ವಿಜಯಪುರ: ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಹಮ್ಮಿಕೊಳ್ಳಲಾದ ತಿರಂಗಾ ಅಭಿಯಾನದ ಪ್ರಯುಕ್ತ ಬಿಜೆಪಿ ನಗರ ಮಂಡಲ ವತಿಯಿಂದ ಮಂಗಳವಾರ ನಗರದಲ್ಲಿರುವ ಮಹಾನ್ ನಾಯಕರ ಪುತ್ಥಳಿ ಹಾಗೂ ವೃತ್ತಗಳನ್ನು ಸ್ವಚ್ಛಗೊಳಿಸಲಾಯಿತು.
ಬೆಳಿಗ್ಗೆ ಮಹಾನ್ ನಾಯಕರಾದ ಸಂವಿಧಾನ ಶಿಲ್ಪಿ ಡಾ.ಬಿ ಆರ್ ಅಂಬೇಡ್ಕರ್, ವಿಶ್ವಗುರು ಬಸವಣ್ಣ, ಲಾಲ್ ಬಹಾದ್ದೂರ ಶಾಸ್ತ್ರಿ, ನೇತಾಜಿ ಸುಭಾಸ ಚಂದ್ರ ಬೋಸ್, ವೀರ ಸಾವರ್ಕರ್, ಸಂತ ಕನಕದಾಸ, ಸಂತ ಸೇವಾಲಾಲ್, ಛತ್ರಪತಿ ಶಿವಾಜಿ ಮಹಾರಾಜ್, ಮಹಾತ್ಮ ಗಾಂಧೀಜಿ, ಅಹಿಲ್ಯಾಬಾಯಿ ಹೋಳ್ಕರ್, ಅಟಲ್ ಬಿಹಾರಿ ವಾಜಪೇಯಿ, ಬಾಬು ಜಗಜೀವನ್ ರಾವ್ ವೃತ್ತಗಳಿಗೆ ತೆರಳಿದ ಬಿಜೆಪಿ ಪದಾಧಿಕಾರಿಗಳು, ಕಾರ್ಯಕರ್ತರು ಪುತ್ಥಳಿ ಮತ್ತು ವೃತ್ತವನ್ನು ಸ್ವಚ್ಛಗೊಳಿಸಿ, ಗಮನಸೆಳೆದರು.
ಈ ಸಂದರ್ಭದಲ್ಲಿ ಮಾತನಾಡಿದ ಬಿಜೆಪಿ ನಗರ ಮಂಡಲ ಅಧ್ಯಕ್ಷ ಶಂಕರ ಹೂಗಾರ, ಸ್ವಾತಂತ್ರ್ಯೋತ್ಸವ ಅಂಗವಾಗಿ ಹಮ್ಮಿಕೊಂಡಿರುವ ತಿರಂಗಾ ಅಭಿಯಾನದ ಪ್ರಯುಕ್ತ ಮಹಾನ್ ನಾಯಕರ ಸ್ಮರಣೆ ಜೊತೆಗೆ ವೃತ್ತಗಳಲ್ಲಿ ಸ್ವಚ್ಚತಾ ಅಭಿಯಾನ ಹಮ್ಮಿಕೊಂಡು ಗೌರವ ಸಲ್ಲಿಸುವ ಪ್ರಧಾನಿ ನರೇಂದ್ರ ಮೋದಿಯವರ ಕರೆಗೆ ಸ್ಪಂದಿಸಿ, ಸ್ವಚ್ಛತಾ ಅಭಿಯಾನ ನಡೆಸಲಾಗುತ್ತಿದೆ ಎಂದರು.
ಈ ಸ್ವಚ್ಛತಾ ಅಭಿಯಾನದಲ್ಲಿ ಜಿಲ್ಲಾ ರೈತ ಮೋರ್ಚಾ ಉಪಾಧ್ಯಕ್ಷ ಪಾಂಡು ಸಾಹುಕಾರ ದೊಡಮನಿ, ಮಹಾನಗರ ಪಾಲಿಕೆ ಸದಸ್ಯ ಮಲ್ಲಿಕಾರ್ಜುನ ಗಡಗಿ, ನಗರ ಮಂಡಲದ ಪ್ರಧಾನ ಕಾರ್ಯದರ್ಶಿಗಳಾದ ಪಾಪುಸಿಂಗ್ ರಜಪೂತ, ಪ್ರವೀಣ ಕೂಡಗಿ, ರೈತ ಮೋರ್ಚಾ ಅಧ್ಯಕ್ಷ ರಾಜು ಬಿರಾದಾರ, ಯುವ ಮೋರ್ಚಾ ಅಧ್ಯಕ್ಷ ಪ್ರವೀಣ ವಂದಾಲಮಠ, ಓಬಿಸಿ ಮೋರ್ಚಾ ಅಧ್ಯಕ್ಷ ಅನಂತ ಚೌದರಿ, ಎಸ್.ಸಿ ಮೋರ್ಚಾ ಅಧ್ಯಕ್ಷ ಪ್ರಕಾಶ ಚವ್ಹಾಣ,ಎಸ್ ಟಿ ಮೋರ್ಚಾ ಅಧ್ಯಕ್ಷ ಪ್ರವೀಣ ನಾಟೀಕಾರ, ಮಹಿಳಾ ಮೋರ್ಚಾ ಅಧ್ಯಕ್ಷೆ ಲಕ್ಷ್ಮಿ ಕನ್ನೊಳ್ಳಿ, ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಸಂತೋಷ ಕೌಟೇಕರ ಸೇರಿದಂತೆ ಎಲ್ಲಾ ಮೋರ್ಚಾಗಳ ಪದಾಧಿಕಾರಿಗಳು ಇದ್ದರು.
Subscribe to Updates
Get the latest creative news from FooBar about art, design and business.
Related Posts
Add A Comment

