Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 12, 2026

ಬಿ.ಎಲ್.ಡಿ.ಇ ಸಂಸ್ಥೆಯಿಂದ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ನೆರವು

ವಾರ್ಡನ್ ಕಿರುಕುಳಕ್ಕೆ ಬೇಸತ್ತು ಹೆಡ್ ಕುಕ್ ಆತ್ಮಹತ್ಯೆ!

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ದೇಶದ ನಸೀಬು ಬದಲಾಯಿಸುವ ಶಕ್ತಿ ಕೃಷಿಕನಿಗಿದೆ :ಶಾಸಕ ಮನಗೂಳಿ
(ರಾಜ್ಯ ) ಜಿಲ್ಲೆ

ದೇಶದ ನಸೀಬು ಬದಲಾಯಿಸುವ ಶಕ್ತಿ ಕೃಷಿಕನಿಗಿದೆ :ಶಾಸಕ ಮನಗೂಳಿ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಸಿಂದಗಿ: ಕೃಷಿ ಅಧಿಕಾರಿಗಳು ಪ್ರತಿ ಹೋಬಳಿ ಮಟ್ಟದಲ್ಲಿ ವರ್ಷಕ್ಕೆ ಎರಡು ಮೂರು ಬಾರಿ ವಿವಿಧ ಬೆಳೆಗಳು ಹಾಗೂ ಅವುಗಳ ಸಂವರ್ಧನೆ ಕುರಿತು ಕೃಷಿ ವಿಚಾರ ಸಂಕೀರ್ಣಗಳನ್ನು ಏರ್ಪಡಿಸುವುದು ಹಾಗೂ ಪ್ರಾತ್ಯಕ್ಷಿಕೆಗಳನ್ನು ಆಯೋಜಿಸುವ ಮೂಲಕ ರೈತರಲ್ಲಿ ಜಾಗೃತಿ ಮೂಡಿಸುವ ಕಾರ್ಯ ಮಾಡಬೇಕೆಂದು ಶಾಸಕ ಅಶೋಕ ಮನಗೂಳಿ ಹೇಳಿದರು.
ತಾಲೂಕಿನ ರಾಂಪುರ ಆರೂಢ ಮಠದಲ್ಲಿ ವಿಜಯಪುರ ಜಿಲ್ಲಾ ಪಂಚಾಯತ್ ಹಾಗೂ ಸಿಂದಗಿ ಕೃಷಿ ಇಲಾಖೆ ವತಿಯಿಂದ ಕಬ್ಬು, ತೊಗರಿ ಹಾಗೂ ಹತ್ತಿ ಬೆಳೆಗಳಲ್ಲಿ ನೂತನ ತಾಂತ್ರಿಕತೆಗಳ ಬಗ್ಗೆ ಹಮ್ಮಿಕೊಂಡ ವಿಚಾರ ಸಂಕೀರಣ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಭಾರತ ದೇಶ ಕೃಷಿ ಪ್ರಧಾನ ದೇಶ. ರೈತ ದೇಶದ ಜೀವನಾಡಿ. ಅನ್ನ ನೀಡುವ ರೈತ ಸಮೃದ್ಧವಾಗಿ ಫಸಲು ಪಡೆದರೆ ಮಾತ್ರ ನಾವು ನೀವೆಲ್ಲರೂ ನೆಮ್ಮದಿಯಿಂದ ಬದುಕಲು ಸಾಧ್ಯ. ದೇಶದ ನಸೀಬನ್ನು ಬದಲಾಯಿಸುವ ಶಕ್ತಿ ಕೃಷಿಕನಿಗೆ ಮಾತ್ರ ಇದೆ ಆದ್ದರಿಂದ ಕೃಷಿ ತಾಂತ್ರಿಕರು ಆತನಿಗೆ ಕಡಿಮೆ ಖರ್ಚಿನಲ್ಲಿ ಭೂಮಿಯ ಆರೋಗ್ಯವನ್ನು ಕಾಪಾಡಿಕೊಂಡು ಅತಿ ಹೆಚ್ಚು ಇಳುವರಿ ಪಡೆಯುವ ತಾಂತ್ರಿಕತೆಯನ್ನು ತಿಳಿಸಿಕೊಟ್ಟು ಸ್ವಾವಲಂಬಿ ಜೀವನ ನಡೆಸಲು ಅನುವು ಮಾಡಿಕೊಡುಬೇಕೆಂದು. ಆಲಮೇಲ ಮತ್ತು ಸಿಂದಗಿ ತಾಲೂಕಿನಲ್ಲಿ ಪ್ರತಿ ವರ್ಷ ನಮ್ಮ ಭಾಗದ ರೈತರಿಗೆ ಅನುಕೂಲವಾಗುವಂತಹ ಎರಡು ವಿಚಾರ ಸಂಕೀರಣ ಕಾರ್ಯಕ್ರಮಗಳು ಜರುಗಲಿ ಎಂದು ಸಲಹೆ ನೀಡಿದರು.
ಇದೇ ಸಂದರ್ಭದಲ್ಲಿ ರೋಹಿಣಿ ಸಮೂಹ ಸಂಸ್ಥೆಯ ವ್ಯವಸ್ಥಾಪಕ ಎಂ.ವಾಯ್.ಕಟ್ಟಿ, ಕಬ್ಬು ಕೃಷಿಯ ಕುರಿತು ಉಪನ್ಯಾಸ ನೀಡಿ, ರೈತರು ಕಡ್ಡಾಯವಾಗಿ ಮಣ್ಣು ಪರೀಕ್ಷೆ ಮಾಡುವ ಮೂಲಕ ಭೂಮಿಯಲ್ಲಿ ಕೊರತೆ ಇರುವ ಘಟಕಗಳನ್ನು ಗುರುತಿಸಿ ಪೋಷಕಾಂಶಗಳ ಕೊರತೆ ನೀಗಿಸಬಹುದು. ಮಣ್ಣಿನ ಬಾಹ್ಯ ಸ್ಥಿತಿಯ ಪರಿಚಯವಿಲ್ಲದೆ ಉತ್ತಮ ಇಳುವರಿ ಪಡೆಯಲು ಸಾಧ್ಯವಿಲ್ಲ. ಬೆಳೆಗಳ ನಾಲ್ಕು ಹಂತಗಳಾದ ಹುಟ್ಟು, ಬೆಳವಣಿಗೆ, ಉತ್ಪತ್ತಿ ಹಾಗೂ ಮಾಗುವಿಗೆಯ ಹಂತದಲ್ಲಿ ಅವಶ್ಯವಿರುವಷ್ಟೇ ಪ್ರಮಾಣದ ಗೊಬ್ಬರಗಳನ್ನು ಹಾಕುವ ಮೂಲಕ ಗೊಬ್ಬರಗಳ ಉಳಿತಾಯವಷ್ಟೇ ಅಲ್ಲದೆ ಭೂಮಿಯು ವಿಷಯುಕ್ತವಾಗುವುದನ್ನು ತಡೆಗಟ್ಟಬಹುದು. ಸಂಪೂರ್ಣವಾಗಿ ಸಕ್ಕರೆ ಪ್ರಮಾಣ ತುಂಬಿ ಮಾಗಿದ ಕಬ್ಬನ್ನು ಕಳಿಸುವುದರಿಂದ ಕಾರ್ಖಾನೆಗಳೂ ಲಾಭದಾಯಕವಾಗಿ ಸಾಗಲು ಸಾಧ್ಯ. ಕಾರ್ಖಾನೆಗಳು ಬದುಕಿದಾಗ ಮಾತ್ರ ಕಬ್ಬಿಗೆ ಬೆಲೆ ಬರಲು ಸಾಧ್ಯ. ಕಬ್ಬಿನಿಂದಲೇ ಇಥೆನಾಲ್ ತಯಾರಾಗುತ್ತಿರುವುದರಿಂದ ಮುಂದೊಂದು ದಿನ ಕಬ್ಬು ಕೃಷಿ ದೊಡ್ಡ ಉದ್ಯಮವಾಗಿ ಬೆಳೆಯುವುದರಲ್ಲಿ ಎರಡು ಮಾತಿಲ್ಲ. ಕಾರಣ ರೈತರು ಶಕ್ತಿಗಿಂತ ಯುಕ್ತಿ ಮತ್ತು ತಾಂತ್ರಿಕತೆ ಅಳವಡಿಸಿಕೊಂಡು ಕೃಷಿಯನ್ನು ಲಾಭದಾಯಕ ಉದ್ಯಮವಾಗಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಕಾರ್ಯಕ್ರಮದಲ್ಲಿ ಕೃಷಿ ವಿಸ್ತರಣಾ ಸಹ ನಿರ್ದೇಶಕ ಡಾ.ಆರ್.ಬಿ.ಬೆಳ್ಳಿ, ಇಂಡಿ ಕೃಷಿ ವಿಜ್ಞಾನ ಕೇಂದ್ರದ ಡಾ.ಶಿವಶಂಕರಮೂರ್ತಿ, ನಿಪ್ಪಾಣಿ ಎಆರ್‌ಎಸ್ ಮುಖ್ಯಸ್ಥ ಡಾ.ಸಂಜಯ್ ಪಾಟೀಲ್ ತೊಗರಿ ಮತ್ತು ಹತ್ತಿಯ ಬೆಳೆಗಳ ಅಧಿಕ ಇರುವವರಿಗೆ ತಾಂತ್ರಿಕ ಮಾಹಿತಿ ನೀಡಿದರು.
ಈ ವೇಳೆ ರಾಂಪುರ ಆರೂಢಮಠದ ಸಮರ್ಥ ಸದ್ಗುರು ನಿತ್ಯಾನಂದ ಮಹಾರಾಜರು ಸಾನಿಧ್ಯ ವಹಿಸಿದ್ದರು. ಕೃಷಿ ಜಂಟಿ ನಿರ್ದೇಶಕ ಡಾ.ರಾಜಶೇಖರ್ ವಿಲಿಯಂ, ತಾಲೂಕ ಕೃಷಿ ಅಧಿಕಾರಿ ಹೆಚ್.ವಾಯ್. ಸಿಂಗೇಗೋಳ, ಅಬ್ದುಲರಜಾಕ್ ಮೋಮಿನ, ದತ್ತು ಯಡಗಿ, ಪ್ರಗತಿಪರ ರೈತ ಅಶೋಕ ಅಲ್ಲಾಪುರ, ಭಾಗಪ್ಪಗೌಡ ಪಾಟೀಲ್, ಸುನಂದಾ ಯಂಪೂರೆ ಸೇರಿದಂತೆ ಸಿಂದಗಿ ಹಾಗೂ ಆಲಮೇಲ್ ತಾಲೂಕಿನ ನೂರಾರು ರೈತರು ವಿಚಾರ ಸಂಕಿರಣದಲ್ಲಿ ಪಾಲ್ಗೊಂಡಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 12, 2026

ಬಿ.ಎಲ್.ಡಿ.ಇ ಸಂಸ್ಥೆಯಿಂದ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ನೆರವು

ವಾರ್ಡನ್ ಕಿರುಕುಳಕ್ಕೆ ಬೇಸತ್ತು ಹೆಡ್ ಕುಕ್ ಆತ್ಮಹತ್ಯೆ!

ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚುನಾವಣೆಯಲ್ಲಿ ಗೊಂದಲ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 12, 2026
    In ದಿನಪತ್ರಿಕೆ
  • ಬಿ.ಎಲ್.ಡಿ.ಇ ಸಂಸ್ಥೆಯಿಂದ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ನೆರವು
    In (ರಾಜ್ಯ ) ಜಿಲ್ಲೆ
  • ವಾರ್ಡನ್ ಕಿರುಕುಳಕ್ಕೆ ಬೇಸತ್ತು ಹೆಡ್ ಕುಕ್ ಆತ್ಮಹತ್ಯೆ!
    In (ರಾಜ್ಯ ) ಜಿಲ್ಲೆ
  • ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚುನಾವಣೆಯಲ್ಲಿ ಗೊಂದಲ
    In (ರಾಜ್ಯ ) ಜಿಲ್ಲೆ
  • ಪತ್ರಕರ್ತರು ವಸ್ತುನಿಷ್ಠವಾಗಿ, ಶೋಧನೆ ಮಾಡಿ ಬರೆಯಬೇಕು
    In (ರಾಜ್ಯ ) ಜಿಲ್ಲೆ
  • ಅಧ್ಯಕ್ಷರಾಗಿ ಮಹೇಶ್, ಉಪಾಧ್ಯಕ್ಷರಾಗಿ ಜಯ ಅವಿರೋಧ ಆಯ್ಕೆ
    In (ರಾಜ್ಯ ) ಜಿಲ್ಲೆ
  • ಸಿ.ವಿ.ರಾಮನ್ ಪ.ಪೂ ಕಾಲೇಜ್ ಉತ್ತಮ ಸಾಧನೆ
    In (ರಾಜ್ಯ ) ಜಿಲ್ಲೆ
  • ಗುರು ಸಂಗನಬಸವ ಸ್ವಾಮೀಜಿ ಅಡ್ಡಪಲ್ಲಕ್ಕಿ ಉತ್ಸವ & ಅಗ್ನಿ ಪ್ರವೇಶ
    In (ರಾಜ್ಯ ) ಜಿಲ್ಲೆ
  • ಬೊಗಸೆಯಲ್ಲಿ ಅರಳುವ ನಿನ್ನಂದದ ಮುಖಕೆ
    In ವಿಶೇಷ ಲೇಖನ
  • ಕಲಕೇರಿ ಬಸವೇಶ್ವರ ಪ.ಪೂ ಕಾಲೇಜು ಅತ್ಯುತ್ತಮ ಸಾಧನೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.