Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ರಾಜ್ಯಮಟ್ಟದ ಜೀವನಾಡಿ ಕನ್ನಡ ಸಾಹಿತ್ಯ ಸ್ಪರ್ಧೆ-2026

ಬಿ.ವಿ.ಹಿರೇಮಠ ಗೆ ‘ಸಿಂದಗಿ ಸಿರಿ’ ಆದರ್ಶ ಶಿಕ್ಷಕ ಪ್ರಶಸ್ತಿ

ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 22, 2026

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ರಾಷ್ಟ್ರಧ್ವಜದ ಗೌರವ ಕಾಪಾಡುವುದು ಅಗತ್ಯ-ಡೋಣೂರ
(ರಾಜ್ಯ ) ಜಿಲ್ಲೆ

ರಾಷ್ಟ್ರಧ್ವಜದ ಗೌರವ ಕಾಪಾಡುವುದು ಅಗತ್ಯ-ಡೋಣೂರ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ತಾಳಿಕೋಟೆ: ರಾಷ್ಟ್ರಧ್ವಜ ನೀತಿಸಂಹಿತೆ, ನಿಯಮಗಳ ಬಗ್ಗೆ ಪ್ರತಿಯೊಬ್ಬರಲ್ಲೂ ಅರಿವಿರಬೇಕು. ರಾಷ್ಟ್ರೀಯ ಕಾಯ೯ಕ್ರಮಗಳಲ್ಲಿ ರಾಷ್ಟ್ರಧ್ವಜಾರೋಹಣ ಸಮಯದಲ್ಲಿ ಸಾಕಷ್ಟು ತಪ್ಪುಗಳು ನಡೆಯುತ್ತವೆ, ಆ ನಿಟ್ಟಿನಲ್ಲಿ ಎಲ್ಲರೂ ಜಾಗೃತರಾಗಬೇಕು. ಎಲ್ಲರೂ ರಾಷ್ಟ್ರಧ್ವಜದ ಗೌರವವನ್ನು ಕಾಪಾಡಬೇಕು ಎಂದು ಭಾರತ ಸೇವಾದಳದ ವಲಯ ಸಂಘಟಕ ನಾಗೇಶ ಡೋಣೂರ ಹೇಳಿದರು.
ಭಾರತ ಸೇವಾದಳ ಜಿಲ್ಲಾ ಸಮಿತಿ ವಿಜಯಪುರ, ತಾಲೂಕ ಸಮಿತಿ ಮುದ್ದೇಬಿಹಾಳ, ಶಾಲಾ ಶಿಕ್ಷಣ ಇಲಾಖೆ ವಿಜಯಪುರ ಹಾಗೂ ಶ್ರೀ ಖಾಸ್ಗತೇಶ್ವರ ಶಿಕ್ಷಣ ಮಹಾ ವಿದ್ಯಾಲಯ ತಾಳಿಕೋಟೆ ಇವರ ಸಹಯೋಗದಲ್ಲಿ ಎನ್. ಎಸ್ ಎಸ್ ಘಟಕದ ಅಡಿಯಲ್ಲಿ ಆಯೋಜಿಸಿರುವ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಶ್ರೀ ಖಾಸ್ಗತೇಶ್ವರ ಶಿಕ್ಷಣ ಮಹಾವಿದ್ಯಾಲಯದಲ್ಲಿ ಆಯೋಜಿಸಲಾದ ರಾಷ್ಟ್ರೀಯ ಭಾವೈಕ್ಯತೆ, ರಾಷ್ಟ್ರಧ್ವಜ, ರಾಷ್ಟ್ರಗೀತೆ ಕುರಿತಾದ ಮಾಹಿತಿ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.
ಧ್ವಜ ನೀತಿಸಂಹಿತೆ ಪ್ರಕಾರ ಧ್ವಜಾರೋಹಣವನ್ನು ಎಷ್ಟು ಶಿಸ್ತು ಬದ್ಧವಾಗಿ ಮಾಡುತ್ತೇವೆ ಅಷ್ಟೇ ಶಿಸ್ತು ಬದ್ದವಾಗಿ ಧ್ವಜ ಅವರೋಹಣವನ್ನು ಮಾಡಬೇಕು, ಹಾಗೇ ಧ್ವಜಾರೋಹಣದ ಸಮಯ ಬೆಳಿಗ್ಗೆ 7-05 ನಿಮಿಷದಿಂದ 9-00 ಗಂಟೆವರೆಗೂ ಮಾಡಬಹುದು, ಹರಿದುಹೋದ, ಮಾಸಿಹೋದ ಧ್ವಜಗಳನ್ನು ಬಳಸಬಾರದು ಎಂದು ತಿಳಿಸುತ್ತಾ ಎಲ್ಲರೂ ರಾಷ್ಟ್ರದ, ರಾಷ್ಟ್ರಧ್ವಜದ ಗೌರವವನ್ನು ಕಾಪಾಡಬೇಕು ಎಂದು ಕರೆ ನೀಡಿದರು. ಹಾಗೇ ಧ್ವಜ ಕಟ್ಟುವ, ಮಡಚುವ,ಹಾರಿಸುವ ವಿಧಾನಗಳನ್ನು ಪ್ರಾತ್ಯಕ್ಷೀಕವಾಗಿ ತರಬೇತಿ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಶ್ರೀ ಖಾಸ್ಗತೇಶ್ವರ ಶಿಕ್ಷಣ ಮಹಾವಿದ್ಯಾಲಯದ ಪ್ರಾಚಾಯ೯ರಾದ ಡಾ. ಆರ್ ಎಮ್ ಬಂಟನೂರ ಅವರು ಮಾತನಾಡಿ, ರಾಷ್ಟ್ರಧ್ವಜಕ್ಕೆ ಸಲ್ಲಿಸಬೇಕಾದ ಗೌರವವನ್ನು ಪ್ರತಿಯೊಬ್ಬ ಭಾರತೀಯ ಪ್ರಜೆ ನೀಡಲೇಬೇಕು. ಅದಕ್ಕಾಗಿ ಭಾರತ ಸೇವಾದಳದಿಂದ ಹಮ್ಮಿಕೊಳ್ಳಲಾಗುವ ಕಾರ್ಯಕ್ರಮಗಳ ಸದುಪಯೋಗವನ್ನು ಪ್ರತಿಯೊಬ್ಬರೂ ಪಡೆದುಕೊಳ್ಳಬೇಕು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಮಹಾವಿದ್ಯಾಲಯದ ಉಪನ್ಯಾಸಕರಾದ ಸುರೇಶ ಬಡಿಗೇರ,ಮೌನೇಶ ಕೆಲ್ಲೂರ ಸಿಬ್ಬಂದಿ ವಗ೯ ಹಾಗೂ ಪ್ರಶಿಕ್ಷಣಾರ್ಥಿಗಳು ಉಪಸ್ಥಿತರಿದ್ದರು.
ಉಪನ್ಯಾಸಕರಾದ ಎ,ಎ,ಗಂಗನಗೌಡರ ನಿರೂಪಿಸಿದರು. ಪ್ರೊ ಯು,ಎನ್,ಮನಗೊಂಡ ಸ್ವಾಗತಿಸಿದರು.ಉಪನ್ಯಾಸಕರಾದ ವಾಯ್ ಎಚ್ ಅಂಗಡಗೇರಿ ವಂದಿಸಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ರಾಜ್ಯಮಟ್ಟದ ಜೀವನಾಡಿ ಕನ್ನಡ ಸಾಹಿತ್ಯ ಸ್ಪರ್ಧೆ-2026

ಬಿ.ವಿ.ಹಿರೇಮಠ ಗೆ ‘ಸಿಂದಗಿ ಸಿರಿ’ ಆದರ್ಶ ಶಿಕ್ಷಕ ಪ್ರಶಸ್ತಿ

ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 22, 2026

ಡಾ.ಸುರೇಖಾ ರಾಠೋಡ ಗೆ “ಸಾಹಿತ್ಯ ರತ್ನ” ಪ್ರಶಸ್ತಿ ಪ್ರದಾನ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ರಾಜ್ಯಮಟ್ಟದ ಜೀವನಾಡಿ ಕನ್ನಡ ಸಾಹಿತ್ಯ ಸ್ಪರ್ಧೆ-2026
    In (ರಾಜ್ಯ ) ಜಿಲ್ಲೆ
  • ಬಿ.ವಿ.ಹಿರೇಮಠ ಗೆ ‘ಸಿಂದಗಿ ಸಿರಿ’ ಆದರ್ಶ ಶಿಕ್ಷಕ ಪ್ರಶಸ್ತಿ
    In (ರಾಜ್ಯ ) ಜಿಲ್ಲೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 22, 2026
    In ದಿನಪತ್ರಿಕೆ
  • ಡಾ.ಸುರೇಖಾ ರಾಠೋಡ ಗೆ “ಸಾಹಿತ್ಯ ರತ್ನ” ಪ್ರಶಸ್ತಿ ಪ್ರದಾನ
    In (ರಾಜ್ಯ ) ಜಿಲ್ಲೆ
  • ಯುಕೆಪಿ ಎಂ.ಡಿ. ಕಚೇರಿಯ ಕಂಪ್ಯೂಟರ್ ಜಪ್ತಿ!
    In (ರಾಜ್ಯ ) ಜಿಲ್ಲೆ
  • ದೋಷರಹಿತ ಮತದಾರರ ಪಟ್ಟಿಗೆ ರಾಜಕೀಯಪಕ್ಷಗಳ ಸಹಕಾರ ಅಗತ್ಯ
    In (ರಾಜ್ಯ ) ಜಿಲ್ಲೆ
  • ಆಲಮಟ್ಟಿ ಉದ್ಯಾನಗಳಿಗೆ ಶಾಲಾ ಮಕ್ಕಳಿಗೆ ಉಚಿತ ಪ್ರವೇಶಕ್ಕೆ ಮನವಿ
    In (ರಾಜ್ಯ ) ಜಿಲ್ಲೆ
  • ಆಲಮಟ್ಟಿ ಎತ್ತರ ಹೆಚ್ಚಳ ೩ ವರ್ಷದಲ್ಲಿ ಪೂರ್ಣಗೊಳಿಸಲು ಬದ್ಧ
    In (ರಾಜ್ಯ ) ಜಿಲ್ಲೆ
  • ೧ ರಿಂದ ೫ ವರೆಗೆ ಶಿಕ್ಷಣ ಕಡ್ಡಾಯವಾಗಿ ಮಾತೃಭಾಷೆಯಲ್ಲಿರಲಿ
    In (ರಾಜ್ಯ ) ಜಿಲ್ಲೆ
  • 21ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ ಹ.ಮ.ಪೂಜಾರ
    In ವಿಶೇಷ ಲೇಖನ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.