Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 12, 2026

ಬಿ.ಎಲ್.ಡಿ.ಇ ಸಂಸ್ಥೆಯಿಂದ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ನೆರವು

ವಾರ್ಡನ್ ಕಿರುಕುಳಕ್ಕೆ ಬೇಸತ್ತು ಹೆಡ್ ಕುಕ್ ಆತ್ಮಹತ್ಯೆ!

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ರಾಜ್ಯ ಸರ್ಕಾರಕ್ಕೆ HMT ಭೂಮಿ ವಾಪಸ್ ನೀಡೊಲ್ಲ :ಎಚ್ಡಿಕೆ
(ರಾಜ್ಯ ) ಜಿಲ್ಲೆ

ರಾಜ್ಯ ಸರ್ಕಾರಕ್ಕೆ HMT ಭೂಮಿ ವಾಪಸ್ ನೀಡೊಲ್ಲ :ಎಚ್ಡಿಕೆ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರನ್ನು ತೀವ್ರ ತರಾಟೆಗೆ ತೆಗೆದುಕೊಂಡ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ

ಬೆಂಗಳೂರು: ಹಿಂದೂಸ್ತಾನ್ ಮೆಷಿನ್ ಟೂಲ್ಸ್‌ನಿಂದ 281 ಎಕರೆ ಭೂಮಿ ವಶಪಡಿಸಿಕೊಳ್ಳಲು ರಾಜ್ಯ ಅರಣ್ಯ ಇಲಾಖೆಗೆ ‘ಸ್ಪಷ್ಟ ಸೂಚನೆ’ ನೀಡಿರುವ ಆಡಳಿತಾತ್ಮಕ ಟಿಪ್ಪಣಿಗೆ ಸಂಬಂಧಿಸಿದಂತೆ ಕೇಂದ್ರ ಉಕ್ಕು ಮತ್ತು ಭಾರೀ ಕೈಗಾರಿಕೆ ಸಚಿವ ಎಚ್‌ಡಿ ಕುಮಾರಸ್ವಾಮಿ ಅವರು ಮಂಗಳವಾರ ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರನ್ನು ತೀವ್ರ ತರಾಟೆಗೆ ತೆಗೆದುಕೊಂಡರು.
ಬೆಂಗಳೂರಿನ ಎಚ್​ಎಂಟಿ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿದ ಕುಮಾರಸ್ವಾಮಿ, HMT ಭೂಮಿ ವಾಪಸ್ ನೀಡುವ ಪ್ರಶ್ನೆಯೇ ಇಲ್ಲ ಎಂದು ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.
ಒಂದು ಕಾಲದಲ್ಲಿ ಶೇ. 90 ರಷ್ಟು ಮಾರುಕಟ್ಟೆ ಷೇರು ಹೊಂದಿದ್ದ ಮತ್ತು ಗಡಿಯಾರ ಮಾರುಕಟ್ಟೆಯನ್ನು ಆಳುತ್ತಿದ್ದ ಎಚ್ ಎಂಟಿ ಈಗ ಮುಚ್ಚುವ ಹಂತಕ್ಕೆ ಬಂದಿದೆ. ಬೆಂಗಳೂರಿನ ಹೆಮ್ಮೆಯಾಗಿರುವ ಎಚ್ ಎಂಟಿಯನ್ನು ಪುನರುಜ್ಜೀವನಗೊಳಿಸಲು ಅರಣ್ಯ ಸಚಿವರು ತಮ್ಮ ಸಣ್ಣತನವನ್ನು ಬಿಟ್ಟು ಸಹಕಾರ ನೀಡಬೇಕು ಎಂದು ಕುಮಾರಸ್ವಾಮಿ ಹೇಳಿದರು.
ಒಂದು ಕಾಲದಲ್ಲಿ ಶೇಕಡ 90ರಷ್ಟು ಮಾರುಕಟ್ಟೆಯನ್ನು ವಶಪಡಿಸಿಕೊಂಡಿದ್ದ ಈ ಪಿಎಸ್‌ಯುನ ದಯನೀಯ ಸ್ಥಿತಿ ನಿಮ್ಮ ಕಣ್ಣಲ್ಲಿ ನೀರು ತರಿಸುವುದಿಲ್ಲವೇ? ನಿಮಗೆ ಕರ್ನಾಟಕದ ಬಗ್ಗೆ ಅಭಿಮಾನವಿಲ್ಲವೇ? ಇಂತಹ ಕಂಪನಿಯನ್ನು ಮುಚ್ಚಲು ನಾವು ಅಧಿಕಾರಕ್ಕೆ ಬರಬೇಕೇ? ಖಂಡ್ರೆ, ಈ ಸಣ್ಣತನವನ್ನು ಬಿಟ್ಟುಬಿಡಿ ಎಂದು ವಾಗ್ದಾಳಿ ನಡೆಸಿದರು.
ಖಂಡ್ರೆ ಅವರ ಆಗಸ್ಟ್ 9ರ ಆಡಳಿತಾತ್ಮಕ ಟಿಪ್ಪಣಿಯನ್ನು ಉಲ್ಲೇಖಿಸಿದ ಕೇಂದ್ರ ಸಚಿವರು, ಜೂನ್ 11, 1896 ರ ಗೆಜೆಟ್ ಅಧಿಸೂಚನೆಯನ್ನು ಉಲ್ಲೇಖಿಸಿ ಬೆಂಗಳೂರು ನಗರದ ಪೀಣ್ಯ-ಜಾಲಹಳ್ಳಿಯ ಸರ್ವೆ ನಂಬರ್ 1 ರಲ್ಲಿ 599 ಎಕರೆ ಅರಣ್ಯ ಭೂಮಿ ಎಂದು ತೋರಿಸಿದರು. ಈ ಭೂಮಿಯನ್ನು ಎಚ್‌ಎಂಟಿಗೆ ಉಡುಗೊರೆಯಾಗಿ ನೀಡಲಾಗಿದೆ ಎಂಬುದಕ್ಕೆ ಯಾವುದೇ ದಾಖಲೆಗಳಿಲ್ಲ ಎಂದು ಅವರು ಹೇಳಿದರು.

ಈ ಎಚ್​ಎಂಟಿಗೆ ಲ್ಯಾಂಡ್ ಯಾವ ರೀತಿ ಬಂತು? 1964ರಲ್ಲಿ ಎಚ್​ಎಂಟಿಯಿಂದ ಕಾರ್ಖಾನೆ ಆಗಬೇಕು ಅಂತ ಭೂಮಿ ನೀಡಲಾಗಿದೆ. ಅವತ್ತು ನೆಹರು ಅವರು ಬಂದು ಕಾರ್ಖಾನೆಗೆ ಭೇಟಿ ನೀಡಿದ್ದಾರೆ. ಲಾಲ್ ಬಹದ್ದೂರ್ ಶಾಸ್ತ್ರಿ, ಮೈಸೂರು ಅರಸು ಎಲ್ಲರೂ ಭೇಟಿ ನೀಡಿದ್ದಾರೆ. ಇದಕ್ಕೆ ಇತಿಹಾಸ ಇದೆ. ನೆಹರು ಅವರ ಕಾಲದಲ್ಲಿ ಎಚ್​ಎಂಟಿ‌ ಆರಂಭ ಆಯ್ತು. ನೆಹರು ಕಾಲದಲ್ಲಿ ವಾಚ್ ಮತ್ತು ಬೆಲ್ಟ್ ತಯಾರು ಮಾಡಲು ಕಾರ್ಖಾನೆ ಆರಂಭವಾಗಿದ್ದು. ಪ್ರತಿ ವರ್ಷ ಹೊಸ ಯೂನಿಟ್ ಆರಂಭ ಮಾಡುತ್ತಿದ್ದರು. ಎಚ್​ಎಂಟಿಯಲ್ಲಿ 1970 ರಲ್ಲಿ 270 ಕೋಟಿ ವಾರ್ಷಿಕ ಆದಾಯ ಇತ್ತು. ಬಂದ ಲಾಭದಿಂದ ದೇಶದ ಹಲವು ಕಡೆ ಕಂಪನಿ ಸ್ಥಾಪನೆ ಮಾಡಲಾಯ್ತು. ಹೈದರಾಬಾದ್, ಜಾರ್ಖಾಂಡ್ ಕಾರ್ಖಾನೆಗಳು ನಡೆಯುತ್ತಿದ್ದವು. ನಿನ್ನೆ ಸಚಿವರು ಟಿಪ್ಪಣಿ ಬರೆದಿದ್ದು ಯಾವ ಕಾರಣಕ್ಕೆ? ಸಚಿವರು ಸೂಚನೆ ಕೊಟ್ಟ ಕೂಡಲೇ ಎಚ್​ಎಂಟಿ ಜಾಗ ವಶ ಪಡಿಸಿಕೊಳ್ಳಲು ಆಗುತ್ತಾ? 2020 ಡಿನೋಟಿಪೈ ಮಾಡಿದ್ದು ಯಾರು? ನಾನು ಎಚ್​ಎಂಟಿ ಕಾರ್ಖಾನೆಗೆ ಭೇಟಿ ಕೊಟ್ಟು ಅದನ್ನು ಉಳಿಸಬೇಕು ಎಂದು ಕೆಲ ನಿರ್ಧಾರ ತೆಗೆದುಕೊಂಡು ನನ್ನ ರೀತಿಯಲ್ಲಿ ನಾನು ಶ್ರಮ ಹಾಕುತ್ತಿದ್ದೇನೆ. ರಾಜ್ಯ ಸರ್ಕಾರಕ್ಕೆ HMT ಭೂಮಿ ವಾಪಸ್ ನೀಡುವ ಪ್ರಶ್ನಿಯೇ ಇಲ್ಲ ಎಂದರು.
ಕುಮಾರಸ್ವಾಮಿ ಎಚ್‌ಎಂಟಿ ಕಾರ್ಖಾನೆಗೆ ಭೇಟಿ ಕೊಟ್ಟ ಅನ್ನೋ ಕಾರಣಕ್ಕೆ ಈ ರೀತಿ ಅಡ್ಡಗಾಲು ಹಾಕಲಾಗಿದೆ. ವಿಶ್ವೇಶ್ವರಯ್ಯ ಕನಸಿನ ಕಾರ್ಖಾನೆ ಉಳಿಸಬೇಕೆಂದು ನಾನು ಶ್ರಮ ಹಾಕುತ್ತಿದ್ದೇನೆ. ಎಚ್‌ಎಂಟಿಗೆ 599 ಎಕರೆ ಜಮೀನನ್ನ ಸರ್ಕಾರ ಪುಕ್ಕಟೆ ಕೊಟ್ಟಿಲ್ಲ. ನಾನು ಕರೆ ಮಾಡಿದ ತಕ್ಷಣ ಅಧಿಕಾರಿಗಳು ಎಲ್ಲಾ ದಾಖಲೆಗಳನ್ನ ತೆಗೆದಿಟ್ಟಿದ್ದಾರೆ. 1963 ಡಿಸೆಂಬರ್ 4 ರಂದು 4.40 ಲಕ್ಷ ಹಣ ಕಟ್ಟಲಾಗಿದೆ. ಮಂಜೂರಾದ ಜಮೀನಿಗೆ ದುಡ್ಡು ಕಟ್ಟಿದ್ದಾರೆ, ಪುಕ್ಕಟೆ ತೆಗೆದುಕೊಂಡಿಲ್ಲ. ನಾನು ಜಸ್ಟ್ ಎಂಟ್ರಿಯಾಗಿದ್ದಕ್ಕೆ 45 ರೂ ಇದ್ದ ಶೇರ್ ವ್ಯಾಲ್ಯೂ 92ಕ್ಕೆ ಏರಿಕೆ ಮಾಡಲಾಗಿದೆ. ಯಾರಿಗೆ ಕೊಡಲಿಕ್ಕೆ ತರಾತುರಿ ಆದೇಶ ಮಾಡಿದ್ದೀರಿ ಈಶ್ವರ್ ಖಂಡ್ರೆ? ಖಾಲಿ ಜಾಗ ತಕ್ಷಣ ವಶಪಡಿಸಿಕೊಳ್ಳಿ ಎಂದು ಅಧಿಕಾರಿಗಳಿ ಹೇಳಿದ್ದಾರೆ ಎಂದು ಖಂಡ್ರೆ ವಿರುದ್ಧ ಗುಡುಗಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 12, 2026

ಬಿ.ಎಲ್.ಡಿ.ಇ ಸಂಸ್ಥೆಯಿಂದ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ನೆರವು

ವಾರ್ಡನ್ ಕಿರುಕುಳಕ್ಕೆ ಬೇಸತ್ತು ಹೆಡ್ ಕುಕ್ ಆತ್ಮಹತ್ಯೆ!

ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚುನಾವಣೆಯಲ್ಲಿ ಗೊಂದಲ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 12, 2026
    In ದಿನಪತ್ರಿಕೆ
  • ಬಿ.ಎಲ್.ಡಿ.ಇ ಸಂಸ್ಥೆಯಿಂದ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ನೆರವು
    In (ರಾಜ್ಯ ) ಜಿಲ್ಲೆ
  • ವಾರ್ಡನ್ ಕಿರುಕುಳಕ್ಕೆ ಬೇಸತ್ತು ಹೆಡ್ ಕುಕ್ ಆತ್ಮಹತ್ಯೆ!
    In (ರಾಜ್ಯ ) ಜಿಲ್ಲೆ
  • ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚುನಾವಣೆಯಲ್ಲಿ ಗೊಂದಲ
    In (ರಾಜ್ಯ ) ಜಿಲ್ಲೆ
  • ಪತ್ರಕರ್ತರು ವಸ್ತುನಿಷ್ಠವಾಗಿ, ಶೋಧನೆ ಮಾಡಿ ಬರೆಯಬೇಕು
    In (ರಾಜ್ಯ ) ಜಿಲ್ಲೆ
  • ಅಧ್ಯಕ್ಷರಾಗಿ ಮಹೇಶ್, ಉಪಾಧ್ಯಕ್ಷರಾಗಿ ಜಯ ಅವಿರೋಧ ಆಯ್ಕೆ
    In (ರಾಜ್ಯ ) ಜಿಲ್ಲೆ
  • ಸಿ.ವಿ.ರಾಮನ್ ಪ.ಪೂ ಕಾಲೇಜ್ ಉತ್ತಮ ಸಾಧನೆ
    In (ರಾಜ್ಯ ) ಜಿಲ್ಲೆ
  • ಗುರು ಸಂಗನಬಸವ ಸ್ವಾಮೀಜಿ ಅಡ್ಡಪಲ್ಲಕ್ಕಿ ಉತ್ಸವ & ಅಗ್ನಿ ಪ್ರವೇಶ
    In (ರಾಜ್ಯ ) ಜಿಲ್ಲೆ
  • ಬೊಗಸೆಯಲ್ಲಿ ಅರಳುವ ನಿನ್ನಂದದ ಮುಖಕೆ
    In ವಿಶೇಷ ಲೇಖನ
  • ಕಲಕೇರಿ ಬಸವೇಶ್ವರ ಪ.ಪೂ ಕಾಲೇಜು ಅತ್ಯುತ್ತಮ ಸಾಧನೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.