Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 12, 2026

ಬಿ.ಎಲ್.ಡಿ.ಇ ಸಂಸ್ಥೆಯಿಂದ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ನೆರವು

ವಾರ್ಡನ್ ಕಿರುಕುಳಕ್ಕೆ ಬೇಸತ್ತು ಹೆಡ್ ಕುಕ್ ಆತ್ಮಹತ್ಯೆ!

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಅಣೆಕಟ್ಟುಗಳ ಸ್ಥಿತಿಗತಿ ಪರಿಶೀಲನೆಗೆ ತಜ್ಞರ ಸಮಿತಿ ರಚನೆ
(ರಾಜ್ಯ ) ಜಿಲ್ಲೆ

ಅಣೆಕಟ್ಟುಗಳ ಸ್ಥಿತಿಗತಿ ಪರಿಶೀಲನೆಗೆ ತಜ್ಞರ ಸಮಿತಿ ರಚನೆ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ತುಂಗಭದ್ರಾ ಅಣೆಕಟ್ಟಿನ ಕ್ರೆಸ್ಟ್ ಗೇಟ್ ಪುನಃಸ್ಥಾಪಿಸಲು ಪ್ರಯತ್ನ | ಆತಂಕ ಬೇಡ | ಡಿಸಿಎಂ ಡಿ.ಕೆ.ಶಿವಕುಮಾರ್ ಸ್ಪಷ್ಟನೆ

ಬೆಂಗಳೂರು: ತುಂಗಭದ್ರಾ ಜಲಾಶಯದ ಕ್ರೆಸ್ಟ್ ಗೇಟ್‌ಗಳ ಪೈಕಿ ಒಂದು ಕೊಚ್ಚಿಹೋಗಿರುವ ಹಿನ್ನೆಲೆಯಲ್ಲಿ, ರಾಜ್ಯ ಸರ್ಕಾರವು ರಾಜ್ಯದಲ್ಲಿನ ಎಲ್ಲಾ ಅಣೆಕಟ್ಟುಗಳ ಸ್ಥಿತಿಗತಿಯನ್ನು ಪರಿಶೀಲಿಸಲು ತಜ್ಞರ ಸಮಿತಿಯನ್ನು ರಚಿಸಲಿದೆ ಎಂದು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಸೋಮವಾರ ಹೇಳಿದ್ದಾರೆ.
ತುಂಗಭದ್ರಾ ಅಣೆಕಟ್ಟಿನ ಕ್ರೆಸ್ಟ್ ಗೇಟ್ ನ್ನು ಪುನಃಸ್ಥಾಪಿಸಲು ಪ್ರಯತ್ನಗಳು ನಡೆಯುತ್ತಿವೆ. ಈ ಬಗ್ಗೆ ಯಾರೂ ಆತಂಕಪಡುವ ಅಗತ್ಯವಿಲ್ಲ ಎಂದು ಜಲಸಂಪನ್ಮೂಲ ಸಚಿವರು ಕೂಡ ಆಗಿರುವ ಡಿ ಕೆ ಶಿವಕುಮಾರ್ ಹೇಳಿದರು.
ಕೊಪ್ಪಳ ಜಿಲ್ಲಾ ಕೇಂದ್ರ ಪಟ್ಟಣದ ಸಮೀಪವಿರುವ ತುಂಗಭದ್ರಾ ಜಲಾಶಯದ ಕ್ರೆಸ್ಟ್ ಗೇಟ್‌ಗಳಲ್ಲಿ ಒಂದು (19 ನೇ ಗೇಟ್) ಮೊನ್ನೆ ಶುಕ್ರವಾರ ಮಧ್ಯರಾತ್ರಿ ಅದರ ಸರಪಳಿ ಸಂಪರ್ಕ ಕಡಿತಗೊಂಡ ನಂತರ ಕೊಚ್ಚಿಕೊಂಡು ಹೋಗಿದ್ದು, ಭಾರಿ ಪ್ರಮಾಣದಲ್ಲಿ ನೀರು ಬರುತ್ತಿದ್ದರಿಂದ ಸುತ್ತಲಿನ ತಗ್ಗು ಪ್ರದೇಶಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ.
ಬೆಂಗಳೂರಿನಲ್ಲಿ ಸೋಮವಾರ ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ 70 ವರ್ಷಗಳಲ್ಲಿ ಮೊದಲ ಬಾರಿಗೆ ಇಂತಹ ಘಟನೆ ಸಂಭವಿಸಿದೆ, ಆದರೆ ರೈತರು ಸೇರಿದಂತೆ ಯಾರೂ ಆತಂಕ ಪಡುವ ಅಗತ್ಯವಿಲ್ಲ ಎಂದು ಹೇಳಿದರು. ಒಂದೆರಡು ದಿನಗಳಲ್ಲಿ ತಜ್ಞರ ಸಮಿತಿ ರಚಿಸಿ ಎಲ್ಲ ಅಣೆಕಟ್ಟುಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ವರದಿ ತರಿಸಿಕೊಳ್ಳಲಾಗುವುದು ಎಂದರು.
ಅಣೆಕಟ್ಟಿನ ರಚನೆಗೆ ಹಾನಿಯಾಗುವ ಸಾಧ್ಯತೆಯಿರುವುದರಿಂದ, ಎಲ್ಲಾ ಗೇಟ್‌ಗಳನ್ನು ತೆರೆಯಲಾಗಿದ್ದು, ಅಲ್ಲಿಂದ ನೆರೆಯ ಆಂಧ್ರಪ್ರದೇಶ ಮತ್ತು ತೆಲಂಗಾಣಕ್ಕೆ 38,000 ಕ್ಯೂಸೆಕ್ ನೀರು ಬಿಡಲಾಗುತ್ತಿದ್ದು, ಒಳಹರಿವು 28,000 ಕ್ಯೂಸೆಕ್ ಇದೆ. 38,000 ಕ್ಯೂಸೆಕ್ ನೀರು ಬಿಡಲಾಗುತ್ತಿದ್ದು, 35,000 ಕ್ಯೂಸೆಕ್ ನೀರು 19ನೇ ಗೇಟ್‌ನಿಂದಲೇ ಹರಿಯುತ್ತಿದೆ ಎಂದರು.
ಇತರ ಅಣೆಕಟ್ಟುಗಳಲ್ಲಿ ಡಬಲ್ ಚೈನ್ ಲಿಂಕ್‌ಗಳಿದ್ದವು, ಆದರೆ ತುಂಗಭದ್ರಾ ಅಣೆಕಟ್ಟಿನ ಒಂದು ಚೈನ್ ಲಿಂಕ್ ಕಡಿತಗೊಂಡಿದೆ. ನೀರಿನ ಒತ್ತಡ ಹೆಚ್ಚಾಗಿದೆ. ಸುಮಾರು 55-60 ಟಿಎಂಸಿ ಅಡಿ ನೀರು ಇದೆ. ನಾವು ಅದಕ್ಕೆ ಕ್ರಮಗಳನ್ನು ತೆಗೆದುಕೊಳ್ಳುತ್ತಿದ್ದೇವೆ ಎಂದರು.
ಕ್ರೆಸ್ಟ್ ಗೇಟ್‌ಗಾಗಿ ಬಲವಾದ ಕಬ್ಬಿಣ ಹಾಕಲು ಜೆಎಸ್‌ಡಬ್ಲ್ಯೂ ಜೊತೆ ಮಾತನಾಡಿದ್ದೇನೆ. ಗೇಟ್ ಮೊದಲ ಬಾರಿಗೆ ಮಾಡಿದವರಿಗೆ ವಿನ್ಯಾಸ ಕಳುಹಿಸಿದ್ದೇವೆ. ಕೆಲಸ ನಡೆಯುತ್ತಿದೆ ಮತ್ತು ನಾಲ್ಕೈದು ದಿನಗಳಲ್ಲಿ ಸಮಸ್ಯೆ ಬಗೆಹರಿಸಲು ಪ್ರಯತ್ನಿಸುತ್ತೇವೆ ಎಂದರು.
ಕೆಆರ್‌ಎಸ್‌ ಅಣೆಕಟ್ಟೆಗೂ ಸಮಸ್ಯೆ ಎದುರಾಗಿದೆ ಎಂಬ ಜೆಡಿಎಸ್‌ ಮುಖಂಡ ಹಾಗೂ ಕೇಂದ್ರ ಸಚಿವ ಎಚ್‌ಡಿ ಕುಮಾರಸ್ವಾಮಿ ಅವರ ಹೇಳಿಕೆಯನ್ನು ತಳ್ಳಿಹಾಕಿದ ಶಿವಕುಮಾರ್‌, ಕುಮಾರಸ್ವಾಮಿಗೆ ಏನು ಗೊತ್ತು, ಅವರಿಗೆ ರಾಜಕೀಯ ಮಾಡುವುದು ಮಾತ್ರ ಗೊತ್ತು ಎಂದು ಟೀಕಿಸಿದರು.

ಕಾವೇರಿ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಕೆಆರ್ ಎಸ್ ಅಣೆಕಟ್ಟಿನ ವಿಚಾರದಲ್ಲಿ ತುಂಗಭದ್ರಾ ಅಣೆಕಟ್ಟಿಗೆ ನೀಡಲಾದ ಆದ್ಯತೆಯನ್ನು ಇತರರಿಗೆ ನೀಡಿಲ್ಲ ಎಂಬ ಆರೋಪದ ಕುರಿತು ಶಿವಕುಮಾರ್, ರಾಜಕೀಯ ಅಥವಾ ಆರೋಪ ಮಾಡುವವರು ಅದನ್ನು ಮಾಡಲಿ. ಅಣೆಕಟ್ಟು ಕರ್ನಾಟಕದಿಂದ ನಿಯಂತ್ರಿಸಲ್ಪಡುವುದಿಲ್ಲ, ಅದಕ್ಕೆ ಪ್ರತ್ಯೇಕ ಮಂಡಳಿ ಇದೆ, ಅದಕ್ಕೆ ನಾವು ಸದಸ್ಯರು. ಅಣೆಕಟ್ಟು ನಮ್ಮೊಂದಿಗಿದೆ, ಆದರೆ ಕೀಲಿಗಳು ಅವರ ಬಳಿ ಇವೆ, ಅಣೆಕಟ್ಟು ನಮ್ಮದಾಗಿರುವುದರಿಂದ ನಮಗೆ ಹೆಚ್ಚಿನ ಜವಾಬ್ದಾರಿ ಇದೆ ಎಂದು ಡಿ.ಕೆ.ಶಿವಕುಮಾರ ನುಡಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 12, 2026

ಬಿ.ಎಲ್.ಡಿ.ಇ ಸಂಸ್ಥೆಯಿಂದ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ನೆರವು

ವಾರ್ಡನ್ ಕಿರುಕುಳಕ್ಕೆ ಬೇಸತ್ತು ಹೆಡ್ ಕುಕ್ ಆತ್ಮಹತ್ಯೆ!

ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚುನಾವಣೆಯಲ್ಲಿ ಗೊಂದಲ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 12, 2026
    In ದಿನಪತ್ರಿಕೆ
  • ಬಿ.ಎಲ್.ಡಿ.ಇ ಸಂಸ್ಥೆಯಿಂದ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ನೆರವು
    In (ರಾಜ್ಯ ) ಜಿಲ್ಲೆ
  • ವಾರ್ಡನ್ ಕಿರುಕುಳಕ್ಕೆ ಬೇಸತ್ತು ಹೆಡ್ ಕುಕ್ ಆತ್ಮಹತ್ಯೆ!
    In (ರಾಜ್ಯ ) ಜಿಲ್ಲೆ
  • ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚುನಾವಣೆಯಲ್ಲಿ ಗೊಂದಲ
    In (ರಾಜ್ಯ ) ಜಿಲ್ಲೆ
  • ಪತ್ರಕರ್ತರು ವಸ್ತುನಿಷ್ಠವಾಗಿ, ಶೋಧನೆ ಮಾಡಿ ಬರೆಯಬೇಕು
    In (ರಾಜ್ಯ ) ಜಿಲ್ಲೆ
  • ಅಧ್ಯಕ್ಷರಾಗಿ ಮಹೇಶ್, ಉಪಾಧ್ಯಕ್ಷರಾಗಿ ಜಯ ಅವಿರೋಧ ಆಯ್ಕೆ
    In (ರಾಜ್ಯ ) ಜಿಲ್ಲೆ
  • ಸಿ.ವಿ.ರಾಮನ್ ಪ.ಪೂ ಕಾಲೇಜ್ ಉತ್ತಮ ಸಾಧನೆ
    In (ರಾಜ್ಯ ) ಜಿಲ್ಲೆ
  • ಗುರು ಸಂಗನಬಸವ ಸ್ವಾಮೀಜಿ ಅಡ್ಡಪಲ್ಲಕ್ಕಿ ಉತ್ಸವ & ಅಗ್ನಿ ಪ್ರವೇಶ
    In (ರಾಜ್ಯ ) ಜಿಲ್ಲೆ
  • ಬೊಗಸೆಯಲ್ಲಿ ಅರಳುವ ನಿನ್ನಂದದ ಮುಖಕೆ
    In ವಿಶೇಷ ಲೇಖನ
  • ಕಲಕೇರಿ ಬಸವೇಶ್ವರ ಪ.ಪೂ ಕಾಲೇಜು ಅತ್ಯುತ್ತಮ ಸಾಧನೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.