೦೮-೨೦೨೪ ಕೊನೆಯ ದಿನವಾಗಿದ್ದು, ಅರ್ಜಿ ಸಲ್ಲಿಸಲು ಮತ್ತು ಹೆಚ್ಚಿನ ಮಾಹಿತಿಗಾಗಿ ಸಿಬ್ಬಂದಿ ನೇಮಕಾತಿ ಆಯೋಗದ ವೆಬ್‌ಸೈಟ್ www.ssckkr.kar.nic.in & https:ssc.gov.inನ್ನು ಅಥವಾ ದೂ: ೦೮೦-೨೫೫೦೨೫೨೦/೧೮೦೦೩೦೯೩೦೬೩ ಸಂಖ್ಯೆಗೆ ಸಂಪರ್ಕಿಸುವಂತೆ ಜಿಲ್ಲಾ ಉದ್ಯೋಗ ವಿನಿಮಯ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Subscribe to Updates
Get the latest creative news from FooBar about art, design and business.
Related Posts
Add A Comment
