Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಆಲಮಟ್ಟಿ ಜಲಾಶಯದ ಗೇಟ್ ಗಳಿಗೆ ತೊಂದರೆಯಿಲ್ಲ
(ರಾಜ್ಯ ) ಜಿಲ್ಲೆ

ಆಲಮಟ್ಟಿ ಜಲಾಶಯದ ಗೇಟ್ ಗಳಿಗೆ ತೊಂದರೆಯಿಲ್ಲ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಆಲಮಟ್ಟಿ: ಆಲಮಟ್ಟಿ ಜಲಾಶಯದ ಗೇಟ್ ಗಳು ಸೇರಿದಂತೆ ಜಲಾಶಯಕ್ಕೆ ಯಾವುದೇ ರೀತಿಯ ತೊಂದರೆಯಿಲ್ಲ, ಎಲ್ಲವೂ ಸಮರ್ಪಕವಾಗಿ ಕಾರ್ಯನಿರ್ವಹಿಸುತ್ತಿವೆ ಎಂದು
ಕೃಷ್ಣಾ ಭಾಗ್ಯ ಜಲ ನಿಗಮದ ವ್ಯವಸ್ಥಾಪಕ ನಿರ್ದೇಶಕ ಕೆ.ಪಿ.ಮೋಹನರಾಜು ತಿಳಿಸಿದರು.
ಆಲಮಟ್ಟಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಸ್ವಾತ್ರಂತ್ರೋತ್ಸವದ ಅಂಗವಾಗಿ ಬುಧವಾರ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ನಿಗಮದ ನೌಕರರಿಗಾಗಿ ಏರ್ಪಡಿಸಿದ್ದ ಕ್ರಿಕೆಟ್ ಪಂದ್ಯಾವಳಿ ಉದ್ಘಾಟಿಸಿದ ನಂತರ ಅವರು ಈ ವಿಷಯ ತಿಳಿಸಿದರು.
ಈಗಾಗಲೇ ಆಲಮಟ್ಟಿ ಜಲಾಶಯದ ಗೇಟ್ ಗಳ ಮೇಲ್ವಿಚಾರಣೆ ಮುಂಗಾರು ಹಂಗಾಮಿಗೂ ಮೊದಲು ನಡೆಸಲಾಗಿದೆ, ಆದರೆ ಈಗ ಜಲಸಂಪನ್ಮೂಲ ಸಚಿವರು ಹಾಗೂ ಜಲಸಂಪನ್ಮೂಲ ಇಲಾಖೆಯ ಕಾರ್ಯದರ್ಶಿಗಳು ಮತ್ತೊಮ್ಮೆ ಜಲಾಶಯವನ್ನು ಪರೀಕ್ಷಿಸಿ ವರದಿ ಸಲ್ಲಿಸುವಂತೆ ಸೂಚಿಸಿದ್ದಾರೆ. ಆ ಪ್ರಕಾರ ಎರಡು ದಿನಗಳಲ್ಲಿ ಮತ್ತೊಮ್ಮೆ ವಿವರವಾಗಿ ಪರಿಶೀಲನೆ ನಡೆಸಿ ವರದಿ ಸಲ್ಲಿಸಲಾಗುವುದು ಎಂದು ಅವರು ತಿಳಿಸಿದರು.
ಆಲಮಟ್ಟಿ ಜಲಾಶಯದ ಕಾಲುವೆಗಳಿಗೆ ನೀರು ಹರಿಸಿ ಅದರ ಮೂಲಕ ಜಿಲ್ಲೆಯ 100 ಕ್ಕೂ ಅಧಿಕ ಕೆರೆಗಳ ಭರ್ತಿಗೆ ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದರು.
ಜಲಾಶಯ ಭರ್ತಿಯತ್ತ ಸಾಗಿದ್ದು ಖುಷಿ ತಂದಿದೆ, ಈ ಬಾರಿ ಹಿಂಗಾರಿಗೂ ನೀರು ಹರಿಸುವ ಸಾಧ್ಯತೆಯಿದೆ. ಇನ್ನೂ ಒಂದು ತಿಂಗಳುಗಳ ಕಾಲ ಜಲಾಶಯಕ್ಕೆ ನೀರು ಹರಿದುಬರುವ ನಿರೀಕ್ಷೆಯಿದೆ ಎಂದರು.
ಬಾಗಿನ ಅರ್ಪಣೆಗಾಗಿ ಈಗಾಗಲೇ ಚರ್ಚಿಸಲಾಗಿದ್ದು, ಬಹುತೇಕ ಇದೇ ತಿಂಗಳಲ್ಲಿ ಬಾಗಿನ ಅರ್ಪಣೆ ನಡೆಯಲಿದೆ ಎಂದರು.
ಇದಕ್ಕೂ ಮೊದಲು ಕ್ರಿಕೆಟ್ ಪಂದ್ಯಾವಳಿಗೆ ಚಾಲನೆ ನೀಡಿ ಮಾತನಾಡಿ, ಈ ರೀತಿಯ ನೌಕರರ ಮಧ್ಯೆ ಸೌಹಾರ್ದಯುತ ಕ್ರೀಡೆಗಳಿಂದ ನೌಕರರಲ್ಲಿ ಆತ್ಮೀಯತೆ ಹೆಚ್ಚಿ, ಮನಸ್ಸು ಪ್ರಫುಲ್ಲವಾಗುತ್ತದೆ ಎಂದರು.
ನೌಕರರ ಸಂಘದ ಅಧ್ಯಕ್ಷ ಸದಾಶಿವ ದಳವಾಯಿ, ಪ್ರಧಾನ ಕಾರ್ಯದರ್ಶಿ ವೈ.ಎಂ. ಪಾತ್ರೋಟ, ಸೂಪರಿಂಟೆಡಿಂಗ್ ಎಂಜಿನಿಯರ್ ಗಳಾದ ಬಿ.ಎಸ್. ಪಾಟೀಲ, ವಿ.ಆರ್. ಹಿರೇಗೌಡರ, ಡಿಎಫ್ ಓ ರಾಜಣ್ಣ ನಾಗಶೆಟ್ಟಿ, ಶರಣಪ್ಪ ಚಲವಾದಿ, ಕೆ. ಜಯಣ್ಣ, ಆರ್.ಎಫ್ ಓ ಮಹೇಶ ಪಾಟೀಲ, ಎಸಿಎಫ್ ಎಸ್.ಆರ್. ಪಾತ್ರೋಟ, ರಮೇಶ ಚವ್ಹಾಣ, ವಿಠ್ಠಲ ಜಾಧವ ಮತ್ತೀತರರು ಇದ್ದರು. ಆಲಮಟ್ಟಿ ಎಂಜಿನಿಯರ್ಸ್ ತಂಡ ಪ್ರಥಮ, ಅರಣ್ಯ ಇಲಾಖೆಯ ತಂಡ ದ್ವಿತೀಯ, ಪ್ರಧಾನ ಮುಖ್ಯ ಲೆಕ್ಕಾಧಿಕಾರಿಗಳ ಇಲಾಖೆಯ ತಂಡ ತೃತೀಯ ಸ್ಥಾನ ಪಡೆಯಿತು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್
    In (ರಾಜ್ಯ ) ಜಿಲ್ಲೆ
  • ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ
    In (ರಾಜ್ಯ ) ಜಿಲ್ಲೆ
  • ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ
    In (ರಾಜ್ಯ ) ಜಿಲ್ಲೆ
  • ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ
    In ವಿಶೇಷ ಲೇಖನ
  • ಸರಗೂರು ತಾಲೂಕಿನಲ್ಲಿ ನಿಲ್ಲದ ಕಾಡುಪ್ರಾಣಿ-ಮಾನವ ಸಂಘರ್ಷ
    In (ರಾಜ್ಯ ) ಜಿಲ್ಲೆ
  • ಕೇವಲ ಅಂಕ ಗಳಿಕೆ ಶಿಕ್ಷಣವಲ್ಲˌ ತಹಶೀಲ್ದಾರ ಅನೀಲ ಬಡಿಗೇರ
    In (ರಾಜ್ಯ ) ಜಿಲ್ಲೆ
  • ಸಾರ್ವಜನಿಕ ಬ್ಯಾಂಕುಗಳಿಂದ ಆರ್ಥಿಕ ಸಾಕ್ಷರತೆ ಸಪ್ತಾಹ
    In (ರಾಜ್ಯ ) ಜಿಲ್ಲೆ
  • ಶನಿವಾರ ವಿದ್ಯುತ್ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಆಂಧ್ರದಲ್ಲಿ ಕೆ.ಜಿ ತಂಬಾಕಿಗೆ 400, ಕರ್ನಾಟಕದಲ್ಲಿ ಕೇವಲ 292 ರೂ.ಹೆಚ್ ಡಿ ಕೋಟೆಯಲ್ಲಿ ಹರಾಜು ಮಾರುಕಟ್ಟೆ ಬಂದ್, ರೈತರ ಆಕ್ರೋಶ
    In (ರಾಜ್ಯ ) ಜಿಲ್ಲೆ
  • ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಡಿಯಲ್ಲಿ ನಿರ್ಗತಿಕರಿಗೆ ವಾತ್ಸಲ್ಯ ಕಿಟ್ ವಿತರಣೆಉದಯರಶ್ಮಿ ದಿನಪತ್ರಿಕೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.