ಚಡಚಣ: ದುಶ್ಚಟಗಳು ವ್ಯಕ್ತಿಯ ಬದುಕು, ಕುಟುಂಬ ಮಾತ್ರವಲ್ಲದೆ ಸಮಾಜದ ಮೇಲೂ ನೇರ ಪರಿಣಾಮ ಬೀರುತ್ತದೆ. ಮಾದಕ ವಸ್ತು ಸೇವನೆ ವ್ಯಕ್ತಿಯ ಮೆದುಳು, ದೈಹಿಕ, ಮಾನಸಿಕ ಆರೋಗ್ಯ ಹಾಗೂ ಸಾಮಾಜಿಕ ಬದುಕಿಗೂ ಮಾರಕವಾಗಿದೆ ಎಂದು ರೇವತಗಾಂವ ಗ್ರಾಮದ ಸರ್ಕಾರಿ ಪ್ರೌಢ ಶಾಲೆಯ ಮುಖ್ಯ ಗುರುಮಾತೆ ಎಂ.ಎಸ್.ಪಾಟೀಲ ಹೇಳಿದರು.
ಸೋಮವಾರದಂದು ರೇವತಗಾಂವ ಗ್ರಾಮದ ಸರ್ಕಾರಿ ಪ್ರೌಢ ಶಾಲೆಯಲ್ಲಿ ಹಮ್ಮಿಕೊಂಡಿದ್ದ ನಶಾ ಮುಕ್ತ ಭಾರತ ಅಭಿಯಾನ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು. ಮಾದಕ ದ್ರವ್ಯಗಳನ್ನು ವಿತರಿಸುವ ಜಾಲವನ್ನೂ ಮಟ್ಟಹಾಕಲು ಕಾನೂನಿನೊಂದಿಗೆ ಸಹಕರಿಸುವುದು, ಮಾದಕ ವಸ್ತುಗಳನ್ನು ಬಳಸುತ್ತಿರುವವರಿಗೆ ಅವುಗಳ ಮಾರಕ ಪರಿಣಾಮದ ಕುರಿತು ತಿಳುವಳಿಕೆ ನೀಡಿ ವ್ಯಸನ ಮುಕ್ತ ಸಮಾಜ ನಿರ್ಮಾಣಕ್ಕೆ ವಿದ್ಯಾರ್ಥಿಗಳು ಮುಂದಾಗಬೇಕು ಎಂದರು.
ಈ ವೇಳೆಯಲ್ಲಿ ವಿದ್ಯಾರ್ಥಿಗಳಿಗೆ ಪ್ರತಿಜ್ಞಾ ವಿಧಿ ಬೋಧಿಸಿ ಗ್ರಾಮೀಣ ಪುರ್ನವಸತಿ ಕಾರ್ಯಕರ್ತ ಎಸ್.ಎಂ.ಮಾಳಿ ಮಾತನಾಡುತ್ತ. ಅಮಲು ಸೇವನೆ ಒಂದು ರೀತಿಯಲ್ಲಿ ಫ್ಯಾಷನ್ ಎಂಬುದಾಗಿ ತಿಳಿದ ಯುವಕರು ಮಾದಕ ವಸ್ತುಗಳತ್ತ ಆಕರ್ಷಿತರಾಗಿ ನಿರಂತರ ಉಪಯೋಗಕ್ಕೆ ತೊಡಗುತ್ತಾರೆ. ತಿಳುವಳಿಕಾ ತರಗತಿ ಆಯೋಜನೆಯಿಂದ ಜಾಗೃತಿ ಮೂಡಿಸಲು ಸಾಧ್ಯ. ಜೀವನದ ಗುರಿ ಹಾಗೂ ಹಾದಿ ತಪ್ಪಿಸುವ ಮಾದಕ ವ್ಯಸನ ಹಾಗೂ ವ್ಯಸನಿಗಳಿಂದ ದೂರವಿದ್ದು ಉತ್ತಮ ಹವ್ಯಾಸಗಳನ್ನು ಬೆಳೆಸಿ ಉತ್ತಮ ಭವಿಷ್ಯ ರೂಪಿಸುವಂತೆ ಕರೆ ನೀಡಿದರು.
ಆರ್.ಎಂ.ಚೋಪಡೆ ಮಾತನಾಡಿದರು.
ಈ ವೇಳೆಯಲ್ಲಿ ಶಿಕ್ಷಕರುಗಳಾದ ಆರ್.ಎಚ್.ನದಾಫ್, ಎಂ.ಸಿ.ಮಳಾಬಗಿ, ರಮೇಶ ತಳಕೇರಿ, ಎಂ.ಎನ್.ಹೋಕಳೆ, ಎ.ಎ.ಹಾವಿನಾಳ, ಆರ್.ಬಿ.ಕೋಳಿಯವರು ಸೇರಿದಂತೆ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
Subscribe to Updates
Get the latest creative news from FooBar about art, design and business.
Related Posts
Add A Comment

