ವಿಜಯಪುರ: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ವಿಜಯಪು ವಿಭಾಗದಿಂದ ಶಿಶುಕ್ಷ ತರಬೇತಿಗಾಗಿ ಆಯ್ಕೆ ಮಾಡಿಕೊಳ್ಳಲು ಐಟಿಐ ವಿದ್ಯಾರ್ಹತೆಯನ್ನು ಹೊಂದಿದ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲು ಆ.೨೩ ರಂದು ಬೆಳಿಗ್ಗೆ ೧೦ ರಿಂದ ಮಧ್ಯಾಹ್ನ ೩ ಗಂಟೆಯವರೆಗೆ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ವಿಭಾಗೀಯ ಕಚೇರಿ, ಅಥಣಿ ರಸ್ತೆ ವಿಜಯಪುರದಲ್ಲಿ ನೇರ ಸಂದರ್ಶನ ಹಮ್ಮಿಕೊಳ್ಳಲಾಗಿದೆ.
ಐಟಿಐನಲ್ಲಿ ಎಲೆಕ್ಟ್ರಿಷಿಯನ್, ಮ್ಯೆಕ್ಯಾನಿಕ್, ಡಿಸೆಲ್ ಮೆಕ್ಯಾನಿಕ್, ಮೋಟಾರ ವೆಹಿಕಲ್, ಫಿಟರ್, ಪೇಂಟರ್ ಹಾಗೂ ವೆಲ್ಡರ್ ವೃತ್ತಿಯಲ್ಲಿ ಉತ್ತೀರ್ಣರಾದ ೬೦ ಅಭ್ಯರ್ಥಿಗಳನ್ನು ತರಬೇತಿಗೆ ಆಯ್ಕೆ ಮಾಡಿಕೊಳ್ಳಲಾಗುತ್ತಿದೆ. ಆಸಕ್ತ ಅರ್ಹ ಅಭ್ಯರ್ಥಿಗಳು www.apprenticeshipindia.gov.inಪೋರ್ಟಲ್‌ನಲ್ಲಿ ಕ್ಯಾಂಡಿಡೇಟ್ ರಜಿಸ್ಟ್ರೇಶನ್ ನಲ್ಲಿ ವಿವರವಾದ ಮಾಹಿತಿಯನ್ನು ಆನ್‌ಲೈನ್‌ನಲ್ಲಿ ನೊಂದಣಿಯೊಂದಿಗೆ ಅರ್ಜಿ ಸಲ್ಲಿಸಿ, ಸಲ್ಲಿಸಿದ ಅರ್ಜಿ ಹಾಗೂ ದಾಖಲೆಗಳೊಂದಿಗೆ ಸಂದರ್ಶನಕ್ಕೆ ಹಾಜರಾಗಬೇಕು. ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ಮೊ: ೭೭೬೦೯೯೨೨೫೬, ೯೬೦೬೯೦೮೮೬೨ ಸಂಖ್ಯೆಗೆ ಸಂಪರ್ಕಿಸುವಂತೆ ವಿಭಾಗೀಯ ನಿಯಂತ್ರಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Subscribe to Updates
Get the latest creative news from FooBar about art, design and business.
ಶಿಶುಕ್ಷ ತರಬೇತಿಗೆ ಐಟಿಐ ವಿದ್ಯಾರ್ಥಿಗಳ ಆಯ್ಕೆ: ಆ.೨೩ರಂದು ನೇರ ಸಂದರ್ಶನ
Related Posts
Add A Comment
