ಆಲಮಟ್ಟಿ: ಸುಕ್ಷೇತ್ರ ಯಲಗೂರು ಹನುಮಾನ ದೇವಸ್ಥಾನಕ್ಕೆ ಮಂಗಳವಾರ ಬೆಳಿಗ್ಗೆ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್. ಪಾಟೀಲ ದಂಪತಿ ಸಮೇತ ಭೇಟಿ ನೀಡಿ ದೇವರ ಆಶೀರ್ವಾದ ಪಡೆದರು.
ಲೋಕಾಯುಕ್ತರನ್ನು ಯಲಗೂರೇಶ್ವರ ದೇವಸ್ಥಾನ ಟ್ರಸ್ಟ್ ಸಮಿತಿ ಹಾಗೂ ಯಲಗೂರೇಶ್ವರ ಅನ್ನದಾಸೋಹ ಟ್ರಸ್ಟ್ ವತಿಯಿಂದ ಸನ್ಮಾನಿಸಲಾಯಿತು.
ದೇವಸ್ಥಾನದ ಪ್ರಾಂಗಣದಲ್ಲಿ ಬದಲಾವಣೆಯಾಗಿದ್ದು, ಸಾಕಷ್ಟು ಅಭಿವೃದ್ಧಿ ಕಾಮಗಾರಿ ನಡೆದಿದ್ದನ್ನು ನೋಡಿ ಸಂತಸ ವ್ಯಕ್ತಪಡಿಸಿದರು. ದೇವಸ್ಥಾನದಲ್ಲಿ ಇನ್ನಷ್ಟು ಅಭಿವೃದ್ಧಿ ಕಾರ್ಯ ಕೈಗೊಳ್ಳಲು ಟ್ರಸ್ಟ್ ಸಮಿತಿಗೆ ಲೋಕಾಯುಕ್ತರು ಸೂಚಿಸಿದರು.
ಅನ್ನದಾಸೋಹ ಟ್ರಸ್ಟ್ ಸಮಿತಿಯ ಅಧ್ಯಕ್ಷ ಶ್ಯಾಮ ಪಾತರದ ನೇತೃತ್ವದಲ್ಲಿ ಹಲವರು ಸನ್ಮಾನಿಸಿದರು.
ಈ ಸಂದರ್ಭದಲ್ಲಿ ಭೀಮಣ್ಣ ಪೂಜಾರಿ, ಯಲಗೂರದಪ್ಪ ಪೂಜಾರಿ, ಗುಂಡಪ್ಪ ತಳವಾರ, ದೇವಸ್ಥಾನ ಟ್ರಸ್ಟ್ ಸಮಿತಿಯ ಕಾರ್ಯದರ್ಶಿ ಸಂತೋಷ ಪೂಜಾರ, ಭೀಮಣ್ಣ ಅವಟಗೇರ, ಶ್ರೀಶೈಲ ಹೂಗಾರ, ಜಂಗಪ್ಪ ಬೇವೂರ, ನರಸಿಂಹಾಚಾರ್ಯ ಆಲೂರ, ಗೋಪಾಲ ಹಿಪ್ಪರಗಿ, ಬದರಿನಾರಾಯಾಣ ಚಿಮ್ಮಲಗಿ ಮತ್ತೀತರರು ಇದ್ದರು.
Subscribe to Updates
Get the latest creative news from FooBar about art, design and business.
Related Posts
Add A Comment

