ಇಂಡಿ: ತಾಲೂಕಿನ ಭೀಮಾನದಿ ಪಾತ್ರದ ಗ್ರಾಮಗಳಿಗೆ ಶಾಸಕ ಯಶವಂತ್ರಾಯಗೌಡ ಪಾಟೀಲ ಅಧಿಕಾರಿಗಳ ತಂಡದೊಂದಿಗೆ ಭೇಟಿ ನೀಡಿ ಪರಿಶೀಲಿಸಿ, ಅಗತ್ಯ ಕ್ರಮ ಕೈಗೊಳ್ಳುವ ಕುರಿತು ಅಧಿಕಾರಿಗಳಿಗೆ ಸೂಚಿಸಿದರು.
ಈ ಸಂದರ್ಭದಲ್ಲಿ ಅಲ್ಲಿನ ಹಲವು ರೈತರು ಮಹಾರಾಷ್ಟ್ರದಿಂದ ನೀರು ಹರಿಬಿಟ್ಟ ಕಾರಣ ನದಿ ಪಾತ್ರದ ಜಮೀನಿನಲ್ಲಿ ನೀರು ನುಗ್ಗಿದ್ದು ಬೆಳೆ ನೀರಿನಲ್ಲಿ ಮುಳುಗಿ ಹಾನಿಯಾಗಿದೆ ಎಂದು ಶಾಸಕರ ಗಮನಕ್ಕೆ ತರುತ್ತಿದ್ದಂತೆ ಸ್ಥಳದಲ್ಲೇ ಇದ್ದ ಕಂದಾಯ ಉಪವಿಭಾಗಾಧಿಕಾರಿ ಅಬೀದ್ ಗದ್ಯಾಳ್ ಹಾಗೂ ತಹಸೀಲ್ದಾರ ಬಿ ಎಸ್ ಕಡಕಭಾವಿ ಅವರಿಗೆ ಈ ಕುರಿತು ಕೂಡಲೇ ತೋಟಗಾರಿಕೆ, ಕೃಷಿ ಇಲಾಖೆಯ ಸಹಯೋಗದಲ್ಲಿ ಸರ್ವೇ ನಡೆಸಿ ಯಾವ ರೈತರ ಎಷ್ಟು ಮೌಲ್ಯದ ಬೆಳೆ ಹಾನಿಯಾಗಿದೆ ಎಂಬುದರ ಕುರಿತು ಪರಿಶೀಲಿಸಿ ವರದಿ ನೀಡುವಂತೆ ತಿಳಿಸಿದರು.
ಪ್ರವಾಹ ಬಂದರೆ ಜನರಿಗೆ ತೊಂದರೆಯಾಗದಂತೆ ಏನು ಕ್ರಮ ಕೈಗೊಂಡಿದ್ದೀರಿ.ಜನರಿಗೆ ಈ ಕುರಿತು ಎಚ್ಚರಿಕೆಯಿಂದ ಇರಲು ತಿಳಿಸಿದ್ದೀರಿಯೇ ಎಂದು ಪ್ರಶ್ನಿಸಲಾಗಿ, ಇದಕ್ಕೆ ಉತ್ತರಿಸಿದ ಅಧಿಕಾರಿಗಳು ನದಿ ಪಾತ್ರದ ಗ್ರಾಮಗಳಿಗೆ ಎಚ್ಚರದಿಂದಿರಲು ಡಂಗುರ ಸಾರಲಾಗಿದೆ. ಗ್ರಾಮಲೆಕ್ಕಾಧಿಕಾರಿಗಳು, ಪಿಡಿಓ ಗಳು ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳ ಗುಂಪು ಮಾಡಿ, ನೋಡಲ್ ಅಧಿಕಾರಿ ನೇಮಿಸಲಾಗಿದೆ ಎಂದು ಮಾಹಿತಿ ನೀಡಿದರು.
ಮಹಾರಾಷ್ಟ್ರದ ಜಿಲ್ಲಾಧಿಕಾರಿಗಳೊಂದಿಗೆ ನಿತ್ಯ ಸಂಪರ್ಕದಲ್ಲಿದ್ದು ಅವರು ಯಾವಾಗ ಎಷ್ಟು ನೀರು ಬಿಡುತ್ತಾರೆ ಎಂಬ ಬಗ್ಗೆ ಸರಿಯಾಗಿ ಮಾಹಿತಿ ಪಡೆದುಕೊಂಡು ನದಿ ಪಾತ್ರದ ಜನತೆಯ ಬಗ್ಗೆ ಕಾಳಜಿವಹಿಸಬೇಕೆಂದು ಅಧಿಕಾರಿಗಳಿಗೆ ಸೂಚಿಸಿದರು.
ಚಿಕ್ಕಮಣೂರ, ಅಗರಖೇಡ, ಗುಬ್ಬೇವಾಡ, ಬರಗುಡಿ, ಹಿಂಗಣಿ ಗ್ರಾಮಗಳಿಗೆ ಭೇಟಿ ನೀಡಿದರು.
ಈ ಸಂದರ್ಭದಲ್ಲಿ ಡಿವೈಎಸ್‌ಪಿ ಜಗದೀಶ. ಹೆಚ್, ಗ್ರಾಮೀಣ ಠಾಣಾ ಪಿಎಸ್‌ಐ ಸೋಮೇಶ ಗೆಜ್ಜಿ, ಮಹಾದೇವಪ್ಪ ಏವೂರ, ಹೆಚ್.ಎಸ್. ಪಾಟೀಲ, ಸೇರಿದಂತೆ ತಾಲೂಕಾ ಮಟ್ಟದ ಅಧಿಕಾರಿಗಳು, ಪಿಡಿಓಗಳು, ಗ್ರಾಮಲೆಕ್ಕಾಧಿಕಾರಿಗಳು ಸೇರಿದಂತೆ ಸ್ಥಳೀಯರಾದ ವಿಠ್ಠಲಗೌಡ ಪಾಟೀಲ, ಹುಚ್ಚಪ್ಪ ತಳವಾರ, ಸಿದ್ದಾರೂಢ ಮರಗೂರ ಮತ್ತಿತರರಿದ್ದರು.
Subscribe to Updates
Get the latest creative news from FooBar about art, design and business.
Related Posts
Add A Comment

