Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 12, 2026

ಬಿ.ಎಲ್.ಡಿ.ಇ ಸಂಸ್ಥೆಯಿಂದ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ನೆರವು

ವಾರ್ಡನ್ ಕಿರುಕುಳಕ್ಕೆ ಬೇಸತ್ತು ಹೆಡ್ ಕುಕ್ ಆತ್ಮಹತ್ಯೆ!

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಶರಣರ ವಚನಗಳಲ್ಲಿ ಬದುಕಿನ ಮೌಲ್ಯಗಳು ಅಡಕ :ಮಣಿ
(ರಾಜ್ಯ ) ಜಿಲ್ಲೆ

ಶರಣರ ವಚನಗಳಲ್ಲಿ ಬದುಕಿನ ಮೌಲ್ಯಗಳು ಅಡಕ :ಮಣಿ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಮುದ್ದೇಬಿಹಾಳ: ಶರಣರ ವಚನಗಳಲ್ಲಿ ಬದುಕಿನ ಮೌಲ್ಯಗಳು ಅಡಕವಾಗಿವೆ. ವಚನಗಳನ್ನು ನಿತ್ಯ ಪಠಣಮಾಡಿ, ಅವುಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಂಡರೆ ಬದುಕು ಬಂಗಾರವಾಗುತ್ತದೆ ಎಂದು ಹಿರಿಯ ಸಾಹಿತಿ ಅಶೋಕ ಮಣಿ ಅಭಿಪ್ರಾಯ ಪಟ್ಟರು.
ಪಟ್ಟಣದ ಮಾರುತಿ ನಗರದ ಸಿದ್ದಣ್ಣ ರೇವಡಿ ಅವರ ಮನೆಯಲ್ಲಿ ಬಸವ ಮಹಾಮನೆ ಸಮೀತಿ ಹಾಗೂ ಶರಣ ಸಾಹಿತ್ಯ ಪರಿಷತ್ತು ಶರಣ ಶ್ರಾವಣದ ಅಂಗವಾಗಿ ಹಮ್ಮಿಕೊಂಡ ಮನೆಯಂಗಳದಿಂದ ಮನದಂಗಳಕ್ಕೆ ಶರಣರ ಸಂದೇಶ ೩ನೇ ದಿನದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಅವರು ಮಾತನಾಡಿದರು.
೧೨ ನೇ ಶತಮಾನದಲ್ಲಿ ಬಸವಾದಿ ಪ್ರಮಥರು ರಚಿಸಿರವ ವಚನಗಳು ತ್ರಿಕಾಲ ಸತ್ಯ. ವಚನಗಳಲ್ಲಿಯ ತಿರುಳನ್ನು ಪಚನಮಾಡಿಕೊಂಡಾಗ ಮಾತ್ರ ಬದುಕು ಹಸನಾಗಿ ಮನಸ್ಸಿಗೆ ಶಾಂತಿ ಹಾಗೂ ನೆಮ್ಮದಿ ಸಿಗಲು ಸಾಧ್ಯ. ಪಾಲಕರಾದವರು ಮಕ್ಕಳನ್ನು ಮೊಬೈಲ್ ಗೀಳಿನಿಂದ ಹೊರತಂದು ಶರಣರ ವಚನಗಳ ಪರಿಚಯವನ್ನು ಮಾಡಿಕೊಡುವುದು ಅತ್ಯವಶ್ಯ. ದಾರಿ ತಪ್ಪುವವರನ್ನು ಸರಿದಾರಿಗೆ ತರುವಲ್ಲಿ ವಚನಗಳು ದಾರಿ ದೀಪವಾಗಬಲ್ಲವು ಎಂದರು.
ಚಿತ್ತರಗಿ -ಇಲಕಲ್ಲ ಮಠದ ಶ್ರೀ ವಿಜಯಮಹಾಂತ ಮಹಾಸ್ವಾಮಿಗಳ ಜೀವನ ಕುರಿತು ಬಸವ ಮಹಾಮನೆ ಸಮಿತಿಯ ಅಧ್ಯಕ್ಷ ಬಸವರಾಜ ಕೋರಿ ಅನುಭಾವ ನೀಡುತ್ತ ಶ್ರೀಗಳು, ಘನವಿದ್ವಾಂಸರು, ಕಾಯಕ ನಿಷ್ಠರು ಹಾಗೂ ಬಸವ ತತ್ವ ಪರಿಪಾಲಕರೂ ಆಗಿದ್ದರು. ತಮ್ಮ ಬದುಕಿನುದ್ದಕ್ಕೂ ಶರಣರ ವಚನಗಳನ್ನು ಅರಿತು ಆಚರಿಸಿ, ಪರಿಪಾಲಿಸಿದರು. ಜನರಲ್ಲಿ ಮನೆಮಾಡಿದ್ದ ದುಶ್ಚಟಗಳನ್ನು ನಿರ್ಮೂಲನೆ ಮಾಡಲು ಮಹಾಂತ ಜೋಳಿಗೆ ಎಂಬ ವಿನೂತನ ಆಂಧೋಲನವನ್ನೇ ಶ್ರೀಗಳು ಮಾಡಿ ವ್ಯಸನ ಮುಕ್ತ ನವ ಸಮಾಜದ ನಿರ್ಮಾಣಕ್ಕಾಗಿ ಅಹೋರಾತ್ರಿ ಶ್ರಮಿಸಿ ಹೆಸರಾದರು ಎಂದರು.
ಕಾರ್ಯಕ್ರಮದಲ್ಲಿ ಶರಣರಾದ ಚಂದ್ರಶೇಖರ ನಾಗರಾಳ, ಎಸ್.ಎಸ್.ಹುನಗುಂದ, ಎಂ.ಎಸ್.ಬಿರಾದಾರ, ಎಚ್.ಎಸ್.ಪಾಟೀಲ್, ಎಸ್.ಆರ್.ಗೌಡರ ಸೇರಿದಂತೆ ಕಲ್ಯಾಣಿ, ರೇವಡಿ ಕುಟುಂಬದ ಬಂಧು ಬಳಗದವರು, ಇದ್ದರು.
ಬಸವ ಭಜನೆ, ಶಿವ ಭಜನೆ ಹಾಗೂ ನೆನಹು ಪ್ರಾರ್ಥನೆಯನ್ನು ಮಹಾಮನೆ ಬಳಗದ ಸಂಚಾಲಕ ಎಸ್.ಬಿ.ಕನ್ನೂರ, ಬಿ.ಜಿ.ರಾಂಪೂರ, ಬಾಪುಗೌಡ ಪಾಟೀಲ ನಡೆಸಿಕೊಟ್ಟರು.
ಸಿದ್ದಣ್ಣ ರೇವಡಿ ಸ್ವಾಗತಿಸಿದರು. ಶಿಕ್ಷಕ ಎಂ.ಬಿ.ಪಾಟೀಲ ಶರಣು ಸಮರ್ಪಿಸಿದರು. ಬಿ.ಎಸ್.ಮೇಟಿ ಕಾರ್ಯಕ್ರಮ ನಿರೂಪಿಸಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 12, 2026

ಬಿ.ಎಲ್.ಡಿ.ಇ ಸಂಸ್ಥೆಯಿಂದ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ನೆರವು

ವಾರ್ಡನ್ ಕಿರುಕುಳಕ್ಕೆ ಬೇಸತ್ತು ಹೆಡ್ ಕುಕ್ ಆತ್ಮಹತ್ಯೆ!

ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚುನಾವಣೆಯಲ್ಲಿ ಗೊಂದಲ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 12, 2026
    In ದಿನಪತ್ರಿಕೆ
  • ಬಿ.ಎಲ್.ಡಿ.ಇ ಸಂಸ್ಥೆಯಿಂದ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ನೆರವು
    In (ರಾಜ್ಯ ) ಜಿಲ್ಲೆ
  • ವಾರ್ಡನ್ ಕಿರುಕುಳಕ್ಕೆ ಬೇಸತ್ತು ಹೆಡ್ ಕುಕ್ ಆತ್ಮಹತ್ಯೆ!
    In (ರಾಜ್ಯ ) ಜಿಲ್ಲೆ
  • ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚುನಾವಣೆಯಲ್ಲಿ ಗೊಂದಲ
    In (ರಾಜ್ಯ ) ಜಿಲ್ಲೆ
  • ಪತ್ರಕರ್ತರು ವಸ್ತುನಿಷ್ಠವಾಗಿ, ಶೋಧನೆ ಮಾಡಿ ಬರೆಯಬೇಕು
    In (ರಾಜ್ಯ ) ಜಿಲ್ಲೆ
  • ಅಧ್ಯಕ್ಷರಾಗಿ ಮಹೇಶ್, ಉಪಾಧ್ಯಕ್ಷರಾಗಿ ಜಯ ಅವಿರೋಧ ಆಯ್ಕೆ
    In (ರಾಜ್ಯ ) ಜಿಲ್ಲೆ
  • ಸಿ.ವಿ.ರಾಮನ್ ಪ.ಪೂ ಕಾಲೇಜ್ ಉತ್ತಮ ಸಾಧನೆ
    In (ರಾಜ್ಯ ) ಜಿಲ್ಲೆ
  • ಗುರು ಸಂಗನಬಸವ ಸ್ವಾಮೀಜಿ ಅಡ್ಡಪಲ್ಲಕ್ಕಿ ಉತ್ಸವ & ಅಗ್ನಿ ಪ್ರವೇಶ
    In (ರಾಜ್ಯ ) ಜಿಲ್ಲೆ
  • ಬೊಗಸೆಯಲ್ಲಿ ಅರಳುವ ನಿನ್ನಂದದ ಮುಖಕೆ
    In ವಿಶೇಷ ಲೇಖನ
  • ಕಲಕೇರಿ ಬಸವೇಶ್ವರ ಪ.ಪೂ ಕಾಲೇಜು ಅತ್ಯುತ್ತಮ ಸಾಧನೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.