ಸಿಂದಗಿ: 78ನೇ ಸ್ವಾತಂತ್ರ್ಯೋತ್ಸವದ ಹಿನ್ನಲೆಯಲ್ಲಿ ಹರ್ ಘರ್ ತಿರಂಗಾ ನಡೆಸಲು ಪ್ರಧಾನಿ ಮೋದಿ ಕರೆ ನೀಡಿದ್ದಾರೆ. ಅದರಂತೆ ಪ್ರತಿ ಮನೆ ಮೇಲೂ ರಾಷ್ಟ್ರಧ್ವಜ ಹಾರಿಸಲಾಗುತ್ತಿದೆ. ಬುಧವಾರ ಪಟ್ಟಣದ ತಾಲೂಕು ಆಡಳಿತ ಸೌಧದ ವತಿಯಿಂದ ಸೈಕಲ್ ಜಾಥಾ ನಡೆಸಲಾಯಿತು.
ಈ ಜಾಥಾವು ಪಟ್ಟಣದ ಬಸವೇಶ್ವರ ವೃತ್ತದಿಂದ ಪ್ರಾರಂಭಗೊಂಡು ವಿವೇಕಾನಂದ ವೃತ್ತ, ಟಿಪ್ಪು ಸುಲ್ತಾನ್ ವೃತ್ತ, ಅಂಬೇಡ್ಕರ್ ವೃತ್ತ, ಅಂಬಿಗೇರ ಚೌಡಯ್ಯ ವೃತ್ತ, ಸಂಗೊಳ್ಳಿ ರಾಯಣ್ಣ ವೃತ್ತದಿಂದ ಮಾರ್ಗವಾಗಿ ಸಂಚರಿಸಿ ಮತ್ತೇ ಬಸವೇಶ್ವರ ವೃತ್ತಕ್ಕೆ ಬಂದು ತಲುಪಿ ಮುಕ್ತಾಯಗೊಂಡಿತು.
ಸೈಕಲ್ ಹಾಗೂ ಬೈಕ್ ಎರಡಕ್ಕೂ ಅವಕಾಶ ಇದ್ದಿದ್ದರಿಂದ ಎಲ್ಲರೂ ತಮ್ಮ ವಾಹನಗಳಿಗೆ ತ್ರಿವರ್ಣ ಧ್ವಜ ಕಟ್ಟಿಕೊಂಡು ದೇಶದ ಪರ ಘೋಷಣೆ ಕೂಗುತ್ತಾ ಸಾಗಿದರು. ಜಾಥಾದಲ್ಲಿ ಭಾಗವಹಿಸಲೂ ಎಲ್ಲರಿಗೂ ಮುಕ್ತ ಆಹ್ವಾನ ನೀಡಲಾಗಿತ್ತು. ಹೀಗಾಗಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ಭಾಗವಹಿಸಿದ್ದರು.
ಈ ವೇಳೆ ವಿವಿಧ ಇಲಾಖೆ ಅಧಿಕಾರಿಗಳು, ಸಿಬ್ಬಂದಿ, ಸಾರ್ವಜನಿಕರು ಸೇರಿದಂತೆ ಅನೇಕರು ಭಾಗವಸಿದ್ದರು.
” ಪ್ರತಿಯೊಬ್ಬರಲ್ಲೂ ದೇಶಭಕ್ತಿ, ದೇಶಾಭಿಮಾನವನ್ನು ಮೂಡಿಸಲು ಹರ್ ಘರ್ ತಿರಂಗಾ ಅಭಿಯಾನವನ್ನು ನಡೆಸಲಾಗುತ್ತಿದೆ. ಎಲ್ಲರೂ ಸಮರ್ಥವಾಗಿ ಅಭಿಯಾನವನ್ನು ಯಶಸ್ವಿಗೊಳಿಸಬೇಕು. ಸಾರ್ವಜನಿಕರು ಸ್ವಯಂಪ್ರೇರಿತರಾಗಿ ತಮ್ಮ ಮನೆಗಳ ಮೇಲೆ ರಾಷ್ಟ್ರಧ್ವಜವನ್ನು ಸಂಜೆ ಸೂರ್ಯಾಸ್ತದವರೆಗೆ ನಿರಂತರವಾಗಿ ಹಾರಿಸಬೇಕು.”
– ಶಾಸಕ ಅಶೋಕ ಮನಗೂಳಿ

