Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 22, 2026

ಡಾ.ಸುರೇಖಾ ರಾಠೋಡ ಗೆ “ಸಾಹಿತ್ಯ ರತ್ನ” ಪ್ರಶಸ್ತಿ ಪ್ರದಾನ

ಯುಕೆಪಿ ಎಂ.ಡಿ. ಕಚೇರಿಯ ಕಂಪ್ಯೂಟರ್ ಜಪ್ತಿ!

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸ್ವಾತಂತ್ರ್ಯಕ್ಕಾಗಿ ಬಲಿದಾನ ಮಾಡಿದವರನ್ನು ಸ್ಮರಿಸಿ: ಬಸವರಾಜ ಐನಾಪುರ
(ರಾಜ್ಯ ) ಜಿಲ್ಲೆ

ಸ್ವಾತಂತ್ರ್ಯಕ್ಕಾಗಿ ಬಲಿದಾನ ಮಾಡಿದವರನ್ನು ಸ್ಮರಿಸಿ: ಬಸವರಾಜ ಐನಾಪುರ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ತಿಕೋಟಾ: ತಾಲೂಕಿನ ಹೊನವಾಡ ಗ್ರಾಮದಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಅಭಿವೃದ್ಧಿಪಡಿಸಲಾದ ಅಮೃತ ಸರೋವರದಲ್ಲಿ ಹಮ್ಮಿಕೊಂಡ ಸ್ವಾತಂತ್ರ್ಯ ದಿನಾಚರಣೆಯಲ್ಲಿ ತಾಲೂಕು ಪಂಚಾಯತಿಯ ಕಾರ್ಯನಿರ್ವಾಹಕ ಅಧಿಕಾರಿ ಬಸವರಾಜ ಐನಾಪುರ ಅವರು ಮಾತನಾಡುತ್ತಾ, ನಮ್ಮ ದೇಶ ಸ್ವಾತಂತ್ರ್ಯ ಹೊಂದಲು ಹಲವಾರು ಮಹನೀಯರು ತಮ್ಮ ಜೀವನವನ್ನು ಬಲಿದಾನ ಮಾಡಿದ್ದಾರೆ.ಕೆಲವರು ತಮ್ಮ ಅಮೂಲ್ಯವಾದ ದಿನಗಳನ್ನು ದೇಶಕ್ಕಾಗಿ ಸೆರೆಮನೆಯಲ್ಲಿ ಕಳೆದಿದ್ದಾರೆ. ಅಂತಹ ಮಹಾನ ನಾಯಕರನ್ನು ಸ್ಮರಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯ. ಇಂದಿನ ಸಂಪತ್ತನ್ನು ಸಂರಕ್ಷಣೆ ಮಾಡಿ ಮುಂದಿನ ಪೀಳಿಗೆಗೆ ನೀಡುವುದು ಸಹ ನಮ್ಮ ಆದ್ಯ ಕರ್ತವ್ಯವಾಗಬೇಕು. ನಮ್ಮ ದೇಶದ ಜೊತೆಗೆ ಅನೇಕ ದೇಶಗಳು ಸ್ವಾತಂತ್ರ್ಯ ಪಡೆದುಕೊಂಡರೂ ಸಹಿತ ಬೇರೆ ಯಾವ ದೇಶವು ಭಾರತದಷ್ಟು ಅಭಿವೃದ್ಧಿ ಹೊಂದಿರುವುದಿಲ್ಲ. ವಿಶ್ವದ ಅತ್ಯಂತ ಬಲಿಷ್ಠ ಸಂವಿಧಾನ ಹೊಂದಿದ ನಮ್ಮ ಭಾರತ, ಸಮಾಜದ ಕಟ್ಟ ಕಡೆಯ ವ್ಯಕ್ತಿಗೂ ಕೂಡಾ ಸಾಮಾಜಿಕ ನ್ಯಾಯ ದೊರಕಿಸಿಕೊಟ್ಟಿದೆ. ಅವುಗಳನ್ನು ಸದುಪಯೋಗ ಪಡಿಸಿಕೊಂಡು ನಾವೆಲ್ಲರೂ ಸಂವಿಧಾನದ ಆಶಯದಂತೆ ಬದುಕಬೇಕು. ಬಲಿದಾನಗೈದ ಮಹಾನ ನಾಯಕರು ಹಾಕಿ ಕೊಟ್ಟ ಆದರ್ಶ ಮಾರ್ಗದಲ್ಲಿ ನಡೆಯುವ ಮೂಲಕ ಭವ್ಯ ಭಾರತವನ್ನು ಇನ್ನಷ್ಟು ಉತ್ತುಂಗಕ್ಕೆ ತೆಗೆದುಕೊಂಡು ಹೋಗೋಣ ಎಂದು ಹೇಳಿದರು.
ಗ್ರಾಮ ಪಂಚಾಯತಿ ಅಧ್ಯಕ್ಷ ತುಕಾರಾಮದಡಕೆ ರಾಷ್ಟ್ರ ಧ್ವಜಾರೋಹಣ ನೇರವೇರಿಸಿದರು.
ಈ ಸಂದರ್ಭದಲ್ಲಿ ಗ್ರಾಪಂ ಉಪಾಧ್ಯಕ್ಷೆ ಅಶ್ವಿನಿ ಗುಗ್ಗರಿ, ತಾಲೂಕು ಪಂಚಾಯತಿ ನರೇಗಾ ಸಹಾಯಕ ನಿರ್ದೇಶಕರು ಹಾಗೂ ಪಿಡಿಓ ಶೋಭಾ ಶಿಳೀನ, ತಾಂತ್ರಿಕ ಸಂಯೋಜಕರಾದ ನಾಗರಾಜ ಕಲಕೇರಿ, ಚಡಚಣ ತಾಲೂಕು ಐಇಸಿ ಸಂಯೋಜಕ ವಿನೋದ ಸಜ್ಜನ, ತಿಕೋಟಾ ತಾಲೂಕು ಐಇಸಿ ಸಂಯೋಜಕ ಕಲ್ಲಪ್ಪ ನಂದರಗಿ, ಕಾರ್ಯದರ್ಶಿ ಅಣ್ಣಪ್ಪ ಬಿದರಿ, ತಾಲೂಕು ಪಂಚಾಯತಿಯ ಸುನೀಲ ಬನಸೋಡೆ, ಶ್ರೀಧರ ಸಾವಳಗಿ, ಸಿದರಾಯ ದಾಶ್ಯಾಳ, ಗ್ರಾಮ ಪಂಚಾಯತಿಯ ಹೂವಣ್ಣ ಪೂಜೇರಿ, ಕವಿತಾ ಕೊಳೇಕರ, ಶಿವು ಪತ್ತಾರ ಸೇರಿದಂತೆ ತಾಲೂಕು ಪಂಚಾಯತಿಯ ಅಧಿಕಾರಿಗಳು, ಸಿಬ್ಬಂದಿಗಳು, ಗ್ರಾಮ ಪಂಚಾಯತಿ ಚುನಾಯಿತ ಸದಸ್ಯರು, ಶಾಲಾ ಶಿಕ್ಷಕರು,ಮಕ್ಕಳು, ಗ್ರಾಮಸ್ಥರು ಹಾಜರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 22, 2026

ಡಾ.ಸುರೇಖಾ ರಾಠೋಡ ಗೆ “ಸಾಹಿತ್ಯ ರತ್ನ” ಪ್ರಶಸ್ತಿ ಪ್ರದಾನ

ಯುಕೆಪಿ ಎಂ.ಡಿ. ಕಚೇರಿಯ ಕಂಪ್ಯೂಟರ್ ಜಪ್ತಿ!

ದೋಷರಹಿತ ಮತದಾರರ ಪಟ್ಟಿಗೆ ರಾಜಕೀಯಪಕ್ಷಗಳ ಸಹಕಾರ ಅಗತ್ಯ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 22, 2026
    In ದಿನಪತ್ರಿಕೆ
  • ಡಾ.ಸುರೇಖಾ ರಾಠೋಡ ಗೆ “ಸಾಹಿತ್ಯ ರತ್ನ” ಪ್ರಶಸ್ತಿ ಪ್ರದಾನ
    In (ರಾಜ್ಯ ) ಜಿಲ್ಲೆ
  • ಯುಕೆಪಿ ಎಂ.ಡಿ. ಕಚೇರಿಯ ಕಂಪ್ಯೂಟರ್ ಜಪ್ತಿ!
    In (ರಾಜ್ಯ ) ಜಿಲ್ಲೆ
  • ದೋಷರಹಿತ ಮತದಾರರ ಪಟ್ಟಿಗೆ ರಾಜಕೀಯಪಕ್ಷಗಳ ಸಹಕಾರ ಅಗತ್ಯ
    In (ರಾಜ್ಯ ) ಜಿಲ್ಲೆ
  • ಆಲಮಟ್ಟಿ ಉದ್ಯಾನಗಳಿಗೆ ಶಾಲಾ ಮಕ್ಕಳಿಗೆ ಉಚಿತ ಪ್ರವೇಶಕ್ಕೆ ಮನವಿ
    In (ರಾಜ್ಯ ) ಜಿಲ್ಲೆ
  • ಆಲಮಟ್ಟಿ ಎತ್ತರ ಹೆಚ್ಚಳ ೩ ವರ್ಷದಲ್ಲಿ ಪೂರ್ಣಗೊಳಿಸಲು ಬದ್ಧ
    In (ರಾಜ್ಯ ) ಜಿಲ್ಲೆ
  • ೧ ರಿಂದ ೫ ವರೆಗೆ ಶಿಕ್ಷಣ ಕಡ್ಡಾಯವಾಗಿ ಮಾತೃಭಾಷೆಯಲ್ಲಿರಲಿ
    In (ರಾಜ್ಯ ) ಜಿಲ್ಲೆ
  • 21ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ ಹ.ಮ.ಪೂಜಾರ
    In ವಿಶೇಷ ಲೇಖನ
  • ಶೇ.೭೭.೬೮ ರಷ್ಟು ಮತದಾರರ ಮ್ಯಾಪಿಂಗ್ ಪೂರ್ಣ
    In (ರಾಜ್ಯ ) ಜಿಲ್ಲೆ
  • ಮಾದಕ ವಸ್ತುಗಳಿಂದ ಶರೀರದ ಮೇಲೆ ನೇರ ಪರಿಣಾಮ :ಪಿಎಸೈ ಸಚೀನ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.