ವಿಜಯಪುರ: ಜಿಲ್ಲಾಡಳಿತದ ವತಿಯಿಂದ ಇದೇ ಆಗಸ್ಟ್ ೧೫ ರಂದು ನಗರದ ಭಾರತರತ್ನ ಡಾ.ಬಿ.ಆರ್.ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಸ್ವಾತಂತ್ರೋತ್ಸವ ದಿನಾಚರಣೆ ಅಂಗವಾಗಿ ರಾಷ್ಟ್ರ ಧ್ವಜಾರೋಹಣ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಅಂದು ಬೆಳಿಗ್ಗೆ ೯ ಗಂಟೆಗೆ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ದಿ ಖಾತೆ ಹಾಗೂ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಎಂ.ಬಿ.ಪಾಟೀಲ ಅವರು ಧ್ವಜಾರೋಹಣ ನೆರವೇರಿಸಲಿದ್ದಾರೆ. ನಗರ ಶಾಸಕರಾದ ಬಸನಗೌಡ ಆರ್.ಪಾಟೀಲ ಯತ್ನಾಳ ಅಧ್ಯಕ್ಷತೆ ವಹಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಜವಳಿ, ಕಬ್ಬು ಅಭಿವೃದ್ದಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರಾದ ಶಿವಾನಂದ ಪಾಟೀಲ, ಕರ್ನಾಟಕ ಸರ್ಕಾರದ ನವದೆಹಲಿ ವಿಶೇಷ ಪ್ರತಿನಿಧಿ-೨ ಶಾಸಕರಾದ ಪ್ರಕಾಶ ಬಿ.ಹುಕ್ಕೇರಿ, ಕರ್ನಾಟಕ ಸೋಪ್ ಮತ್ತು ಡಿಟರ್ಜೆಂಟ್ ನಿಯಮಿತ ಅಧ್ಯಕ್ಷರಾದ ಶಾಸಕ ಅಪ್ಪಾಜಿ ಸಿ.ಎಸ್.ನಾಡಗೌಡ, ಸಂಸದರಾದ ರಮೇಶ ಜಿಗಜಿಣಗಿ, ಡಾ.ಸುಧಾ ಮೂರ್ತಿ, ಶಾಸಕರುಗಳಾದ ಯಶವಂತರಾಯಗೌಡ ಪಾಟೀಲ, ಹಣಮಂತ ನಿರಾಣಿ, ಪ್ರಕಾಶ ರಾಠೋಡ, ಸುನೀಲಗೌಡ ಪಾಟೀಲ, ಪಿ.ಎಚ್.ಪೂಜಾರ, ವಿಠ್ಠಲ ಧೋಂಡಿಬಾ ಕಟಕಧೋಂಡ, ಭೀಮನಗೌಡ (ರಾಜುಗೌಡ) ಬಸನಗೌಡ ಪಾಟೀಲ, ಅಶೋಕ ಮಲ್ಲಪ್ಪ ಮನಗೂಳಿ, ಕರ್ನಾಟಕ ಕೌಶಲ್ಯಾಭಿವೃದ್ದಿ ನಿಗಮದ ಅಧ್ಯಕ್ಷರಾದ ಶ್ರೀಮತಿ ಕಾಂತಾ ನಾಯ್ಕ, ಕರ್ನಾಟಕ ಬಾಲವಿಕಾಸ ಅಕಾಡೆಮಿ ಅಧ್ಯಕ್ಷರಾದ ಸಂಗಮೇಶ ಬಬಲೇಶ್ವರ, ಮಹಾನಗರ ಪಾಲಿಕೆ ಮಹಾಪೌರರಾದ ಶ್ರೀಮತಿ ಮಹೇಜಬಿನ್ ಅಬ್ದುಲರಜಾಕ ಹೊರ್ತಿ, ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಕನ್ನಾನ್ ಅಬ್ದುಲ್ ಹಮೀದ್ ಮುಶ್ರೀಫ್ ಸೇರಿದಂತೆ ವಿವಿಧ ಜನಪ್ರತಿನಿಧಿಗಳು ಭಾಗವಹಿಸಲಿದ್ದಾರೆ.
ಅಂದು ಬೆಳಿಗ್ಗೆ ಧ್ವಜಾರೋಹಣ, ಪೊಲೀಸ್ ವಾದ್ಯ ವೃಂದದವರಿಂದ ರಾಷ್ಟçಗೀತೆ, ನಾಡಗೀತೆ, ಸಚಿವರಿಂದ ಪಥಸಂಚಲನಾ ತಂಡಗಳ ವೀಕ್ಷಣೆ, ಪಥಸಂಚಲನಾ ತಂಡಗಳಿಂದ ಸಚಿವರಿಗೆ ಗೌರವ ವಂದನೆ, ಸ್ವಾತಂತ್ರೋತ್ಸವ ಸಂದೇಶ, ಸಾಂಸ್ಕೃತಿಕ ಹಾಗೂ ಸನ್ಮಾನ ಕಾರ್ಯಕ್ರಮಗಳು ನಡೆಯಲಿವೆ.
Subscribe to Updates
Get the latest creative news from FooBar about art, design and business.
Related Posts
Add A Comment
