Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸೆ.‌17ರಿಂದ ಯತ್ನಾಳ ನೇತೃತ್ವದಲ್ಲಿ ಪಾದಯಾತ್ರೆ :ಪ್ರತಾಪ್ ಸಿಂಹ
(ರಾಜ್ಯ ) ಜಿಲ್ಲೆ

ಸೆ.‌17ರಿಂದ ಯತ್ನಾಳ ನೇತೃತ್ವದಲ್ಲಿ ಪಾದಯಾತ್ರೆ :ಪ್ರತಾಪ್ ಸಿಂಹ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಬೆಳಗಾವಿಯಲ್ಲಿ ನಡೆಸಿರುವುದು ಬಂಡಾಯಗಾರರ ಸಭೆಯಲ್ಲ | ವರಿಷ್ಠರ ಅನುಮತಿಯೊಂದಿಗೆ ಪಾದಯಾತ್ರೆ | ಸಿಂಹ ಸ್ಪಷ್ಟನೆ

ಮೈಸೂರು: ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ದಿ ನಿಗಮದ ಹಗರಣವನ್ನು ಖಂಡಿಸಿ ಸೆ.17ರಿಂದ ಪಾದಯಾತ್ರೆಗೆ ನಿರ್ಧರಿಸಿದ್ದೇವೆ. ಪಕ್ಷದ ನೇತಾರ, ಶಾಸಕ ಬಸನಗೌಡ ಪಾಟೀಲ್ ಯತ್ನಾಳ ನೇತೃತ್ವದಲ್ಲಿ ನಾವು ಬೆಳಗಾವಿಯಲ್ಲಿ ನಡೆಸಿರುವುದು ಬಿಜೆಪಿ ಅತೃಪ್ತರ ಅಥವಾ ಬಂಡಾಯಗಾರರ ಸಭೆಯಲ್ಲ ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ತಿಳಿಸಿದ್ದಾರೆ.
ಮೈಸೂರಿನಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಮೈಸೂರು ಚಲೋ ಪಾದಯಾತ್ರೆಯ ಅನುಭವವನ್ನು ನಾನು ಅಲ್ಲಿ ಹಂಚಿಕೊಂಡೆ. ವಾಲ್ಮೀಕಿ ನಿಗಮದ ಹಗರಣದ ವಿರುದ್ದ ಸರಿಯಾದ ಹೋರಾಟ ನಡೆದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಖುರ್ಚಿ ಅಲುಗಾಡುತ್ತದೆ. ಯತ್ನಾಳ್ ಅವರಂಥ ದೊಡ್ಡ ನಾಯಕ ಕರೆದ ಕಾರಣ ನಾನು ಸಭೆಗೆ ಹೋಗಿದ್ದೆ ಎಂದಿದ್ದಾರೆ.
“ನಮ್ಮ ಪಾದಯಾತ್ರೆಗೆ ಹೈಕಮಾಂಡ್ ಅನುಮತಿ ಕೊಡುತ್ತದೆ. ವರಿಷ್ಠರ ಅನುಮತಿಯೊಂದಿಗೇ ನಾವು ನಡೆಸುತ್ತೇವೆ. ಯಾರನ್ನೋ ಓಲೈಸಲು ಅಥವಾ ಮೆಚ್ಚಿಸಲು ರಾಜಕಾರಣ ಮಾಡುವುದಿಲ್ಲ. ಯಾರ ಮನೆಯ ಬಾಗಿಲನ್ನೂ ತಟ್ಟುವುದಿಲ್ಲ. ನನಗೆ ಟಿಕೆಟ್ ಕೊಟ್ಟಿದ್ದು ಬಿಜೆಪಿ ಅಲ್ಲ; ಆರ್‌ಎಸ್‌ಎಸ್‌ ನೀಡಿತ್ತು. ಕ್ಷೇತ್ರ, ಜಾತಿಯಿಂದಾಚೆ ಜನಪ್ರಿಯತೆಯುಳ್ಳ ಯತ್ನಾಳ್ ಅಂಥವರಲ್ಲಿ ನಾನೂ ಒಬ್ಬ” ಎಂದು ಪ್ರತಾಪ್ ಸಿಂಹ ಹೇಳಿದ್ದಾರೆ.
“ಕೇಂದ್ರಕ್ಕೆ ಹೋಗಬೇಡಿ,‌ ರಾಜ್ಯದಲ್ಲೇ ಇರಿ ಎಂಬ ಸಂದೇಶ ವರಿಷ್ಠರಿಂದ ಸಿಕ್ಕಿದೆ. ಹೀಗಾಗಿ ಇಲ್ಲೇ ಇದ್ದೇನೆ. ನಾನು ಅನ್ಯಾಯದ ವಿರುದ್ಧ ಮಾತ್ರವೇ ರೆಬಲ್‌; ಪಕ್ಷದ ವಿರುದ್ಧವಲ್ಲ. ಬಿಜೆಪಿಯ ದೊಡ್ಡ ದೊಡ್ಡ ನಾಯಕರಿಗಿಂತಲೂ ನಾನು ಸೀನಿಯರ್. ಏಕೆಂದರೆ, ನನ್ನಪ್ಪ ಆರ್‌ಎಸ್ಎಸ್‌ನಲ್ಲಿದ್ದರು” ಎಂದಿದ್ದಾರೆ.
“ಬಿಎಸ್ ಯಡಿಯೂರಪ್ಪ ಅಂಥವರು ನೇಪಥ್ಯಕ್ಕೆ ಸರಿಯುತ್ತಿರುವ ಕಾರಣ ಪಕ್ಷಕ್ಕೆ ನನ್ನಂತಹ ಯಂಗ್ ಬ್ಲಡ್ ಬರಬೇಕಿದೆ. ಹೀಗಾಗಿ ನನ್ನನ್ನು ರಾಜ್ಯದಲ್ಲೇ ಉಳಿಸಿದ್ದಾರೆ. ನಾನು ರಾಜ್ಯ ರಾಜಕಾರಣದಲ್ಲಿ ಸಕ್ರಿಯವಾಗಿ ಇರುವೆ. ನಮ್ಮ ಪಾದಯಾತ್ರೆಗೆ ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಬಿವೈ ವಿಜಯೇಂದ್ರ ಸೇರಿದಂತೆ ಎಲ್ಲರನ್ನೂ ಆಹ್ವಾನಿಸುತ್ತಾರೆ ಎಂಬ ವಿಶ್ವಾಸವಿದೆ” ಎಂದು ಹೇಳಿದ್ದಾರೆ.
ರಾಜ್ಯ ಸರ್ಕಾರದ ವಿರುದ್ದ ಇತ್ತೀಚೆಗೆ ಬಿಜೆಪಿ ಮತ್ತು ಜೆಡಿಎಸ್ ಜಂಟಿಯಾಗಿ ಬೆಂಗಳೂರಿನಿಂದ ಮೈಸೂರಿಗೆ ಪಾದಯಾತ್ರೆ ನಡೆಸಿತ್ತು. ಈ ಬೆನ್ನಲ್ಲೇ ಬೆಳಗಾವಿಯಲ್ಲಿ ಯತ್ನಾಳ್, ಪ್ರತಾಪ್ ಸಿಂಹ, ರಮೇಶ್ ಜಾರಕಿಹೊಳಿ ಸೇರಿದಂತೆ ಕೆಲವರು ಪ್ರತ್ಯೇಕ ಸಭೆ ನಡೆಸಿದ್ದರು. ಇದು ಬಿಜೆಪಿಯೊಳಗಿನ ಅತೃಪ್ತರ ಸಭೆ ಎಂದು ಬಣ್ಣಿಸಲಾಗಿತ್ತು. ಇದೀಗ ಯತ್ನಾಳ್ ನೇತೃತ್ವದಲ್ಲಿ ಪಾದಯಾತ್ರೆ ಹಮ್ಮಿಕೊಂಡಿರುವುದು ಬಂಡಾಯದ ಅನುಮಾನಕ್ಕೆ ಪುಷ್ಠಿ ನೀಡುವಂತಿದೆ.
ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಸೇರಿದಂತೆ ಯಡಿಯೂರಪ್ಪ ಬಣದ ನಾಯಕರ ವಿರುದ್ದ ಯತ್ನಾಳ್ ಅಸಮಾಧಾನ ಹೊಂದಿರುವುದು, ಪ್ರತಾಪ್ ಸಿಂಹ ಅವರಿಗೆ ಲೋಕಸಭೆ ಚುನಾವಣೆಯಲ್ಲಿ ಟಿಕೆಟ್ ಕೈ ತಪ್ಪಿರುವುದು ಇಲ್ಲಿ ಗಮನಾರ್ಹ ವಿಷಯ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್
    In (ರಾಜ್ಯ ) ಜಿಲ್ಲೆ
  • ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ
    In (ರಾಜ್ಯ ) ಜಿಲ್ಲೆ
  • ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ
    In (ರಾಜ್ಯ ) ಜಿಲ್ಲೆ
  • ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ
    In ವಿಶೇಷ ಲೇಖನ
  • ಸರಗೂರು ತಾಲೂಕಿನಲ್ಲಿ ನಿಲ್ಲದ ಕಾಡುಪ್ರಾಣಿ-ಮಾನವ ಸಂಘರ್ಷ
    In (ರಾಜ್ಯ ) ಜಿಲ್ಲೆ
  • ಕೇವಲ ಅಂಕ ಗಳಿಕೆ ಶಿಕ್ಷಣವಲ್ಲˌ ತಹಶೀಲ್ದಾರ ಅನೀಲ ಬಡಿಗೇರ
    In (ರಾಜ್ಯ ) ಜಿಲ್ಲೆ
  • ಸಾರ್ವಜನಿಕ ಬ್ಯಾಂಕುಗಳಿಂದ ಆರ್ಥಿಕ ಸಾಕ್ಷರತೆ ಸಪ್ತಾಹ
    In (ರಾಜ್ಯ ) ಜಿಲ್ಲೆ
  • ಶನಿವಾರ ವಿದ್ಯುತ್ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಆಂಧ್ರದಲ್ಲಿ ಕೆ.ಜಿ ತಂಬಾಕಿಗೆ 400, ಕರ್ನಾಟಕದಲ್ಲಿ ಕೇವಲ 292 ರೂ.ಹೆಚ್ ಡಿ ಕೋಟೆಯಲ್ಲಿ ಹರಾಜು ಮಾರುಕಟ್ಟೆ ಬಂದ್, ರೈತರ ಆಕ್ರೋಶ
    In (ರಾಜ್ಯ ) ಜಿಲ್ಲೆ
  • ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಡಿಯಲ್ಲಿ ನಿರ್ಗತಿಕರಿಗೆ ವಾತ್ಸಲ್ಯ ಕಿಟ್ ವಿತರಣೆಉದಯರಶ್ಮಿ ದಿನಪತ್ರಿಕೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.