Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 12, 2026

ಬಿ.ಎಲ್.ಡಿ.ಇ ಸಂಸ್ಥೆಯಿಂದ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ನೆರವು

ವಾರ್ಡನ್ ಕಿರುಕುಳಕ್ಕೆ ಬೇಸತ್ತು ಹೆಡ್ ಕುಕ್ ಆತ್ಮಹತ್ಯೆ!

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ನಂದಿಹಾಳಕ್ಕೆ ಪ್ರೌಢಶಾಲೆ ಮಂಜೂರಿಗೆ ಬದ್ಧ :ಸಚಿವ ಶಿವಾನಂದ
(ರಾಜ್ಯ ) ಜಿಲ್ಲೆ

ನಂದಿಹಾಳಕ್ಕೆ ಪ್ರೌಢಶಾಲೆ ಮಂಜೂರಿಗೆ ಬದ್ಧ :ಸಚಿವ ಶಿವಾನಂದ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಬಸವನಬಾಗೇವಾಡಿ: ನಂದಿಹಾಳ ಗ್ರಾಮದ ಸರ್ಕಾರಿ ಶಾಲೆಗೆ ಎರಡು ಎಕರೆ ಜಮೀನು ಇರುವದರಿಂದ ಈ ಜಾಗೆಯಲ್ಲಿ ಮುಂಬರುವ ದಿನಗಳಲ್ಲಿ ಗ್ರಾಮದ ಮಕ್ಕಳ ವಿದ್ಯಾಭ್ಯಾಸದ ಅನುಕೂಲಕ್ಕಾಗಿ ಪ್ರೌಢಶಾಲೆಯನ್ನು ಮಂಜೂರ ಮಾಡಿಸಲಾಗುವುದು ಎಂದು ಸಕ್ಕರೆ ಮತ್ತು ಕಬ್ಬು ಅಭಿವೃದ್ಧಿ, ಕೃಷಿ ಮಾರುಕಟ್ಟೆ ಮತ್ತು ಜವಳಿ ಸಚಿವ ಶಿವಾನಂದ ಪಾಟೀಲ ಭರವಸೆ ನೀಡಿದರು.
ತಾಲೂಕಿನ ನಂದಿಹಾಳ ಪಿಯು ಗ್ರಾಮದಲ್ಲಿ ೨೦೨೨-೨೩ ನೇ ಸಾಲಿನ ರಾಜ್ಯ ಮುಂದುವರಿದ ವಿವೇಕ ಯೋಜನೆಯಡಿಯಲ್ಲಿ ರೂ. ೨೭.೮೦ ಲಕ್ಷ ಅನುದಾನದಲ್ಲಿ ಸರ್ಕಾರಿ ಕನ್ನಡ ಗಂಡು ಮಕ್ಕಳ ಹಿರಿಯ ಪ್ರಾಥಮಿಕ ಶಾಲೆಯ ಎರಡು ಕೊಠಡಿಯ ನಿರ್ಮಾಣ ಕಾಮಗಾರಿಗೆ ಮಂಗಳವಾರ ಭೂಮಿಪೂಜೆ ನೆರವೇರಿಸಿದ ನಂತರ ಮಾತನಾಡಿದ ಅವರು, ಈ ಶಾಲೆಗೆ ಎರಡು ಸುಸಜ್ಜಿತ ಕೊಠಡಿಗಳನ್ನು ನಿರ್ಮಾಣ ಮಾಡಿಕೊಡಲಾಗುವುದು. ಗುತ್ತಿಗೆದಾರರು ಗುಣಮಟ್ಟದ ಕಾಮಗಾರಿಯಾಗುವಂತೆ ಗಮನ ಹರಿಸಬೇಕು. ಈ ಗ್ರಾಮದಲ್ಲಿರುವ ಸಿದ್ದೇಶ್ವರ ಸ್ವಾಮೀಜಿಯವರು ಜನಿಸಿದ ಮನೆಯನ್ನು ಮಾದರಿ ಗ್ರಂಥಾಲಯವನ್ನಾಗಿ ಮಾಡಬೇಕಾದರೆ ಕಡಿಮೆ ಜಾಗೆಯನ್ನು ಹೊಂದಿದೆ. ಇದರ ಸುತ್ತಮುತ್ತವಿರುವ ನಿವಾಸಿಗಳು ಸಹಕಾರ ನೀಡಿದರೆ ಮುಂಬರುವ ದಿನಗಳಲ್ಲಿ ಈ ಜಾಗೆಯಲ್ಲಿ ಜಿಲ್ಲೆಯಲ್ಲಿಯೇ ಮಾದರಿ ಗ್ರಂಥಾಲಯ ನಿರ್ಮಿಸಿಕೊಡುವ ಭರವಸೆ ನೀಡಿದರು.
ಸಿದ್ದೇಶ್ವರ ಸ್ವಾಮೀಜಿ ಸೇರಿದಂತೆ ಹಲವಾರು ಮಹಾಪುರುಷರು ಈ ನಾಡಿನಲ್ಲಿ ಜನಿಸಿದ್ದು. ಇವರು ತಮ್ಮ ಆಧ್ಯಾತ್ಮಿಕ ವಿಚಾರಗಳಿಂದ ಸಮಾಜದ ಪರಿವರ್ತನೆಗೆ ಕಾರಣರಾಗಿದ್ದಾರೆ. ಸಿದ್ದೇಶ್ವರ ಸ್ವಾಮೀಜಿಯವರು ನಂದಿಹಾಳ ಗ್ರಾಮದಲ್ಲಿ ಜನಿಸಿದ್ದು ನಮ್ಮೆಲ್ಲರ ಭಾಗ್ಯ. ಈ ನೆಲವು ಶ್ರದ್ಧೆ, ಭಕ್ತಿಗೆ ಹೆಸರಾಗಿದೆ ಎಂದರು.
ಮುಂದಿನ ದಿನಗಳಲ್ಲಿ ಆಲಮಟ್ಟಿ ಜಲಾಶಯದಲ್ಲಿ ನೀರಿನ ಮಟ್ಟ ಹೆಚ್ಚಳವಾದರೆ ಅಂದಾಜು ೭ ಲಕ್ಷ ಎಕರೆ ನೀರಾವರಿಯಾಗಲಿದೆ. ರೈತ ಬಾಂಧವರು ವೈಜ್ಞಾನಿಕ ಕೃಷಿ ಕೈಗೊಳ್ಳುವ ಮೂಲಕ ಆರ್ಥಿಕವಾಗಿ ಸಬಲರಾಗಬೇಕು. ರಾಜ್ಯದಲ್ಲಿ ಹೆಚ್ಚು ಕಬ್ಬ ಬೆಳೆಯಲಾಗುತ್ತಿದೆ. ರೈತರು ಕಬ್ಬು, ಮೆಕ್ಕೆಜೋಳ ಬೆಳೆಯಲು ಹೆಚ್ಚು ಆದ್ಯತೆ ನೀಡುವಂತಾಗಬೇಕು. ಇದರಲ್ಲಿ ಇಥೆನಾಲ್ ಅಂಶ ಇರುವದರಿಂದಾಗಿ ಪೆಟ್ರೋಲ್ ತಯಾರಿಸಲು ಇದು ಪೂರಕವಾಗುತ್ತದೆ ಎಂದರು.
ಗ್ರಾಮದಲ್ಲಿ ಸ್ವಚ್ಛತೆ ಮರೀಚಿಕೆಯಾಗಿದೆ. ವಿದ್ಯಾರ್ಥಿಗಳು ಮೂಲಭೂತ ಸೌಲಭ್ಯವಿಲ್ಲದೇ ಪರದಾಡುತ್ತಿದ್ದಾರೆ. ಪಿಡಿಓ ಇದರ ಕಡೆಗೆ ಗಮನ ಹರಿಸಿಲ್ಲ ಎಂಬ ಆರೋಪ ಕೇಳಿ ಬಂದಿದೆ ಎಂದು ಯರನಾಳ ಗ್ರಾಮ ಪಂಚಾಯಿತಿ ಪಿಡಿಓ ರವಿ ಗುಂಡಳ್ಳಿಗೆ ಪ್ರಶ್ನಿಸಿದ ಸಚಿವರು ಪಿಡಿಓ ಆಗಿ ಎಷ್ಟು ವರ್ಷ ಕಾರ್ಯನಿರ್ವಹಿಸುತ್ತಿರುವೆ. ನಿಮ್ಮ ಮೇಲೆ ಈ ರೀತಿಯಾದ ಆರೋಪ ಕೇಳಿ ಬಂದರೆ ಶಿಸ್ತುಕ್ರಮ ಜರುಗಿಸಬೇಕಾಗುತ್ತದೆ ಎಂದು ಖಡಕ್ಕಾಗಿ ಎಚ್ಚರಿಕೆ ನೀಡಿದರು.

ಕ್ಷೇತ್ರ ಶಿಕ್ಷಣಾಧಿಕಾರಿ ವಸಂತ ರಾಠೋಡ, ಗ್ರಾಪಂ ಮಾಜಿ ಅಧ್ಯಕ್ಷ ಬಸವರಾಜ ಜಾಲಗೇರಿ ಮಾತನಾಡಿದರು. ಸಾನಿಧ್ಯವನ್ನು ಸಂಗಯ್ಯಸ್ವಾಮೀಜಿ ಕೊಡೆಕಲ್ಮಠ ವಹಿಸಿದ್ದರು. ಕಾರ್ಯಕ್ರಮದಲ್ಲಿ ವ್ಹಿಡಿಸಿಸಿ ಬ್ಯಾಂಕ್ ನಿರ್ದೇಶಕ ಚಂದ್ರಶೇಖರಗೌಡ ಪಾಟೀಲ, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಶಿವನಗೌಡ ಗುಜಗೊಂಡ, ತಹಸೀಲ್ದಾರ ವೈ.ಎಸ್.ಸೋಮನಕಟ್ಟಿ, ತಾಪಂ ಇಓ ಪ್ರಕಾಶ ದೇಸಾಯಿ, ಜಿಪಂ ಎಇಇ ವಿಲಾಸ ರಾಠೋಡ, ಮುಖಂಡರಾದ ರಾವುತಪ್ಪ ಬೆಂಕಿ, ಎಂ.ಡಿ.ಮೇತ್ರಿ, ಪ್ರಕಾಶ ಕೋಲಕಾರ, ಸುರೇಶ ಶಿವಣಗಿ, ಯಲ್ಲಪ್ಪ ಮಾದರ, ಚನ್ನಗೌಡ ಪಾಟೀಲ ಇತರರು ಇದ್ದರು. ಎಸ್.ಬಿ.ಸಜ್ಜನಶೆಟ್ಟಿ ಸ್ವಾಗತಿಸಿದರು. ಬಸವರಾಜ ಬಾಗೇವಾಡಿ ನಿರೂಪಿಸಿ,ವಂದಿಸಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 12, 2026

ಬಿ.ಎಲ್.ಡಿ.ಇ ಸಂಸ್ಥೆಯಿಂದ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ನೆರವು

ವಾರ್ಡನ್ ಕಿರುಕುಳಕ್ಕೆ ಬೇಸತ್ತು ಹೆಡ್ ಕುಕ್ ಆತ್ಮಹತ್ಯೆ!

ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚುನಾವಣೆಯಲ್ಲಿ ಗೊಂದಲ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 12, 2026
    In ದಿನಪತ್ರಿಕೆ
  • ಬಿ.ಎಲ್.ಡಿ.ಇ ಸಂಸ್ಥೆಯಿಂದ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ನೆರವು
    In (ರಾಜ್ಯ ) ಜಿಲ್ಲೆ
  • ವಾರ್ಡನ್ ಕಿರುಕುಳಕ್ಕೆ ಬೇಸತ್ತು ಹೆಡ್ ಕುಕ್ ಆತ್ಮಹತ್ಯೆ!
    In (ರಾಜ್ಯ ) ಜಿಲ್ಲೆ
  • ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚುನಾವಣೆಯಲ್ಲಿ ಗೊಂದಲ
    In (ರಾಜ್ಯ ) ಜಿಲ್ಲೆ
  • ಪತ್ರಕರ್ತರು ವಸ್ತುನಿಷ್ಠವಾಗಿ, ಶೋಧನೆ ಮಾಡಿ ಬರೆಯಬೇಕು
    In (ರಾಜ್ಯ ) ಜಿಲ್ಲೆ
  • ಅಧ್ಯಕ್ಷರಾಗಿ ಮಹೇಶ್, ಉಪಾಧ್ಯಕ್ಷರಾಗಿ ಜಯ ಅವಿರೋಧ ಆಯ್ಕೆ
    In (ರಾಜ್ಯ ) ಜಿಲ್ಲೆ
  • ಸಿ.ವಿ.ರಾಮನ್ ಪ.ಪೂ ಕಾಲೇಜ್ ಉತ್ತಮ ಸಾಧನೆ
    In (ರಾಜ್ಯ ) ಜಿಲ್ಲೆ
  • ಗುರು ಸಂಗನಬಸವ ಸ್ವಾಮೀಜಿ ಅಡ್ಡಪಲ್ಲಕ್ಕಿ ಉತ್ಸವ & ಅಗ್ನಿ ಪ್ರವೇಶ
    In (ರಾಜ್ಯ ) ಜಿಲ್ಲೆ
  • ಬೊಗಸೆಯಲ್ಲಿ ಅರಳುವ ನಿನ್ನಂದದ ಮುಖಕೆ
    In ವಿಶೇಷ ಲೇಖನ
  • ಕಲಕೇರಿ ಬಸವೇಶ್ವರ ಪ.ಪೂ ಕಾಲೇಜು ಅತ್ಯುತ್ತಮ ಸಾಧನೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.