ವಿಜಯಪುರ: ಮಹಾನಗರ ಪಾಲಿಕೆಯ ೨೧ನೇ ಅವಧಿಯ ವಿವಿಧ ನಾಲ್ಕು ಸ್ಥಾಯಿ ಸಮಿತಿಗಳಿಗೆ ಸದಸ್ಯರ ಆಯ್ಕೆಗಾಗಿ ಆಗಸ್ಟ್ ೧೯ರಂದು ಚುನಾವಣೆ ನಡೆಸಲು ವಿಜಯಪುರ ಮಹಾನಗರ ಪಾಲಿಕೆ ಅಧ್ಯಕ್ಷಾಧಿಕಾರಿಗಳೂ ಆದ ಬೆಳಗಾವಿ ವಿಭಾಗದ ಪ್ರಾದೇಶಿಕ ಆಯುಕ್ತರು ದಿನಾಂಕ ನಿಗದಿಗೊಳಿಸಿದ್ದಾರೆ.
ಚುನಾವಣಾ ವೇಳಾಪಟ್ಟಿಯಂತೆ ವಿಜಯಪುರ ಮಹಾನಗರ ಪಾಲಿಕೆಯ ಸಭಾ ಭವನದಲ್ಲಿ ಆಗಸ್ಟ್ ೧೯ರಂದು ಮಧ್ಯಾಹ್ನ ೩ ಗಂಟೆಗೆ ಸಮಯ ನಿಗದಿಪಡಿಸಿದ್ದು, ಅಂದು ಬೆಳಿಗ್ಗೆ ೧೦ ರಿಂದ ಮಧ್ಯಾಹ್ನ ೧೨ ಗಂಟೆಯವರೆಗೆ ವಿವಿಧ ನಾಲ್ಕು ಸ್ಥಾಯಿ ಸಮಿತಿಗಳಿಗೆ ನಾಮಪತ್ರಗಳ ಸ್ವೀಕಾರ, ಮಧ್ಯಾಹ್ನ ೩ ಗಂಟೆಗೆ ಚುನಾವಣಾ ಪ್ರಕ್ರಿಯೆ ಆರಂಭವಾಗಲಿದೆ ಎಂದು ಪ್ರಕಟಣೆ ತಿಳಿಸಿದೆ.
Subscribe to Updates
Get the latest creative news from FooBar about art, design and business.
Related Posts
Add A Comment
